ಬ್ಲಾಕ್ಮೇಲ್ ಆರೋಪಿ ಐದು ದಿನ ಸಿಸಿಬಿ ವಶಕ್ಕೆ
Team Udayavani, May 7, 2019, 3:05 AM IST
ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಬ್ಲಾಕ್ಮೇಲ್ ಮಾಡಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಫೋಕಸ್ ಟಿವಿ ಎಂಬ ಖಾಸಗಿ ಸುದ್ದಿ ವಾಹಿನಿ ಮುಖ್ಯಸ್ಥ ಹೇಮಂತ್ ಕುಮಾರ್ನನ್ನು ಸೋಮವಾರ ಒಂದನೇ ಎಸಿಎಂಎಂ ನ್ಯಾಯಾಲಯ ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಭಾನುವಾರ ಸಂಜೆ ಆರೋಪಿಯನ್ನು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಆರೋಪಿಯನ್ನು ಕೋರ್ಟ್ಗೆ ಹಾಜರು ಪಡಿಸಿದ ತನಿಖಾಧಿಕಾರಿಗಳು, ಇದೊಂದು ಗಂಭೀರ ಪ್ರಕರಣವಾಗಿದ್ದು, ಆರೋಪಿ ಬಳಿ ಇರುವ, ಶಾಸಕರಿಗೆ ಸೇರಿದ್ದು ಎನ್ನಲಾದ ಕೆಲ ವಿಡಿಯೋ ಹಾಗೂ ಆಡಿಯೋಗಳನ್ನು ಜಪ್ತಿ ಮಾಡಬೇಕಿದೆ.
ಅಲ್ಲದೆ, ತನ್ನ ವೈಯಕ್ತಿಕ ಲಾಭಕ್ಕಾಗಿ ಮುಖ್ಯಮಂತ್ರಿ ಅವರ ಕಚೇರಿಯ ಹೆಸರು ದುರ್ಬಳಕೆ ಮಾಡಿಕೊಂಡಿಕೊಂಡಿರುವುದು ಕಂಡು ಬಂದಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಏಳು ದಿನಗಳ ಕಾಲ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಆದರೆ, ವಿಚಾರಣೆ ನಡೆಸಿದ ಕೋರ್ಟ್ ಐದು ದಿನಗಳ ಕಾಲ ವಶಕ್ಕೆ ನೀಡಿ ಆದೇಶ ನೀಡಿದೆ.
ಪ್ರಕರಣದ ಹಿನ್ನೆಲೆ?: ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಆಡಿಯೋ ಮತ್ತು ವಿಡಿಯೋ ತನ್ನ ಬಳಿ ಇರುವುದಾಗಿ ಹೇಳಿ, ಬೆದರಿಸಿದ್ದ ಆರೋಪಿ ಹೇಮಂತ್ ಕುಮಾರ್, 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ. ಈ ಸಂಬಂಧ ಶಾಸಕರ ಚುನಾವಣಾ ಕರ್ತವ್ಯಗಳನ್ನು ನೋಡಿಕೊಳ್ಳುವ ಗಿರೀಶ್ ಭಾರಧ್ವಾಜ್, ಮೇ 2ರಂದು ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಗಂಭೀರ ಪ್ರಕರಣವಾದರಿಂದ ಸಿಸಿಬಿಗೆ ವರ್ಗಾಹಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.