ಕಾವೇರಿ: ಆಗಸ್ಟ್‌ 14ಕ್ಕೆ ಸರ್ವಪಕ್ಷ ಗಳ ಸಭೆ


Team Udayavani, Aug 5, 2017, 6:15 AM IST

170804kpn62.jpg

ಬೆಂಗಳೂರು: ಕಾವೇರಿ ಕಣಿವೆ ಪ್ರದೇಶದಲ್ಲಿ ಈ ವರ್ಷವೂ ಮಳೆ ಕಡಿಮೆಯಾಗಿರುವುದರಿಂದ ರೈತರ ಬೆಳೆಗೆ ನೀರು ಬಿಡುವ ಕುರಿತು ಚರ್ಚಿಸಲು ಆಗಸ್ಟ್‌ 14ರಂದು ಸರ್ವ ಪಕ್ಷ ಸಭೆ ಕರೆಯಲು ಸರ್ಕಾರ ತೀರ್ಮಾನಿಸಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾವೇರಿ ಜಲಾನಯನ ಪ್ರದೇಶದ ಸಚಿವರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.

ಕಾವೇರಿ ಕೊಳ್ಳದ ರೈತರು ಬೆಳೆಗಳಿಗೆ ನೀರು ಬಿಡುವಂತೆ ಪ್ರತಿಭಟನೆ ನಡೆಸುತ್ತಿರುವುದರಿಂದ ಅಗತ್ಯವಿದ್ದಷ್ಟು ನೀರಿನ ಸಂಗ್ರಹವಾಗದ ಹಿನ್ನೆಲೆಯಲ್ಲಿ ಸರ್ಕಾರ ಏಕಾಏಕಿ ನಿರ್ಧಾರ ತೆಗೆದುಕೊಳ್ಳುವ ಬದಲು ಸರ್ವ ಪಕ್ಷದ ಸಭೆಯಲ್ಲಿ ಚರ್ಚಿಸಿ ತೀರ್ಮಾನಕ್ಕೆ ಬರಲು ನಿರ್ಧರಿಸಿದೆ. ಕಾವೇರಿ ಕೊಳ್ಳದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆ ಕೂಡ ಆಗಸ್ಟ್‌ ತಿಂಗಳಲ್ಲಿ ಉತ್ತಮ ಮಳೆಯಾಗುವುದಾಗಿ ಮುನ್ಸೂಚನೆ ನೀಡಿರುವ ಕಾರಣ ಒಂದು ವಾರ ಕಾದು ನೋಡಿ ತೀರ್ಮಾನಕ್ಕೆ ಬರಲು ಶುಕ್ರವಾರದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದರು.

ಕಾ‌ವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಇದುವರೆಗೂ 43 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 9 ಟಿಎಂಸಿ ನೀರು ಕಡಿಮೆ ಬಂದಿದೆ. ಸಾಮಾನ್ಯ ಮಳೆ ವರ್ಷದಲ್ಲಿ ನಾಲ್ಕು ಜಲಾಶಯಗಳಲ್ಲಿ ಆಗಸ್ಟ್‌ ಆರಂಭಕ್ಕೆ 122 ಟಿಎಂಸಿ ನೀರು ಸಂಗ್ರಹವಾಗುತ್ತಿತ್ತು. ಇದುವರೆಗೂ ತಮಿಳುನಾಡಿಗೆ 9 ಟಿಎಂಸಿ ನೀರು ಬಿಡಲಾಗಿದೆ. ಸಂಕಷ್ಟ ಸೂತ್ರದಂತೆ ತಮಿಳುನಾಡಿಗೆ ಆಗಸ್ಟ್‌ ಮೊದಲ ವಾರಕ್ಕೆ 20 ಟಿಎಂಸಿ ನೀರು ಬಿಡಬೇಕಿತ್ತು. ನಮ್ಮ ಜಲಾಶಯಗಳಲ್ಲಿ ನೀರು ಬಾರದ ಕಾರಣ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಾಗಿಲ್ಲ. ಈಗ ನೀರಿನ ಒಳ ಹರಿವಿನ ಪ್ರಮಾಣ ನೋಡಿಕೊಂಡು ಪ್ರತಿ ದಿನ 700ರಿಂದ 800 ಕ್ಯೂಸೆಕ್‌ ನೀರು ತಮಿಳುನಾಡಿಗೆ ಬಿಡಲಾಗುತ್ತಿದೆ ಎಂದು ಹೇಳಿದರು.

ಹೇಮಾವತಿಯಿಂದ ಕುಡಿಯಲು ನೀರು
ಹೇಮಾವತಿ ಜಲಾಶಯದಿಂದ ಹೈ ಲೆವೆಲ್‌ ಕೆನಾಲ್‌ಗ‌ಳಿಗೆ ಜನ ಜಾನುವಾರುಗಳಿಗೆ ಕುಡಿಯಲು ನೀರು ಬಿಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಎಂ.ಬಿ.ಪಾಟೀಲ್‌ ಹೇಳಿದರು. ಹತ್ತು ದಿನಗಳ ವರೆಗೆ ಒಂದು ಟಿಎಂಸಿ ನೀರು ಹರಿಸಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಆ ನೀರನ್ನು ರೈತರು ಬೆಳೆಗಳಿಗೆ ಬಳಸಿಕೊಳ್ಳುವಂತಿಲ್ಲ. ಜನರು ಮತ್ತು ಪ್ರಾಣಿಗಳಿಗೆ ಕುಡಿಯುವ ನೀರಿನ ತೀವ್ರ ತೊಂದರೆ ಇದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಕೂಡ ವಸ್ತು ಸ್ಥಿತಿಯನ್ನು ಸಭೆಯ ಗಮನಕ್ಕೆ ತಂದಿದ್ದಾರೆ. ಅವರ ಮನವಿಯ ಹಿನ್ನೆಲೆಯಲ್ಲಿ 10 ದಿನಗಳಿಗೆ ಮಾತ್ರ ಕುಡಿಯಲು ನೀರು ಹರಿಸಲಾಗುವುದು ಎಂದು ಎಂ.ಬಿ. ಪಾಟೀಲ್‌ ತಿಳಿಸಿದರು.ನಾಲ್ಕು ಜಲಾಶಯಗಳ ಸದ್ಯದ ಸ್ಥಿತಿ 43 ಟಿಎಂಸಿ ನೀರು ಸಂಗ್ರಹ ಆಗಸ್ಟ್‌ ಮೊದಲ ವಾರಕ್ಕೆ 122 ಟಿಎಂಸಿ ಸಂಗ್ರಹವಾಗಬೇಕಿತ್ತು.

ತಮಿಳುನಾಡಿಗೆ 9 ಟಿಎಂಸಿ ನೀರು ಹರಿಸಲಾಗಿದೆ. ಪ್ರತಿ ದಿನ 700-800 ಕ್ಯೂಸೆಕ್‌ ನೀರು ತಮಿಳುನಾಡಿಗೆ ಆಗಸ್ಟ್‌ 14 ರ ವರೆಗೂ ಮಂಡ್ಯ ರೈತರಿಗೆ ನೀರು ಬಿಡುವುದಿಲ್ಲ. ಆಗಸ್ಟ್‌ 9 ಕ್ಕೆ ಮಂಡ್ಯ ರೈತರು ಮತ್ತು ಜನಪ್ರತಿನಿಧಿಗಳೊಂದಿಗೆ ಸಭೆ.

ಟಾಪ್ ನ್ಯೂಸ್

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

3-alur

Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.