CCB Police: ಕುಕ್ಕರ್‌ನಲ್ಲಿ ಮಾದಕ ವಸ್ತು ಸಿದ್ಧಪಡಿಸಿ ಮಾರಾಟ
Team Udayavani, Nov 11, 2023, 11:04 AM IST
ಬೆಂಗಳೂರು: ಅಡುಗೆ ಮಾಡುವ ಪ್ರಷರ್ ಕುಕ್ಕರ್‌ನಲ್ಲಿ ಸಿಂಥೆಟಿಕ್ ಮಾದಕ ವಸ್ತುಗಳನ್ನು ತಯಾರು ಮಾಡಿದೇಶ- ವಿದೇಶಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನಿಂದ 10 ಕೋಟಿ ರೂ. ಮೌಲ್ಯದ ಮಾದಕ ವಸ್ತು ಗಳನ್ನು ವಶಕ್ಕೆ ಪಡೆಯಲಾಗಿದೆ. ನೈಜಿರಿಯಾ ಮೂಲದ ಬೆಂಜಮೆನ್ ಅಲಿ ಯಾಸ್ ಚಿಡುಬೆಮು(40) ಬಂಧಿತ
ವಿದೇಶಿ ಪ್ರಜೆ. ಆರೋಪಿ ದೆಹಲಿ, ಮುಂಬೈನಿಂದ ಕಚ್ಚಾ ಪದಾರ್ಥಗಳನ್ನು ತರಿಸುತ್ತಿದ್ದ. ಬಳಿಕ ಅಡುಗೆ ಮಾಡುವ ಪ್ರಷರ್ ಕುಕ್ಕರ್‌ನಲ್ಲಿ ಮಾದಕ ವಸ್ತುಗಳನ್ನು ಸಿದ್ಧಪಡಿಸಿ ದೇಶ- ವಿದೇಶಗಳಿಗೆ ಮಾರಾಟ ಮಾಡುತ್ತಿದ್ದ.
ಈತನಿಂದ 10 ಕೋಟಿ ರೂ. ಮೌಲ್ಯದ 5 ಕೆ.ಜಿ. ಎಂಡಿಎಂಎ, ಎಂಡಿಎಂಎ ತಯಾರು ಮಾಡಲು ಬೇಕಾದ ಕಚ್ಚಾ ಪದಾರ್ಥಗಳಾದ 12 ಕೆ.ಜಿ. 450 ಗ್ರಾಂ ಎಂಎಸ್‌ಎಂ, 5 ಕೆ.ಜಿ. ಸೋಡಿಯಂ ಹೈಡ್ರಾಕ್ಸೈಡ್ ಕ್ರಿಸ್ಟಲ್, 5 ಲೀಟರ್ ಹೈಡ್ರೋ ಕ್ಲೋರಿಕ್ ಆಸಿಡ್, 2.5 ಲೀಟರ್ ಅಸಿಟೋನ್, 5 ಲೀಟರ್ ಕುಕ್ಕರ್, ಗ್ಯಾಸ್ ಸ್ಟವ್, ಸಿಲಿಂಡರ್, 2 ಮೊಬೈಲ್‌ಗಳು, 2 ತೂಕದ ಯಂತ್ರಗಳು ಹಾಗೂ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯಕ್ತ ಬಿ.ದಯಾನಂದ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
2021ರಲ್ಲಿ ವ್ಯವಹಾರಿಕ ವೀಸಾ ಪಡೆದು ಬೆಂಗಳೂರಿಗೆ ಬಂದಿರುವ ನೈಜಿರಿಯಾ ಮೂಲದ ಆರೋಪಿಯ ವೀಸಾ ಅವಧಿ 2022ರಲ್ಲೇ ಮುಕ್ತಾಯಗೊಂಡಿದೆ. ಆದರೂ, ಆರೋಪಿ ಅಕ್ರಮವಾಗಿ ವಾಸವಾಗಿದ್ದಾನೆ. ಬಟ್ಟೆ ವ್ಯಾಪಾರ ಮಾಡುವುದಾಗಿ ಹೇಳಿ ಆವಲಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದುಕೊಂಡಿದ್ದ. ಆದರೆ, ಮುಂಬೈ, ದೆಹಲಿ ಮೂಲದ ಸ್ನೇಹಿತರ ಜತೆ ಸೇರಿ ಅಂತಾ ರಾಜ್ಯ ಮತ್ತು ಅಂತಾರಾಷ್ಟ್ರೀಯ ಡ್ರಗ್ಸ್ ದಂಧೆ ನಡೆಸುತ್ತಿದ್ದ ಎಂಬುದು ತನಿಖೆ ಯಿಂದ ಬೆಳಕಿಗೆ ಬಂದಿದೆ ಎಂದು ವಿವರಿಸಿದರು.
ಮನೆಯಲ್ಲೇ ಡ್ರಗ್ಸ್ ತಯಾರು!: ಇತ್ತೀಚೆಗೆ ಆರೋಪಿಯನ್ನು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು. ಈತನ ವಿಚಾರಣೆಯಲ್ಲಿ ಮನೆಯಲ್ಲೇ ಡ್ರಗ್ಸ್ ತಯಾರು ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿತ್ತು. ಮುಂಬೈ, ದೆಹಲಿಯಲ್ಲಿರುವ ಸ್ನೇಹಿತರು ಹಾಗೂ ವಿದೇಶಿ ಪ್ರಜೆಗಳಿಂದ ಕಚ್ಚಾ ವಸ್ತುಗಳನ್ನು ಕೋರಿಯರ್‌ಗಳ ಮೂಲಕ ತರಿಸಿಕೊಳ್ಳುತ್ತಿದ್ದ. ಬಳಿಕ ಅವುಗಳನ್ನು ಯುಟ್ಯೂಬ್, ಆನ್‌ಲೈನ್ ಮೂಲಕ ಮಾಹಿತಿ ಪಡೆದು ಅಡುಗೆ ಮಾಡುವ ಕುಕ್ಕರ್‌ನಿಂದ ತಯಾರು ಮಾಡಿ, ಗ್ರಾಹಕರ ಬೇಡಿಕೆಗೆ ತಕ್ಕಂತೆ ಅಂತಾರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೋರಿಯರ್ ಮೂಲಕವೇ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.
ಸಿಸಿಬಿ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.