ಪತ್ನಿ ಪ್ರಜ್ಞೆ ತಪ್ಪಿಸಿ ನಗ್ನ ಚಿತ್ರ ಸೆರೆಯಿಡಿದು ಸ್ನೇಹಿತರಿಗೆ ಕಳುಹಿಸಿದ ಪತಿ:ಕೇಸ್ ದಾಖಲು
Team Udayavani, Apr 18, 2022, 1:07 PM IST
ಬೆಂಗಳೂರು: ಜ್ಯೂಸ್ನಲ್ಲಿ ಮತ್ತು ಬರುವ ಪದಾರ್ಥ ಹಾಕಿ ಪತ್ನಿಗೆ ನೀಡಿ ಆಕೆ ಪ್ರಜ್ಞೆ ತಪ್ಪಿದ ಬಳಿಕ ನಗ್ನ ಚಿತ್ರ ಸೆರೆಹಿಡಿದು ಅದನ್ನು ಸ್ನೇಹಿತರಿಗೆ ಕಳುಹಿಸಿದ ಪತಿ ವಿರುದ್ಧ ಬಸವನಗುಡಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನಕಪುರ ರಸ್ತೆಯ ನಿವಾಸಿ 30 ವರ್ಷದ ಮಹಿಳೆ ನೀಡಿರುವ ದೂರಿನ ಆಧಾರದಲ್ಲಿ ಆಕೆ ಪತಿ ವೆಂಕಟಸ್ವಾಮಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಬಾಲಕಿಯರೊಂದಿಗೆ ಅಶ್ಲೀಲವಾಗಿ ವರ್ತಿಸಿ ಲೈಂಗಿಕ ಕ್ರಿಯೆಗೆ ಪ್ರಚೋದನೆ ನೀಡುತ್ತಿದ್ದವ ಜೈಲಿಗೆ
ದೂರುದಾರ ಮಹಿಳೆ 2013ರಲ್ಲಿ ಮೊದಲ ಪತಿಗೆ ವಿಚ್ಛೇದನ ನೀಡಿದ್ದು, ವೆಂಕಟಸ್ವಾಮಿಯನ್ನು ಪ್ರೀತಿಸಿ 2ನೇ ವಿವಾಹವಾಗಿದ್ದಳು. ವಿವಾಹವಾದ ಆರಂಭದಲ್ಲಿ ಪತ್ನಿ ಜತೆಗೆ ಅನ್ಯೋನ್ಯವಾಗಿದ್ದ ಪತಿ, ನಂತರ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ಇತ್ತೀಚೆಗೆ ಆರೋಪಿಯು ಜ್ಯೂಸ್ನಲ್ಲಿ ಮತ್ತು ಬರುವ ಪದಾರ್ಥ ಬೆರೆಸಿ ಪತ್ನಿಗೆ ಕೊಟ್ಟಿದ್ದ. ಪತ್ನಿ ಪ್ರಜ್ಞೆ ತಪ್ಪಿದ ನಂತರ ಆಕೆಯ ನಗ್ನ ಚಿತ್ರ ಸೆರೆ ಹಿಡಿದು ಸ್ನೇಹಿತರಿಗೆ ಕಳುಹಿಸಿದ್ದ ಎಂದು ದೂರಿನಲ್ಲಿ ಉಲ್ಲೇಖೀಸಲಾಗಿದೆ.
ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಸ್ನೇಹಿತನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಪತ್ನಿಗೆ ಪೀಡಿಸುತ್ತಿದ್ದ. ಇದರ ಜೊತೆಗೆ ಮಹಿಳೆಯ ತಂದೆಯು ಇತ್ತೀಚೆಗೆ ಮೃತಪಟ್ಟಿದ್ದರು. ತಂದೆಗೆ ಬರುತ್ತಿದ್ದ ಪಿಂಚಣಿ ಹಣವನ್ನು ಕೂಡ ನೀಡುವಂತೆ ಪತಿ ಹಿಂಸಿಸುತ್ತಿದ್ದ. ಹಣ ನೀಡಲು ನಿರಾಕರಿಸಿದಾಗ ನಗ್ನ ಚಿತ್ರವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.