ಜೇಬಿಗೆ ಹೊರೆಯಾಗಲಿದೆ ಕಾವೇರಿ ನೀರಿನ ದರ!
Team Udayavani, May 12, 2019, 3:06 AM IST
ಬೆಂಗಳೂರು: ಐದು ವರ್ಷಗಳ ನಂತರ ಜಲಮಂಡಳಿ ನೀರಿನ ದರ ಪರಿಷ್ಕರಣೆಗೆ ಮುಂದಾಗಿದೆ. ಈ ಕುರಿತು ತಜ್ಞರೊಂದಿಗೆ ಸಭೆ ನಡೆಸಿ ಪ್ರಸ್ತಾವನೆ ಸಿದ್ಧಪಡಿಸಿದ್ದು, ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಿದೆ.
ಬೇಸಿಗೆ ಹಿನ್ನೆಲೆಯಲ್ಲಿ ನಗರದ ಕೆಲ ಭಾಗಗಳಲ್ಲಿ ಸಾರ್ವಜನಿಕರು ನೀರಿಗೆ ಪರದಾಡುತ್ತಿದ್ದಾರೆ. ಈ ನಡುವೆ ಕಾವೇರಿ ನೀರಿನ ದರವನ್ನು ಶೇ.10ರಿಂದ 15ರಷ್ಟು ಏರಿಸಲು ಜಲಮಂಡಳಿ ಸಿದ್ಧತೆಯಲ್ಲಿದ್ದು, ನಗರ ನಿವಾಸಿಗಳಿಗೆ ನೀರು ಹೊರೆಯಾಗಲಿದೆ.
ನಗರದ 10 ಲಕ್ಷಕ್ಕೂ ಹೆಚ್ಚು ಸಂಪರ್ಕಗಳಿಗೆ, ನಿತ್ಯ 1,400 ದಶಲಕ್ಷ ಲೀ. ನೀರು ಹರಿಸುತ್ತಿರುವ ಜಲಮಂಡಳಿಗೆ ಕಾಲ ಕಳೆದಂತೆ ನಿರ್ವಹಣೆ ವೆಚ್ಚ ದುಬಾರಿ ಆಗುತ್ತಿದೆ. ಅಲ್ಲದೆ, ಭವಿಷ್ಯದ ದೃಷ್ಟಿಯಿಂದ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ಸಹ ನಡೆಯುತ್ತಿದ್ದು, ವಿದ್ಯತ್ ದರ, ಆಸ್ತಿ ತೆರಿಗೆ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಅಗತ್ಯವಿದೆ ಎಂಬುದು ಜಲಮಂಡಳಿ ಅಧಿಕಾರಿಗಳ ಅಭಿಪ್ರಾಯ.
2014ರಲ್ಲಿ ನೀರಿನ ದರ ಪರಿಷ್ಕರಣೆ ವೇಳೆ ಅಪಾರ್ಟ್‌ಮೆಂಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಸತಿಗೃಹಗಳು, ವಿಲ್ಲಾಗಳಿಗೆ ದುಪ್ಪಟ್ಟು ದರ ಏರಿಕೆ ಮಾಡಿ ಜಲಮಂಡಳಿ ಆಘಾತ ನೀಡಿತ್ತು. ಈ ಬಾರಿ ಪ್ರಸ್ತಾವನೆಯಲ್ಲಿ ಅಂತಹ ಯಾವುದೇ ಅಂಶಗಳಿಲ್ಲ. ಜನಸಾಮಾನ್ಯರಿಗೆ ಹೊರೆಯಾಗದಂತೆ ಈ ಕ್ರಮಕ್ಕೆ ಮುಂದಾಗಿದ್ದೇವೆ ಎನ್ನುತ್ತಾರೆ ಜಲಮಂಡಳಿ ಅಧಿಕಾರಿಗಳು.
ಸದ್ಯ ಜಲಮಂಡಳಿಗೆ ಪ್ರತಿ ತಿಂಗಳು ವಸತಿ ನಿಲಯಗಳಲ್ಲಿ 0 -8,000 ಲೀ. ನೀರಿನ ಬಳಕೆದಾರರಿಗೆ ಪ್ರತಿ ಸಾವಿರ ಲೀ.ಗೆ 7 ರೂ., 8,000 -25,000 ಲೀ. ನೀರಿನ ಬಳಕೆದಾರರಿಗೆ ಪ್ರತಿ ಸಾವಿರ ಲೀ.ಗೆ 11 ರೂ., 25,001-50,000 ಲೀ. ಬಳಕೆದಾರರಿಗೆ ಪ್ರತಿ ಸಾವಿರ ಲೀ.ಗೆ 26 ರೂ., 50,000 ಕ್ಕಿಂತ ಹೆಚ್ಚಿನ ಬಳಕೆಗೆ ಪ್ರತಿ ಸಾವಿರ ಲೀ.ಗೆ 45 ರೂ., ದರ ವಿಧಿಸುತ್ತಿದೆ.
ಒಳಚರಂಡಿ ಶುಲ್ಕ 0 -8,000 ಲೀ, ನೀರಿನ ಬಳಕೆದಾರರಿಗೆ 14 ರೂ, ಅದಕ್ಕಿಂತ ಹೆಚ್ಚಿನ ನೀರು ಬಳಸುವವರಿಗೆ ಬಳಕೆಯಾಗುವ ನೀರಿನ ದರದ ಶೇ.25ರಷ್ಟು ದರ ವಿಧಿಸಲಾಗುತ್ತಿದೆ. ಇದಲ್ಲದೇ ವಸತಿಯೇತರ ಕಟ್ಟಡಗಳಿಗೆ 0 -10,000 ಲೀ. ನೀರಿನ ಬಳಕೆದಾರರಿಗೆ ಪ್ರತಿ ಸಾವಿರ ಲೀ.ಗೆ 50 ರೂ. ನಿಂದ ಆರಂಭವಾಗುತ್ತದೆ. ಇನ್ನು ಸಗಟು ಗ್ರಾಹಕರಿಗೆ ಎಲ್ಲರಿಗಿಂತ ಹೆಚ್ಚು ದರ ವಿಧಿಸಲಾಗುತ್ತದೆ. ಪ್ರಸ್ತುತ ದರ ಪರಿಷ್ಕರಣೆಯಿಂದ ಈ ದರಗಳಲ್ಲಿ ಶೇ.10ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.