ಕಾವೇರಿ ಮಂಡಳಿಗೆ ಆಗ್ರಹಿಸಿ ಮತ್ತಷ್ಟು ಉಗ್ರ ಹೋರಾಟ
Team Udayavani, Apr 17, 2018, 5:25 AM IST
ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿ (ಸಿಎಂಡಿ)ರಚನೆಗೆ ಒತ್ತಾಯಿಸಿ ಕಳೆದ ವಾರ ಚೆನ್ನೈನಲ್ಲಿ ನಡೆಯಬೇಕಿದ್ದ ಐಪಿಎಲ್ ಪಂದ್ಯಗಳು ಸ್ಥಳಾಂತರಗೊಳ್ಳುವಂತೆ ಮಾಡಿದ್ದ ತಮಿಳು ಹೋರಾಟಗಾರರು, ಮುಂಬರುವ ದಿನಗಳಲ್ಲಿ ಮರೀನಾ ಬೀಚ್‌ನಲ್ಲಿ ಮತ್ತಷ್ಟು ಉಗ್ರ ಪ್ರತಿಭಟನೆ ನಡೆಸುವುದಾಗಿ ಹೇಳಿವೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ತಮಿಳಗ ವಳ್ವರಿಮೈ ಕಚ್ಚಿ (ಟಿವಿಕೆ) ಮುಖ್ಯಸ್ಥ ಟಿ. ವೇಲ್ ಮುರುಗನ್, ಸಿಎಂಜಿ ರಚನೆ ಬಗ್ಗೆ ಕೇಂದ್ರ ಸರ್ಕಾರ ತುರ್ತು ನಿರ್ಧಾರ ಕೈಗೊಳ್ಳದಿದ್ದರೆ ತಮಿಳುನಾಡಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೇದಾಂತ ರಿಸೋರ್ಸಸ್ ಹಾಗೂ ದಕ್ಷಿಣ ರೈಲ್ವೆಗೆ ನೀಡಲಾಗಿರುವ ನೀರಿನ ಸಂಪರ್ಕವನ್ನು ಕಡಿತಗೊ ಳಿಸುವುದಾಗಿ ತಿಳಿಸಿದ್ದಾರೆ.
ಕಳೆದ ವರ್ಷ, ಜಲ್ಲಿಕಟ್ಟು ಕ್ರೀಡೆಗೆ ಆಗ್ರಹಿಸಿ ಮರೀನಾ ಬೀಚ್‌ನಲ್ಲೇ ನಡೆದಿದ್ದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಅಲ್ಲಿ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ. ಆದರೂ, ಅಲ್ಲೇ ಪ್ರತಿಭಟನೆ ಮಾಡುವುದಾಗಿ ವೇಲ್ ಮುರುಗನ್ ತಿಳಿಸಿದ್ದಾರೆ. ತೂತುಕುಡಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೇದಾಂತ ಕಾರ್ಖಾನೆ ಯಿಂದಾಗಿ ಸುತ್ತಲಿನ ಜನರಿಗೆ ಅನೇಕ ಆರೋಗ್ಯ ತೊಂದರೆಗಳು ಕಾಣಿಸಿಕೊಂಡಿವೆ ಎಂದ ಅವರು, ಇದೇ ವಿಷಯವನ್ನು ಪ್ರಧಾನವಾಗಿಟ್ಟುಕೊಂಡು ಮರೀನಾ ಬೀಚ್‌ನಲ್ಲಿ ಬೃಹತ್ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.