ಸಿಇಟಿ, ನೀಟ್‌: ಒಟ್ಟಿಗೇ ದಾಖಲೆ ಪರಿಶೀಲನೆ


Team Udayavani, May 21, 2018, 7:05 AM IST

ban21051806medn.jpg

ಬೆಂಗಳೂರು: ಸರ್ಕಾರಿ ಕೋಟಾದ ಎಂಜಿನಿಯರಿಂಗ್‌ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಮತ್ತು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ಬರೆದ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆಯನ್ನು ಏಕಕಾಲದಲ್ಲಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಚಿಂತನೆ ನಡೆಸುತ್ತಿದೆ.

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಹೊರತು ಪಡಿಸಿ ಎಂಜಿನಿಯರಿಂಗ್‌ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟಾದ ಸೀಟಿಗೆ ಪ್ರಾಧಿಕಾರವು ಈಗಾಗಲೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಿದೆ. ಏಪ್ರಿಲ್‌ 18 ಮತ್ತು 19ರಂದು ಸಿಇಟಿ ಪರೀಕ್ಷೆ ನಡೆದಿದೆ. ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್‌ಗಳ ಸರ್ಕಾರಿ ಕೋಟಾದ ಸೀಟಿಗೂ ಮೇ 6ರಂದು ನೀಟ್‌ ನಡೆದಿದೆ.

ಫ‌ಲಿತಾಂಶವನ್ನು ಮೇ ಅಂತ್ಯದಲ್ಲಿ ನೀಡಲು ನಿರ್ಧರಿಸಲಾಗಿದೆ. ಕಾರಣ, ನೀಟ್‌ ಫ‌ಲಿತಾಂಶ ಹೊರಬೀಳಲು ಇನ್ನಷ್ಟು ಕಾಲಾವಕಾಶ ತೆಗೆದುಕೊಳ್ಳುತ್ತದೆ. ಇದರಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಬಾರದು ಎಂಬ ಸದುದ್ದೇಶದಿಂದ ನೀಟ್‌ ತೇರ್ಗಡೆಯಾದ ವಿದ್ಯಾರ್ಥಿಗಳ ಹಾಗೂ ಸಿಇಟಿ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆಯನ್ನು ಒಟ್ಟೊಟ್ಟಿಗೆ ಮಾಡಲಾಗುತ್ತದೆ.

2017ರಲ್ಲಿ ಮೊದಲ ಬಾರಿಗೆ ರಾಜ್ಯದ ವಿದ್ಯಾರ್ಥಿಗಳು ನೀಟ್‌ ಬರೆದಿದ್ದರು. ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳು ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಾಗೂ ರಾಜ್ಯದ ವಿದ್ಯಾರ್ಥಿಗಳು ಹೀಗೆ ಮೂರು ವಿಧದಲ್ಲಿ ದಾಖಲೆ ಪರಿಶೀಲನೆ ನಡೆಸಲಾಗಿತ್ತು.

ಇದರಿಂದ ಹಲವು ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಎರಡೆರೆಡು ಬಾರಿ ದಾಖಲೆ ಪರಿಶೀಲನೆ ಮಾಡಿಕೊಳ್ಳಬೇಕೇ ಎಂಬ ಜಿಜ್ಞಾಸೆಯೂ ಮೂಡಿತ್ತು. ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಇಂತಹ ಯಾವುದೇ ಗೊಂದಲ ಆಗಬಾರದು ಎಂಬ ಕಾರಣಕ್ಕಾಗಿ ಏಕಕಾಲದಲ್ಲಿ ದಾಖಲೆ ಪರಿಶೀಲನೆ ಮಾಡಲಾಗುತ್ತದೆ. ನೀಟ್‌ ತೇರ್ಗಡೆಯಾಗಿ ದಾಖಲೆ ಪರಿಶೀಲನೆ ಮಾಡಿಕೊಂಡ ವಿದ್ಯಾರ್ಥಿ,ಸಿಇಟಿಗೆ ಪ್ರತ್ಯೇಕವಾಗಿ ದಾಖಲೆ ಪರಿಶೀಲನೆ 
ಮಾಡಿಸಿಕೊಳ್ಳುವ ಅಗತ್ಯ ಇರುವುದಿಲ್ಲ. ಆದರೆ, ಅಲ್ಪಸಂಖ್ಯಾತ ಹಾಗೂ ಹೊರ ರಾಜ್ಯದ ವಿದ್ಯಾರ್ಥಿಗಳು ಆ ಕೋಟಾದಡಿ ಸೀಟು ಪಡೆಯಲು ಸೂಕ್ತ ದಾಖಲೆ ಒದಗಿಸಬೇಕಾಗುತ್ತದೆ. 

ಸಿಇಟಿ ಫ‌ಲಿತಾಂಶವನ್ನು ಮೇ ಅಂತ್ಯಕ್ಕೆ ನೀಡಲಿದ್ದೇವೆ. ನೀಟ್‌ ಫ‌ಲಿತಾಂಶ ಬಂದ ನಂತರ ಸಿಇಟಿ ವಿದ್ಯಾರ್ಥಿಗಳ ಜತೆಗೆ ದಾಖಲೆ ಪರಿಶೀಲನೆ ಮಾಡುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದೇವೆ. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು
ಅನುಕೂಲವಾಗಲಿದೆ.

– ಗಂಗಾಧರಯ್ಯ,
ಆಡಳಿತಾಧಿಕಾರಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಟಾಪ್ ನ್ಯೂಸ್

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.