ಹಿರಿಯ ಅಧಿಕಾರಿಗಳ ವಿರುದ್ಧ ಕೇಸ್‌


Team Udayavani, Feb 5, 2020, 3:10 AM IST

hiriya

ಬೆಂಗಳೂರು: ಬಹುಕೋಟಿ ಐ ಮಾನಿಟರಿ ಅಡ್ವೈಸರಿ(ಐಎಂಎ) ವಂಚನೆ ಪ್ರಕರಣದಲ್ಲಿ ರಾಜ್ಯದ ಇಬ್ಬರು ಹಿರಿಯ ಐಪಿಎಸ್‌ ಅಧಿಕಾರಿಗಳಾದ ಬೆಂಗಳೂರು ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌, ಕೆಎಸ್‌ಆರ್‌ಪಿ ಕಮಾಂಡೆಂಟ್‌ ಅಜಯ್‌ ಹಿಲ್ಲೋರಿ ಸೇರಿ ಒಂಭತ್ತು ಮಂದಿ ಮತ್ತು ಐಎಂಎ ಕಂಪನಿ ಹಾಗೂ ಇತರರ ವಿರುದ್ಧ ಬೆಂಗಳೂರಿನ ಸಿಬಿಐ(ಭ್ರಷ್ಟಾಚಾರ ನಿಗ್ರಹ ದಳ) ಭ್ರಷ್ಟಾಚಾರ ಹಾಗೂ ಅಪರಾಧ ಒಳ ಸಂಚು ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.

ಪ್ರಕರಣ ಸಂದರ್ಭದಲ್ಲಿ ಎ1(ಮೊದಲ ಆರೋಪಿ) ಕಮರ್ಷಿಯಲ್‌ ಸ್ಟ್ರೀಟ್‌ ಠಾಣೆ ಇನ್‌ಸ್ಪೆಕ್ಟರ್‌ ಆಗಿದ್ದ ಎಂ.ರಮೇಶ್‌, ಎ2 ಪೂರ್ವ ವಿಭಾಗದ ಡಿಸಿಪಿಯಾಗಿದ್ದ ಐಪಿಎಸ್‌ ಅಧಿಕಾರಿ ಅಜಯ್‌ ಹಿಲ್ಲೋರಿ, ಎ3 ಕಮರ್ಷಿಯಲ್‌ ಸ್ಟ್ರೀಟ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಆಗಿದ್ದ ಗೌರಿಶಂಕರ್‌, ಎ4 ಸಿಐಡಿ ಆರ್ಥಿಕ ಅಪ ರಾಧಗಳ ವಿಭಾಗದ ಡಿವೈಎಸ್ಪಿಯಾಗಿದ್ದ ಇ.ಬಿ. ಶ್ರೀಧರ್‌, ಎ5 ಸಿಐಡಿ ಆರ್ಥಿಕ ಅಪರಾಧ ವಿಭಾಗದ ಐಜಿಪಿಯಾಗಿದ್ದ ಹೇಮಂತ್‌ ನಿಂಬಾಳ್ಕರ್‌, ಎ6 ಪ್ರಕರಣದ ಮಾಸ್ಟರ್‌ ಮೈಂಡ್‌, ಐಎಂಎ ಮುಖ್ಯಸ್ಥ ಮೊಹಮ್ಮದ್‌ ಮನ್ಸೂರ್‌ ಖಾನ್‌, ಎ7 ನಿರ್ದೇಶಕ ನಿಜಾವುದ್ದೀನ್‌, ಎ8 ನಿರ್ದೇಶಕ ವಸೀಂ, ಎ9 ಅಶ್ರದ್‌ ಖಾನ್‌, ಎ10 ಐಎಂಎ ಸಂಸ್ಥೆ ಮತ್ತು ಎ11 ಸರ್ಕಾರದ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಅಧಿಕ ಬಡ್ಡಿ ಹಾಗೂ ಇತರೆ ಆಮಿಷಗಳನ್ನೊಡ್ಡಿ ಸಾವಿರಾರು ಮಂದಿಯಿಂದ ಸುಮಾರು ನಾಲ್ಕು ಸಾವಿರ ಕೋಟಿ ರೂ. ಸಂಗ್ರಹಿಸಿ ವಂಚಿಸಿದ ಪ್ರಕರಣ ಸಂಬಂಧ ಆರಂಭದಲ್ಲಿ ಡಾ ಬಿ.ಆರ್‌.ರವಿಕಾಂತೇಗೌಡ ನೇತೃತ್ವದ ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆ ನಡೆಸಿ ಮನ್ಸೂರ್‌ ಖಾನ್‌, ನಿರ್ದೇಶಕರು, ಮೌಲ್ವಿಗಳು, ಮಧ್ಯವರ್ತಿಗಳು ಹಾಗೂ ಒಬ್ಬರು ಐಎಎಸ್‌ ಅಧಿಕಾರಿಗಳು, ಉಪವಿಭಾಗಾಧಿಕಾರಿ ಸೇರಿ ಸುಮಾರು 25ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿತ್ತು. ಜತೆಗೆ ಸಂಸ್ಥೆ ಹಾಗೂ ಅದರ ಅಂಗ ಸಂಸ್ಥೆಯಲ್ಲಿರುವ ವಸ್ತುಗಳು ಹಾಗೂ ಕೋಟ್ಯಂತರ ರೂ. ನಗದು ವಶಕ್ಕೆ ಪಡೆದುಕೊಂಡಿತ್ತು. ಬಳಿಕ ಪ್ರಕರಣವನ್ನು ಸರ್ಕಾರ ಪ್ರಕರಣದ ಹೆಚ್ಚಿನ ತನಿಖೆಗೆ ಸಿಬಿಐಗೆ ವಹಿಸಿತ್ತು.

ಈ ಸಂಬಂಧ ತನಿಖೆ ಚುರುಕುಗೊಳಿಸಿದ್ದ ಸಿಬಿಐ ಅಧಿಕಾರಿಗಳು ಎಸ್‌ಐಟಿ ತನಿಖಾ ವರದಿಯನ್ನಾಧರಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಕೂಡ ಸಲ್ಲಿಸಿತ್ತು. ಬಳಿಕ ಐಎಂಎ ಮುಖ್ಯಸ್ಥ ಮನ್ಸೂರ್‌ ಖಾನ್‌ನ ಅವ್ಯವಹಾರ ಹಾಗೂ ಅಕ್ರಮ ಹಣ ಸಂಗ್ರಹಕ್ಕೆ ಐಜಿಪಿ ಹೇಮಂತ್‌ ನಿಂಬಾಳ್ಕರ್‌ ಮತ್ತು ಡಿಸಿಪಿ ಅಜಯ್‌ ಹಿಲ್ಲೋರಿ ಹಾಗೂ ಇತರೆ ಪೊಲೀಸ್‌ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಸಹಾಯ ಮಾಡಿದ್ದಾರೆ ಎಂಬ ಗಂಭೀರ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದೀಗ ಸರ್ಕಾರ ಅನುಮತಿ ನೀಡಿದ ಮೇರೆಗೆ ಸಿಬಿಐ ಫೆ.1ರಂದು ಎಲ್ಲ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಅಪರಾಧ ಒಳಸಂಚು ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ಆರೋಪ ಏನು?: ಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಅಕ್ರಮವಾಗಿ ಹಣ ಹೂಡಿಕೆ ಮಾಡುತ್ತಿರುವ ಐಎಂಎ ಕಂಪನಿಯ ಬಗ್ಗೆ 2016ರಲ್ಲಿ ಆರ್‌ಬಿಐ ಬಗ್ಗೆ ನಿಗಾ ವಹಿ ಸುವಂತೆ ರಾಜ್ಯ ಪೊಲೀಸ್‌ ಮಹಾ ನಿರ್ದೇ ಶಕರಿಗೆ ಸೂಚಿಸಿತ್ತು. ಆಗ ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಅಜಯ್‌ ಹಿಲ್ಲೋರಿ ಮೂಲಕ ಇನ್‌ಸ್ಪೆಕ್ಟರ್‌ ರಮೇಶ್‌ಗೆ ಪತ್ರದ ಮೂಲಕವೇ ಸೂಚಿಸ ಲಾಗಿತ್ತು. ಆದರೆ, ಸೂಕ್ತ ತನಿಖೆ ನಡೆಸದೆ 2016ರ ಆ. 29ರಂದು ಪ್ರಕರಣವನ್ನು ಮುಕ್ತಗೊಳಿಸಿದ್ದರು. ಐಎಂಎ ಕಂಪನಿ ನಿಯಮ ಪ್ರಕಾರವೇ ವ್ಯವಹಾರ ನಡೆಸುತ್ತಿದೆ. ಯಾವುದೇ ಹೂಡಿಕೆದಾರ ದೂರು ನೀಡದೇ ಇರುವುದರಿಂದ ಕರ್ನಾಟಕ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಕಾಯ್ದೆಯಡಿ (ಕೆಪಿಐಡಿ) ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದು ರಮೇಶ್‌ ವರದಿ ನೀಡಿದ್ದರು ಎಂದು ಸಿಬಿಐ ಎಫ್ಐಆರ್‌ನಲ್ಲಿ ತಿಳಿಸಿದೆ.

ಆದರೆ, ಈ ವರದಿ ತಿರಸ್ಕರಿಸಿದ ಆರ್‌ಬಿಐ ನೇರವಾಗಿ ಕಂದಾಯ ಇಲಾಖೆಗೆ ಪತ್ರ ಬರೆದು ಮತ್ತೂಮ್ಮೆ ಪರಿಶೀಲಿಸುವಂತೆ ಸೂಚಿಸಿತ್ತು. ಈ ಮಧ್ಯೆ ಐಎಂಎ ಕಂಪನಿ ವಿರುದ್ಧ ದೂರುಗಳು ಬಂದಿದ್ದು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪೊಲೀಸ್‌ ತನಿಖೆಗೆ ಸೂಚಿಸಿದ್ದರು. ಆದರೆ, ಪಿಐ ರಮೇಶ್‌, ಪಿಎಸ್‌ಐ ಗೌರಿಶಂಕರ್‌ ಮತ್ತು ಡಿಸಿಪಿ ಅಜಯ್‌ ಹಿಲ್ಲೋರಿ ಕ್ರಮ ತೆಗೆದುಕೊಳ್ಳದೆ ಪ್ರಕರಣ ಮುಚ್ಚಿ ಹಾಕಿದ್ದರು. ಮನ್ಸೂರ್‌ ಖಾನ್‌ನ ಆಮಿಷಕ್ಕೊಳಗಾಗಿ ಆತನ ಪರವಾಗಿ ವರದಿ ಸಲ್ಲಿಸಿದ್ದರು. ಈ ಮೂವರು ಅಧಿಕಾರಿಗಳು ಒಳಚಂಚು ರೂಪಿಸಿ, ಐಎಂಎ ಕಂಪನಿಗೆ ಲಾಭ ಮಾಡಿಕೊಟ್ಟಿದ್ದಾರೆ ಎಂದು ಸಿಬಿಐ ಹೇಳಿದೆ.

ಮೌಲ್ಯಯುತ ವಸ್ತು ಸ್ವೀಕಾರ ಆರೋಪ: ಠೇವಣಿದಾರರ ಸಂರಕ್ಷಣಾ ಕಾಯ್ದೆಯಡಿ ಐಎಂಎ ಕಂಪನಿಯ ವ್ಯವಹಾರಗಳನ್ನು ತನಿಖೆ ನಡೆಸುವಂತೆ 2018ರ ಜುಲೈ 4ರಂದು ಸರ್ಕಾರ ಸಿಐಡಿ ಆರ್ಥಿಕ ಅಪರಾಧಗಳ ವಿಭಾಗಕ್ಕೆ ವಹಿಸಿತ್ತು. ಆಗ ಈ ವಿಭಾಗದ ಐಜಿಪಿಯಾಗಿದ್ದ ಹೇಮಂತ್‌ ನಿಂಬಾಳ್ಕರ್‌ ಮತ್ತು ಡಿವೈಎಸ್ಪಿ ಇ.ಬಿ. ಶ್ರೀಧರ್‌ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿತ್ತು. ಅವರು 2019ರ ಜ. 1ರಂದು ಕಂಪನಿ ಯಾವುದೇ ಅವ್ಯವಹಾರದಲ್ಲಿ ತೊಡಗಿಲ್ಲ. ಕಾನೂನು ಬದ್ಧವಾಗಿಯೇ ಹಣ ಸಂಗ್ರಹಿಸುತ್ತಿದೆ ಎಂದು ಕಂಪನಿಯ ಪರವಾಗಿ ವರದಿ ಸಿದ್ದಪಡಿಸಿ 2019ರ ಜ. 18ರಂದು ಸಲ್ಲಿಸಿದ್ದರು. ಅಧಿಕಾರಿಗಳು ಲಂಚ ಹಾಗೂ ಮೌಲ್ಯಯುತ ವಸ್ತುಗಳನ್ನು ಸ್ವೀಕರಿಸಿದ್ದಾರೆ ಎಂಬ ಆರೋಪ ಸಿಬಿಐ ಮಾಡಿದೆ.

ಲಂಚದ ಬಗ್ಗೆ ಮನ್ಸೂರ್‌ ಹೇಳಿಕೆ: ಈ ಮಧ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮನ್ಸೂರ್‌ ಖಾನ್‌ ಸಿಬಿಐ ವಿಚಾರಣೆ ಸಂದರ್ಭದಲ್ಲಿ ತನ್ನ ಪರವಾಗಿ ವರದಿ ನೀಡುವಂತೆ ತನಿಖಾಧಿಕಾರಿಗಳು ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಕೋಟ್ಯಂತರ ರೂ. ಲಂಚ ನೀಡಿರುವುದಾಗಿ ಹೇಳಿಕೆ ನೀಡಿದ್ದ. ಈ ಎಲ್ಲ ಮಾಹಿತಿ ಆಧರಿಸಿ ಐಪಿಎಸ್‌ ಅಧಿಕಾರಿಗಳು ಸೇರಿ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.