ಸುರಕ್ಷತೆಗೆ 400 ಕಡೆ ಸಿಸಿ ಟಿವಿ ಅಳವಡಿಕೆ
Team Udayavani, May 8, 2018, 12:31 PM IST
ಬೆಂಗಳೂರು: ಗೋವಿಂದರಾಜನಗರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಸೋಮವಾರ ನಾಗರಬಾವಿ ವಾರ್ಡ್‌ನಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ಕಾಂಗ್ರೆಸ್‌ನ ಪಾಲಿಕೆ ಸದಸ್ಯರು, ಕಾರ್ಯಕರ್ತರು ಹಾಗೂ ಮುಖಂಡರ ಜತೆಗೂಡಿ ಪಾದಯಾತ್ರೆ ನಡೆಸಿದ ಅವರು, ಮತ್ತೂಮ್ಮೆ ಆಶೀರ್ವಾದ ನೀಡುವಂತೆ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಒಂಬತ್ತು ವರ್ಷಗಳಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ನಿರ್ಮಾಣ ಯೋಜನೆಯಡಿ 2233 ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಒಂಟಿ ಮನೆ ಯೋಜನೆಯಡಿ 107 ಕೋಟಿ ರೂ. ವೆಚ್ಚದಲ್ಲಿ 2156 ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಡಲಾಗಿದೆ.
15 ಕೋಟಿ ರೂ. ವೆಚ್ಚದಲ್ಲಿ ಗೋವಿಂದರಾಜನಗರ ಹಂತ -1 ಮತ್ತು ಹಂತ-2, ಕನಕನಗರ, ಅಗ್ರಹಾರ ದಾಸರಹಳ್ಳಿ, ಗಂಗೊಂಡನಹಳ್ಳಿ ಹಾಗೂ ಪಂತರಪಾಳ್ಯದ ಕೊಳಗೇರಿ ನಿವಾಸಿಗಳಿಗೆ ಮೂಲಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಒಳಚರಂಡಿ, ಸಮುದಾಯದ ಭವನ ನಿರ್ಮಾನ ಕಾರ್ಯ ಪ್ರಗತಿಯಲ್ಲಿದೆ.
ಹಕ್ಕುಪತ್ರ/ನೋಂದಣಿ ಪತ್ರ ವಿತರಣೆ ಮಾಡಲಾಗಿದ್ದು 40 ವರ್ಷದಿಂದ ನೆನಗುದಿಗೆ ಬಿದ್ದಿದ್ದ ಪಂಚಶೀಲ ನಗರ ನಿವಾಸಿಗಳಿಗೆ ಬಿಬಿಎಂಪಿ ವತಿಯಿಂದ ಖಾತಾ ಮಾಡಿಕೊಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು. ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಲಾಗಿದ್ದು, 4 ಕೋಟಿ ರೂ. ವೆಚ್ಚದಲ್ಲಿ 400 ಕಡೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ ಪೊಲೀಸ್ ಠಾಣೆಗಳಿಗೆ ನೇರ ಸಂಪರ್ಕ ಕಲ್ಪಿಸಲಾಗಿದೆ. ಅಪರಾಧ ಪ್ರಕರಣ ನಿಯಂತ್ರಣ, ಸರಗಳ್ಳತನ ನಿಗ್ರಹಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.