ಮಕ್ಕಳು ಶಾಲೆಗೆ ಬರಲು ದೃಢೀಕರಣ ಪತ್ರ ಕಡ್ಡಾಯ
ಎಲ್ಲಾ ಶಾಲಾ ಶಿಕ್ಷಕರು ಕೋವಿಡ್ ಪರೀಕ್ಷೆಗೆ ಒಳಗಾಗಬೇಕು | ವರದಿ ನೆಗೆಟಿವ್ ಬಂದರೆ ಮಾತ್ರ ಹಾಜರಾಗಬೇಕು
Team Udayavani, Dec 25, 2020, 2:14 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಪಾಲಿಕೆಯ ಶಾಲೆಗಳಲ್ಲಿ ದ್ವಿತೀಯ ಪಿಯುಸಿ, ಎಸ್‌ಎಸ್‌ಎಲ್‌ಸಿ ತರಗತಿ ಹಾಗೂ ವಿದ್ಯಾಗಮ ಯೋಜನೆ ಜ.1ರಿಂದ ಪ್ರಾರಂಭವಾಗಲಿದ್ದು, ಎಲ್ಲಾ ಮಕ್ಕಳು ಪೋಷಕರಿಂದ ಅವರಿಗೆ ಕೊರೊನಾ ಸೋಂಕಿನ ಲಕ್ಷಣ ಇಲ್ಲ. ಶಾಲೆಗೆ ಕಳುಹಿಸಲು ಅನುಮತಿ ಇದೆ ಎಂಬ ದೃಢೀಕರಣ ಪತ್ರ ತರುವುದು ಕಡ್ಡಾಯ ಎಂದು ಪಾಲಿಕೆ ವಿಶೇಷ (ಶಿಕ್ಷಣ ಮತ್ತು ಆಡಳಿತ) ಆಯುಕ್ತ ಮಂಜುನಾಥ್ ತಿಳಿಸಿದರು.
ಈ ಸಂಬಂಧ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿ ಅನುಸಾರ ಪಾಲಿಕೆ ಶಾಲೆ ಪ್ರಾರಂಭಿಸಲಾಗುವುದು. ಎಲ್ಲಾ ಶಿಕ್ಷಕರು ಶಾಲೆ ಪ್ರಾರಂಭವಾಗುವ 72 (3 ದಿನ) ಗಂಟೆಗಳಿಂತ ಮೊದಲು ಕೋವಿಡ್ ಸೋಂಕು ಪರೀಕ್ಷೆಗೆ ಒಳಗಾಗಬೇಕು ಹಾಗೂ ನೆಗೆಟಿವ್ ವರದಿ ಇದ್ದರೆ ಮಾತ್ರ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.
ನಿಯಮ ಪಾಲನೆಗೆ ಮೆಂಟರ್ ನೇಮಕ: 6ನೇ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳಿಗೆ ವಿದ್ಯಾಗಮನ, ದ್ವಿತೀಯ ಪಿಯುಸಿ, 10ನೇ ತರಗತಿ ಮಕ್ಕಳಿಗೆ ಶಾಲೆ ಪ್ರಾರಂಭವಾಗುತ್ತಿರುವುದರಿಂದ ಸೋಂಕು ನಿಯಮ ಪಾಲನೆ ಮೇಲ್ವಿಚಾರಣೆ ನಡೆಸಲು ಆಯಾ ಶಾಲೆ ದೈಹಿಕ ಶಿಕ್ಷಕರನ್ನು ಮೆಂಟರ್ ಆಗಿ ಮೇಲ್ವಿಚಾರಕರನ್ನಾಗಿ ನೇಮಿಸಲಾಗುವುದು.ದೈಹಿಕ ಶಿಕ್ಷಕರು ಇಲ್ಲದೆ ಇದ್ದರೆ, ವೃತ್ತಿ ಶಿಕ್ಷಕರು, ಸೇವಾದಳ, ಸ್ಕೌಟ್ಸ್-ಗೈಡ್ಸ್ ತರಬೇತಿ ಶಿಕ್ಷಕರನ್ನು ಬಳಸಿಕೊಳ್ಳಲು ನಿರ್ದೇಶನ ನೀಡಲಾಗಿದೆ ಎಂದರು.
ಇದನ್ನೂ ಓದಿ ; ಅನಾರೋಗ್ಯ: ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು
ವಿದ್ಯಾರ್ಥಿಗಳೇ ಸ್ಯಾನಿಟೈಸರ್ ತರಬೇಕು ! ;
ವಿದ್ಯಾಗಮ ಹಾಗೂ ಎಸ್ಸೆಸ್ಸೆಲ್ಸಿ ಶಾಲೆ ಪ್ರಾರಂಭ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಆದರೆ, ಮಾರ್ಗಸೂಚಿಯಲ್ಲಿ ಎಲ್ಲಾ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಶಿಕ್ಷಕರು ನೋಡಿಕೊಳ್ಳಬೇಕು. ಮಕ್ಕಳಿಗೆ ಸ್ಯಾನಿಟೈಸರ್ ತರಲು ಸೂಚನೆ ನೀಡಬೇಕು ಎಂದು ಉಲ್ಲೇಖ ಮಾಡಲಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷಾ ದಿನಾಂಕ ಹಾಗೂ ಪಠ್ಯ ಕಡಿತದಬಗ್ಗೆ ಚರ್ಚೆ. ಅದೇ ರೀತಿ 1ರಿಂದ 5ನೇ ತರಗತಿ ಮಕ್ಕಳಿಗೆ ವಿದ್ಯಾಗಮದ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡಲಾಗುವುದು ಎಂದು ಬುಧವಾರ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿದ್ಯಾಗಮ, ಎಸ್‌ಎಸ್‌ಎಲ್‌ಸಿ ಮಾರ್ಗಸೂಚಿಗಳು :
- ಪ್ರತಿ ಶಾಲೆಯಲ್ಲಿ ಸೋಂಕಿನ ಲಕ್ಷಣ ಇರುವ ಮಕ್ಕಳಿಗೆ ಪ್ರತ್ಯೇಕ ಐಸೋಲೇಷನ್ ಕೊಠಡಿ ಮೀಸಲಿಡ ಬೇಕು. ಮಕ್ಕಳಲ್ಲಿ ಸೋಂಕಿನ ಲಕ್ಷಣ ಕಂಡು ಬಂದರೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಬಳಿಕ ಹತ್ತಿರ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಬೇಕು.
- ಸಾಮೂಹಿಕ ಪ್ರಾರ್ಥನೆ ನಡೆಸುವಂತಿಲ್ಲ. ದ್ವಿತೀಯ ಪಿಯುಸಿ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಧದಿನ ಮಾತ್ರ ತರಗತಿ.
- ಒಂದು ತಂಡದಲ್ಲಿ 15 ವಿದ್ಯಾರ್ಥಿಗಳು ಮಾತ್ರ ಇರಬೇಕು. 50 ವರ್ಷ ಮೇಲ್ಪಟ್ಟ ಶಿಕ್ಷಕರು ಮಾಸ್ಕ್, ಫೇಸ್ ಶೀಲ್ಡ್ ಧರಿಸುವುದು ಕಡ್ಡಾಯ.
- ಎಲ್ಲ ಶಾಲೆಗಳ ಆವರಣ, ಶೌಚಾಲಯ ಹಾಗೂ ಕೊಠಡಿಗಳನ್ನು ಸ್ಯಾನಿಟೈಸರ್ ಮಾಡಿಸಿ, ಸ್ವತ್ಛವಾಗಿಇರಿಸಿಕೊಳ್ಳಬೇಕು. ವಿದ್ಯಾರ್ಥಿಗಳು, ಶಿಕ್ಷಕರಿಗೆ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯ.
- ದೈಹಿಕ ಶಿಕ್ಷಣ ಸಾಮಾಜಿಕ ಅಂತರ ಕಾಪಾಡಿಕೊಂಡು ನಡೆಸಬಹುದು. ಗುಂಪಿನ ಆಟ ನಡೆಸುವಂತಿಲ್ಲ.
- ದಾಖಲಾತಿ ಕಡ್ಡಾಯವಾಗಿ ಇರಲಿದೆ. ಆದರೆ, ಹಾಜರಾತಿ ಕಡ್ಡಾಯವಲ್ಲ. ಆನ್‌ಲೈನ್ ಶಾಲೆಗಳು ಮುಂದುವರಿಯುತ್ತವೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗಂಟಲು ದ್ರವ ಮಾದರಿ ಸೋಂಕು ಪರೀಕ್ಷೆ ನಡೆಸಿ, ನೆಗೆಟಿವ್ ಇದ್ದರೆ ಮಾತ್ರ ದಾಖಲಾತಿಗೆ ಅವಕಾಶ ಕಲ್ಪಿಸುವುದು.
- ವಿದ್ಯಾರ್ಥಿಗಳು ಮನೆಯಿಂದಲೇ ಬಿಸಿ ನೀರು ತರ ಬೇಕು. ಇಲ್ಲವಾದರೆ ಶಾಲೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಬೇಕು.
- ಕೈತೊಳೆಯುವ ಸೋಪ್ ಬಳಸುವ ಬಗ್ಗೆ ವಿಶೇಷ ಆದ್ಯತೆ ನೀಡಬೇಕು. ಮಕ್ಕಳಿಗೆ ಕೈತೊಳೆಯುವ ವಿಧಾನದ ಬಗ್ಗೆ ಜಾಗೃತಿ ಮೂಡಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.