ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಸೂಚನೆ
ನಿಯಮಾವಳಿ ಜಾರಿಗೊಳಿಸಿ ಕ್ರಮವಹಿಸಲು ಜಿಲ್ಲಾಧಿಕಾರಿಗೆ ನಿರ್ದೇಶನ
Team Udayavani, Aug 7, 2019, 11:57 AM IST
ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ಬಾರಿ ರಾಜ್ಯದಲ್ಲಿ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಮಣ್ಣಿನ ಮೂರ್ತಿ ಪ್ರತಿಷ್ಠಾಪನೆ, ಸಾರ್ವಜನಿಕವಾಗಿ ಮೂರ್ತಿ ಪ್ರತಿಷ್ಠಾಪನೆ ಮಾಡಲು ಕಡ್ಡಾಯ ಅನುಮತಿ, ಅವಧಿಗೆ ಮಿತಿ, ಮೂರ್ತಿಯ ಎತ್ತರ ಐದು ಅಡಿಗೆ ಸೀಮಿತಗೊಳಿಸುವುದು ಸೇರಿದಂತೆ ವಿವಿಧ ನಿಯಮಾವಳಿಗಳನ್ನು ಜಾರಿಗೊಳಿಸಿ ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.
ಈ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ್ ಮಾತನಾಡಿ, ಜಲಮಾಲಿನ್ಯಕ್ಕೆ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಗಣೇಶ ಮೂರ್ತಿಗಳು ಹಾಗೂ ಮೂರ್ತಿಗೆ ಲೇಪಿಸಿದ ರಾಸಾಯನಿಕ ಬಣ್ಣಗಳು ಪ್ರಮುಖ ಕಾರಣವಾಗಿದೆ. ಇದರಿಂದ ಜಲಮೂಲಗಳ ಭೌತಿಕ ಮತ್ತು ರಾಸಾಯನಿಕ ಗುಣಗಳು ಮಾರ್ಪಾಡಾಗಿ ಜಲ ಮೂಲಗಳ ಮೇಲೆ ಅವಲಂಭಿಸಿರುವ ಪಶು, ಪಕ್ಷಿ, ಪ್ರಾಣಿಗಳು ಮತ್ತು ಇತರೆ ಜಲಚರಗಳ ಜೀವಕ್ಕೆ ಅಪಾಯ ಉಂಟಾಗುತ್ತದೆ. ಜತೆಗೆ ಜನರ ಆರೋಗ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಹೇಳಿದರು.
ಪಿಒಪಿ ಮತ್ತು ಬಣ್ಣದ ವಿಗ್ರಹಗಳನ್ನು ತಯಾರಿಸದಿರಲು ಹಾಗೂ ಯಾವುದೇ ಜಲಮೂಲಗಳಲ್ಲಿ ಅಂತಹ ವಿಗ್ರಹಗಳು ವಿಸರ್ಜನೆಯಾಗದ ರೀತಿಯಲ್ಲಿ ಕ್ರಮವಹಿಸಲು ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.
ಸುಧಾಕರ್ ಸ್ಥಾನ ಭದ್ರ: ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಡಾ. ಕೆ. ಸುಧಾಕರ್, ಬಿಜೆಪಿ ಸರ್ಕಾರದಲ್ಲೂ ಮುಂದುವರಿದಿದ್ದಾರೆ. ಬಿಜೆಪಿ ಸರ್ಕಾರ ಬಂದ ನಂತರ ಎಲ್ಲ ನಿಗಮ ಮಂಡಳಿ, ಪ್ರಾಧಿಕಾರ, ಆಯೋಗ, ಅಕಾಡೆಮಿಗಳ ಅಧ್ಯಕ್ಷರ ನೇಮಕ ರದ್ದು ಮಾಡಿದ್ದರೂ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ವಿಚಾರದಲ್ಲಿ ಯಾವುದೇ ಆದೇಶ ಹೊರಡಿಸಿರಲಿಲ್ಲ. ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರ ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ಸದನಕ್ಕೆ ಗೈರು ಹಾಜರಾಗಿ, ವಿಪ್ ಉಲ್ಲಂಘನೆ ಆರೋಪದಲ್ಲಿ ಅನ ರ್ಹತೆಗೊಂಡು ಸುಧಾಕರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಈಗ ಬಿಜೆಪಿ ಸರ್ಕಾರವು ಮಾಲಿನ್ಯ ನಿಯಂ ತ್ರಣ ಮಂಡಳಿ ಅಧ್ಯಕ್ಷರಾಗಿ ಇವರನ್ನೇ ಮುಂದುವರಿಸಿದೆ.
ಮಾಲಿನ್ಯ ನಿಯಂತ್ರಣ ಮಂಡಳಿ ಕ್ರಮಗಳು:
•ಪಿಒಪಿ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪರವಾನಗಿ ನೀಡದಿರು ವುದು. ಜತೆಗೆ ಅನಧಿಕೃತವಾಗಿ ತಯಾರಿ ಅಥವಾ ಮಾರಾಟ ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳ ಮೇಲೆ ಕಾನೂನು ಕ್ರಮ.
•ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿಸರ್ಜಿಸದೆ ಉಳಿದಿರುವ ಪಿಒಪಿ ಅಥವಾ ಬಣ್ಣದ ವಿಗ್ರಹಗಳನ್ನು ತನಿಖೆ ಮಾಡಿ ತನ್ನ ಸುಪರ್ದಿಗೆ ತೆಗೆದುಕೊಂಡು ಘನ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಾಗಿಸುವುದು.
•ಬೇರೆ ರಾಜ್ಯದಿಂದ ಬರುವಂತಹ ಪಿಒಪಿ ವಿಗ್ರಹಗಳನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಜಿಲ್ಲೆ ಅಥವಾ ತಾಲೂಕುಗಳಲ್ಲಿ ತಪಾಸಣಾ ಕೇಂದ್ರ ಸ್ಥಾಪನೆ
•ನಗರದಲ್ಲಿ ಕೆರೆಗಳನ್ನು ಅಥವಾ ಕಲ್ಯಾಣಿಗಳನ್ನು ಪ್ರತಿ ವಾರ್ಡ್‌ನಲ್ಲಿ ಗುರುತಿಸಿ ಮೂರ್ತಿಗಳ ವಿಸರ್ಜನೆಗೆ ಕ್ರಮ.
•1 ತಿಂಗಳುಗಳವರೆಗೆ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅನುಮತಿ.
ಸಾರ್ವಜನಿಕರಿಗೆ ಸೂಚನೆ:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.