ನಿತ್ಯಾನಂದ ಸ್ವಾಮಿಗೆ ಸಿಸಿಬಿ ನೋಟಿಸ್
Team Udayavani, Nov 20, 2018, 12:07 PM IST
ಬೆಂಗಳೂರು: “ಗಾಂಜಾ ಸೇವನೆ ಮಾಡಿ ಆರೋಗ್ಯ ಹಾಳು ಮಾಡಿಕೊಂಡ ವ್ಯಕ್ತಿಯನ್ನು ನಾನು ಇದುವರೆಗೂ ನೋಡಿಲ್ಲ. ಜತೆಗೆ ಗಾಂಜಾ ಸೇವನೆ ವ್ಯಸನವಲ್ಲ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿಗೆ ಕೇಂದ್ರ ಅಪರಾಧ ದಳ (ಸಿಸಿಬಿ) ಪೊಲೀಸರು ಸೋಮವಾರ ನೋಟಿಸ್ ಜಾರಿಗೊಳಿಸಿದ್ದಾರೆ.
ನಿತ್ಯಾನಂದ ಸ್ವಾಮಿಯ “ಗಾಂಜಾ’ ಹೇಳಿಕೆಯಿಂದ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಕ್ರಮ ಜರುಗಿಸುವಂತೆ ಕೋರಿ ಕನ್ನಡ ಚಳವಳಿ ನಾಗೇಶ್ ಎಂಬುವವರು ದೂರು ನೀಡಿದ್ದಾರೆ. ಅವರ ದೂರಿಗೆ ಸಂಬಂಧಿಸಿದಂತೆ ಮುಂದಿನ ಎರಡು ದಿನಗಳಲ್ಲಿ, ಮಾದಕ ದ್ರವ್ಯ ಘಟಕದ ಎಸಿಪಿ ಮೋಹನ್ ಕುಮಾರ್ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.
ನಿತ್ಯಾನಂದ ಸ್ವಾಮಿ ಬಿಡದಿ ಆಶ್ರಮದಲ್ಲಿ ಇರದಿದ್ದ ಕಾರಣ, ಅವರ ಕಚೇರಿಗೆ ನೋಟಿಸ್ ನೀಡಲಾಗಿದೆ ಎಂದು ಸಿಸಿಬಿಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಸ್ಪಷ್ಟಪಡಿಸಿದರು. ಕೆಲ ದಿನಗಳ ಹಿಂದೆ ತನ್ನ ಆಶ್ರಮದಲ್ಲಿ ಪ್ರವಚನ ನೀಡಿರುವ ನಿತ್ಯಾನಂದ ಸ್ವಾಮಿ, “ಮದ್ಯ ಸೇವನೆ ವ್ಯಸನವಾಗಲಿದೆ. ಆದರೆ, ಗಾಂಜಾ ವ್ಯಸನಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಏಕೆಂದರೆ ಅದೊಂದು ಮೂಲಿಕೆಯಷ್ಟೇ.
ಗಾಂಜಾ ಸೇವನೆಯಿಂದ ವ್ಯಸನ ಹೆಚ್ಚಾಗಿರುವುದನ್ನು ನಾನು ನನ್ನ ಜೀವನದಲ್ಲೇ ಕಂಡಿಲ್ಲ. ಗಾಂಜಾ ಸೇವನೆಯಿಂದ ಮನುಷ್ಯ ಸ್ವತಂತ್ರನಾಗುತ್ತಾನೆ’ ಎಂದಿದ್ದರು. ಪ್ರವಚನದ ನಡುವೆಯೇ “ನಾನು ಸತ್ಯವನ್ನು ಮಾತ್ರವೇ ಹೇಳುತ್ತಿದ್ದೇನೆ. ಲಕ್ಷಾಂತರ ಜನರ ನಡುವಿನ ಸಂಪರ್ಕದಿಂದ ಈ ಮಾತುಗಳನ್ನು ಹೇಳುತ್ತಿದ್ದೇನೆ. ಹಾಗಂತ ನಾನು ಗಾಂಜಾ ಸೇವಿಸಿಲ್ಲ. ಅದನ್ನು ಪ್ರೋತ್ಸಾಹಿಸುವುದೂ ಇಲ್ಲ’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.