ರಾಜಧಾನಿಯಲ್ಲಿ ಸರಗಳ್ಳರ ಕೈಚಳಕ: ನಾಲ್ಕು ಕಡೆ ಕಳವು
Team Udayavani, Aug 10, 2017, 12:46 PM IST
ಬೆಂಗಳೂರು: ಬೆಂಗಳೂರು ನಗರದ ಪಶ್ಚಿಮ ಮತ್ತು ಉತ್ತರ ವಿಭಾಗದ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳರು ತಮ್ಮಕೈಚಳಕ
ತೋರಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 200 ಗ್ರಾಂ ತೂಕದ ನಾಲ್ಕು ಸರಗಳನ್ನು ಕಸಿದು ಪರಾರಿಯಾಗಿದ್ದಾರೆ.
ರಾಜರಾಜೇಶ್ವರಿನಗರದ ರಾಘವೇಂದ್ರ ಮಠದ ಬಳಿ ಬುಧವಾರ ಬೆಳಗ್ಗೆ 7 ಗಂಟೆಗೆ ಯೋಗ ಶಾಲೆಗೆ ಹೋಗುತ್ತಿದ್ದ ಶಾಂತಲಕ್ಷಿ(63) ಎಂಬುವರನ್ನು ಆಕ್ಟೀವಾ ಹೊಂಡಾದಲ್ಲಿ ಹಿಂಬಾಲಿಸಿದ ಇಬ್ಬರು ದುಷ್ಕರ್ಮಿಗಳು 70 ಗ್ರಾಂ ಸರ ಕಸಿದಿದ್ದಾರೆ. ಚಂದ್ರಲೇಔಟ್ ಠಾಣಾ ವ್ಯಾಪ್ತಿಯ ಮಾನಸ ನಗರ ನಿವಾಸಿ ಗೌರಮ್ಮ ಎಂಬುವರು ಗಾರ್ಮೆಂಟ್ಸ್ ಕೆಲಸ ಮುಗಿಸಿಕೊಂಡು ಮಂಗಳವಾರ ರಾತ್ರಿ 8.30ರ ವೇಳೆಯಲ್ಲಿ ಮನೆಗೆ ವಾಪಸ್ ಬರುವಾಗ ಬೈಕ್‌ನಲ್ಲಿ ಹಿಂಬಾಲಿಸಿದ ಕಳ್ಳರು ವಿಳಾಸ ಕೇಳುವ ನೆಪದಲ್ಲಿ 20 ಗ್ರಾಂ ಸರ ಕಿತ್ತು ಪರಾರಿಯಾಗಿದ್ದಾರೆ. ಆರ್‌ಎಂಸಿ ಯಾರ್ಡ್ ಠಾಣಾ ವ್ಯಾಪ್ತಿಯ ರಾಘವೇಂದ್ರ ಲೇಔಟ್‌ನಲ್ಲಿ ಮಂಗಳವಾರ ರಾತ್ರಿ 10 ಗಂಟೆಗೆ ದಿಚಕ್ರ ವಾಹನದಲ್ಲಿ ರಸ್ತೆಯಲ್ಲಿ ಅಡ್ಡಾಡುತ್ತಿದ್ದ ದುಷ್ಕರ್ಮಿಗಳು ಅಪಾರ್ಟ್‌ಮೆಂಟ್‌ನಿಂದ ಹೊರಬಂದಿದ್ದ ಜಯಲಕ್ಷ್ಮೀ ಎಂಬುವರ 70 ಗ್ರಾಂ ತೂಕದ ಸರ ಕಸಿದು ಕೊಂಡಿದ್ದಾರೆ. ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಸೊಸೆಯನ್ನು ಕರೆತರಲು ಜಯಲಕ್ಷ್ಮಿಅವರು
ಅಪಾರ್ಟ್‌ಮೆಂಟ್‌ನಿಂದ ಹೊರಬಂದಿದ್ದರು. ಇನ್ನೂ ಆರ್.ಟಿ.ನಗರ ವ್ಯಾಪ್ತಿಯ ಗಿಡ್ಡಪ್ಪ ಬ್ಲಾಕ್ ನಿವಾಸಿ ಸವಿತಾ ಎಂಬುವರು ಮಂಗಳ
ವಾರ ಮಧ್ಯಾಹ್ನ 3 ಗಂಟೆಯಲ್ಲಿ ಶಾಲೆಯಿಂದ ಮಗುವನ್ನು ಕರೆದುಕೊಂಡು ಬರುತ್ತಿದ್ದಾಗ ಹಿಂಬಾಲಿಸಿಕೊಂಡು ಬಂದ ಇಬ್ಬರು ಬೈಕ್
ಸವಾರರು ಗಮನ ಬೇರೆಡೆ ಸೆಳೆದು 50 ಗ್ರಾಂ ತೂಕದ ಸರ ಕಳವು ಮಾಡಿ ಪರಾರಿಯಾಗಿದ್ದಾರೆ. ಈ ಸಂಬಂಧ ನಾಲ್ಕು ಠಾಣೆಯಲ್ಲಿ
ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ. ಕೃತ್ಯದ ಮಾದರಿ ಗಮನಿಸಿದರೆ ಒಂದೇ ತಂಡ ಕಳ್ಳತನ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸರಗಳ್ಳತನ ವಿರುದ್ಧ ಜಾಗೃತಿ ಮೂಡಿಸಲು “ಡೋರ್ ಟು ಡೋರ್’ ಅಭಿಯಾನ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸರಗಳ್ಳರ ಹಾವಳಿ ಹೆಚ್ಚಾಗಿದೆ. ಒಂದೆಡೆ ಒಬ್ಬಂಟಿಮಹಿಳೆಯರು ರಸ್ತೆಯಲ್ಲಿ ಓಡಾಡುವುದು
ಕಷ್ಟಕರವಾಗಿದ್ದರೆ, ಮತ್ತೂಂದೆಡೆ ಈ ಕೃತ್ಯವೆಸಗುವ ದುಷ್ಕರ್ಮಿಗಳನ್ನು ಹಿಡಿಯುವುದು ಸಹ ಪೊಲೀಸರಿಗೆ ಸವಾಲಿನ ಕೆಲಸವಾಗಿದೆ. ಇಂತಹ ಸಂಧಿಘ್ನ ಪರಿಸ್ಥಿತಿಯಲ್ಲಿ ಉತ್ತರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಹೊಸ ಅಭಿಯಾನ ಆರಂಭಿಸಿದ್ದಾರೆ. ಎಲ್ಲೆಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿವೆಯೇ ಅಂತಹ ಸ್ಥಳಗಳಲ್ಲಿ “ಡೋರ್ ಟು ಡೋರ್’ ಅಭಿಯಾನ ನಡೆಸುತ್ತಿದ್ದಾರೆ. ಮನೆ, ಮನೆಗೆ ಮತ್ತು ಸಾರ್ವಜನಿಕ ಸ್ಥಳಕ್ಕೆ ತೆರಳಿ ಮಹಿಳೆಯರು, ವೃದ್ಧರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಪ್ರಮುಖವಾಗಿ ಯಶವಂತಪುರ, ನಂದಿನಿಲೇಔಟ್, ಮಹಾಲಕ್ಷ್ಮೀ ಲೇಔಟ್, ಆರ್.ಎಂ.ಸಿ ಯಾರ್ಡ್, ಮಲ್ಲೇಶ್ವರ, ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ಕರಪತ್ರಗಳನ್ನು ವಿತರಿಸಿದರು. ಅಲ್ಲದೇ
ಮಹಿಳಾ ಸಿಬ್ಬಂದಿ ಮೂಲಕ ಮನೆ, ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ. ಉದ್ಯಾನ, ಯೋಗಾಸನ ಕೇಂದ್ರ, ಶಾಲಾ ಕಾಲೇಜು ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಸರಗಳ್ಳರದಿಂದ ಎಚ್ಚರಿಕೆ ವಹಿಸುವದು ಹೇಗೆ ಎಂಬುದರ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.
“ಆಭರಣ ಪ್ರದರ್ಶನ ಮಾಡಬಾರದು. ಹಾಗೇ ಮಾಡುವುದರಿಂದ ಸರಗಳ್ಳರಿಗೆ ಅವಕಾಶ ತೋರಿಸಿಕೊಟ್ಟಂತಾಗುತ್ತದೆ. ಯಾರಾದರೂ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರೆ ನಮ್ಮ-100ಗೆ ಕರೆಮಾಡಬೇಕು. ಒಂಟಿಯಾಗಿ ಓಡಾಡುವುದಕ್ಕಿಂತ ಜತೆಯಾಗಿ ಓಡಾಡುವುದು ಒಳಿತು. ವಾಯುವಿಹಾರಕ್ಕೆ ನೆರಹೊರೆಯವರ ಜತೆ ಹೋಗಬೇಕು ಎಂದು ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.