![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 23, 2023, 2:16 PM IST
ಬೆಂಗಳೂರು: ಮಾದಕ ವಸ್ತು ಮಾರಾ ಟಗಾರರು ಮತ್ತು ವ್ಯಸನಿಗಳ ವಿರುದ್ಧ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು 8 ಮಂದಿ ವಿದೇಶಿ ಗರು ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ ಮಾದಕ ವಸ್ತು ಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
ಕಳೆದ 15 ದಿನಗಳಲ್ಲಿ ಕಾಡುಗೋಡಿ, ಕೆ.ಆರ್.ಪುರ, ಸೋಲದೇವನಹಳ್ಳಿ, ಎಚ್ ಎಸ್ ಆರ್ ಲೇಔಟ್, ವೈಟ್‌ಫೀ ಲ್ಡ್, ಬಾಣಸವಾಡಿ, ಪರಪ್ಪನ ಅಗ್ರ ಹಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ 10 ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ 3 ಕೆ.ಜಿ. 806 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, 50 ಗ್ರಾಂ ಕೊಕೇ ನ್, 25 ಎಕ್ಸೆ$r„ಸಿ ಪಿಲ್ಸ್, 5 ಕ್ವಿಂಟ ಲ್ ಗಾಂಜಾ, 1 ಕಾರು, ಮೂರು ದ್ವಿ ಚಕ್ರ ವಾಹನ ಹಾಗೂ 9 ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ವ್ಯವಹಾರಿಕ ವೀಸಾ ಪಡೆದು ಬೆಂಗಳೂರಿಗೆ ಬಂದಿರುವ ನೈಜೀರಿ ಯಾ, ಇಥಿಯೋಪಿಯಾ ಸೇರಿ ವಿವಿಧ ದೇಶಗಳ 8 ಮಂದಿ ಡ್ರಗ್ಸ್ ಪೆಡ್ಲರ್‌ಗಳು, ಸುಲ ಭವಾಗಿ ಹಣ ಗಳಿಸುವ ಉದ್ದೇ ಶದಿಂದ ಗೋವಾ, ಕೇರಳ, ದೆಹಲಿ ಸೇರಿ ದೇಶದ ವಿವಿಧೆಡೆ ಕಡಿಮೆ ಬೆಲೆಗೆ ಮಾದಕವಸ್ತುಗಳನ್ನು ಖರೀದಿಸಿ ನಗರಕ್ಕೆ ತಂದು ಕಾಲೇಜು ವಿದ್ಯಾರ್ಥಿ ಗಳು, ಐಟಿ-ಬಿಟಿ ಉದ್ಯೋಗಿಗಳು, ಮಾದಕ ವ್ಯಸನಿಗಳಿಗೆ ದುಬಾರಿ ದರಕ್ಕೆ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
You seem to have an Ad Blocker on.
To continue reading, please turn it off or whitelist Udayavani.