ಗೀತಾವಿಷ್ಣುಗೆ ಸಿಸಿಬಿ ಡ್ರಿಲ್!
Team Udayavani, Oct 6, 2017, 11:45 AM IST
ಬೆಂಗಳೂರು: ಅಪಘಾತ ಹಾಗೂ ಮಾದಕವಸ್ತು ಹೊಂದಿದ್ದ ಪ್ರಕರಣದ ಆರೋಪಿ ಉದ್ಯಮಿ ಆದಿಕೇಶವಲು ಮೊಮ್ಮಗ ಗೀತಾ ವಿಷ್ಣುವನ್ನು ಗುರುವಾರ ಪೊಲೀಸರು ಹಲವು ಗಂಟೆಗಳ ಕಾಲ ತೀವ್ರವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಸಿಸಿಬಿ ಕೇಂದ್ರಕಚೇರಿಯಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿ ವಿಷ್ಣುವನ್ನು, ಅಪಘಾತವಾದ ಕಾರಿನಲ್ಲಿ ಹೊಂದಿದ್ದ 110 ಗ್ರಾಂ ಮಾದಕವಸ್ತುವನ್ನೇ ಪ್ರಮುಖವಾಗಿಟ್ಟುಕೊಂಡು ತನಿಖಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮಾದಕವಸ್ತು ಹೇಗೆ ಸಿಕ್ಕಿತ್ತು ಬೇರೆ ರಾಜ್ಯಗಳ ಜೊತೆ ನಂಟಿದಿಯೇ? ಎಂಬಿತಾದಿ ಪ್ರಶ್ನೆಗಳನ್ನು ಕೇಳಿದ್ದಾರೆ.
ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ನಿಖರ ಉತ್ತರ ನೀಡದ ಆರೋಪಿ ವಿಷ್ಣು, ತನ್ನ ಕಾರಿನಲ್ಲಿ ಮಾದಕವಸ್ತು ಇಟ್ಟುಕೊಂಡಿರಲಿಲ್ಲ. ಅಪಘಾತದ ಬಳಿಕ ಬೇರೆ ಯಾರೋ ತಂದಿಟ್ಟಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದು, ತಮಗೂ ಮಾದಕ ವಸ್ತು ಮಾರಾಟ ಜಾಲಕ್ಕೂ ಸಂಬಂಧವಿಲ್ಲ ಎಂದು ನುಣುಚಿಕೊಳ್ಳಲು,ಯತ್ನಿಸುತ್ತಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿಯನ್ನು ಪಡೆದುಕೊಳ್ಳಲಾಗಿದ್ದು, ಅಗತ್ಯವಿದ್ದರೆ ಪುನಃ ಕರೆಸಿ ವಿಚಾರಣೆ ನಡೆಸಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
MUST WATCH
ಹೊಸ ಸೇರ್ಪಡೆ
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.