155ಕ್ಕೂ ಹೆಚ್ಚು ಸರ ಕದ್ದವ ಸೇರಿ ಮೂವರ ಬಂಧನ

Team Udayavani, Oct 11, 2022, 2:15 PM IST

155ಕ್ಕೂ ಹೆಚ್ಚು ಸರ ಕದ್ದವ ಸೇರಿ ಮೂವರ ಬಂಧನ

ಬೆಂಗಳೂರು: ಒಂಟಿಯಾಗಿ ಓಡಾಡುವ ಮಹಿಳೆಯರನ್ನು ಗುರಿಯಾಗಿಸಿ ಚಿನ್ನದ ಸರ ಕಳವು ಮಾಡುತ್ತಿದ್ದ ಮೂವರು ಆರೋಪಿ ಗಳನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಂಕದಕಟ್ಟೆ ನಿವಾಸಿ ಅಚ್ಯುತ್‌ ಕುಮಾರ್‌ ಅಲಿಯಾಸ್‌ ಗಣಿ(35), ಮೈಸೂರು ಮೂಲದ ಸಿದ್ದರಾಜು ಅಲಿಯಾಸ್‌ ಪ್ರಜ್ವಲ್‌ (21) ಹಾಗೂ ಬೆಂಗಳೂರಿನ ಕಮಲಾನಗರದ ಪ್ರಸನ್ನಕುಮಾರ್‌(35) ಬಂಧಿತರು.

ಆರೋಪಿ ಗಳಿಂದ 5 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನಾಭರಣ ಹಾಗೂ ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಇತ್ತೀಚೆಗೆ ದಾಸರಹಳ್ಳಿ ಭುವನೇಶ್ವರಿನಗರದಲ್ಲಿ ಸಂಜೆ ವಾಯು ವಿಹಾರಕ್ಕೆ ಹೋಗುತ್ತಿದ್ದ ಮಹಿಳೆಯನ್ನು ಬೈಕ್‌ ನಲ್ಲಿ ಹಿಂಭಾಲಿಸಿ ಮಾಂಗಲ್ಯ ಸರ ಕಳವು ಮಾಡಿ ಪರಾರಿಯಾಗಿದ್ದರು. ಸರ ಕದಿಯುವು ದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದು, ಹಲವು ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ.

ಆರೋಪಿಗಳ ಪೈಕಿ ಅಚ್ಯುತ್‌ ಕುಮಾರ್‌ ವಿರುದ್ಧ ಈ ಹಿಂದೆ ಹುಬ್ಬಳ್ಳಿ, ಧಾರವಾಡ, ಗದಗ, ಹಾವೇರಿ, ಹೊಸಪೇಟೆ, ಹಾಸನ, ತುಮಕೂರು, ದೊಡ್ಡಬಳ್ಳಾಪುರ, ಬಳ್ಳಾರಿ, ಚನ್ನಪಟ್ಟಣ ಸೇರಿ ಬೆಂಗಳೂರಿನ ವಿವಿಧ ಪೊಲೀಸ್‌ ಠಾಣೆಗಳಲ್ಲಿ 155ಕ್ಕೂ ಅಧಿಕ ಸರಗಳವು ಪ್ರಕರಣ ದಾಖಲಾಗಿವೆ. 2018ನೇ ಸಾಲಿನಲ್ಲಿ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸರ ಕಳವು ಮಾಡಿ ಜೈಲು ಸೇರಿದ್ದ. 4 ವರ್ಷ ಜೈಲಿನಲ್ಲಿದ್ದು ತಿಂಗಳ ಹಿಂದೆಯಷ್ಟೇ ಜಾಮೀನು ಪಡೆದು ಹೊರಬಂದು, ಇದೀಗ ಮತ್ತೆ ಅದೇ ಕೃತ್ಯಗಳಲ್ಲಿ ತೊಡಗಿದ್ದನು ಎಂದು ಪೊಲೀಸರು ಹೇಳಿದರು.

ಆರೋಪಿ ಸಿದ್ದರಾಜು ರಾತ್ರಿ ವೇಳೆ ಬೀಗ ಹಾಕಿರುವ ಅಂಗಡಿಗಳನ್ನು ಗುರಿಯಾಗಿಸಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ. ಮತ್ತೂಬ್ಬ ಆರೋಪಿ ಪ್ರಸನ್ನ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಎಂದು ಪೊಲೀಸರು ಹೇಳಿದರು.

ಜೈಲಿನಲ್ಲಿ ಪರಿಚಯ, ಒಟ್ಟಿಗೆ ಕಳ್ಳತನ : ಮೂವರು ಆರೋಪಿಗಳು ಬೇರೆ ಬೇರೆ ಪ್ರಕರಣಗಳಲ್ಲಿ ಜೈಲು ಸೇರಿದ್ದಾಗ ಪರಸ್ಪರ ಪರಿಚಯವಾಗಿದ್ದಾರೆ. ಈ ವೇಳೆಯೇ ಸರಗಳವು ಮಾಡಿದರೆ ಸುಲಭವಾಗಿ ಹಣ ಸಂಪಾದಿಸಬಹುದು ಎಂದು ಲೆಕ್ಕಾಚಾರ ಹಾಕಿ, ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಬಳಿಕ ಮೂವರು ಸೇರಿಕೊಂಡು ಸರಗಳವು ಮಾಡುತ್ತಿದ್ದರು. ಅದಕ್ಕಾಗಿ ತುಮಕೂರಿನಲ್ಲಿ ಪಲ್ಸರ್‌ ದ್ವಿಚಕ್ರ ವಾಹನ ಕಳವು ಮಾಡಿದ್ದರು. ಆ ದ್ವಿಚಕ್ರ ವಾಹನದ ನಂಬರ್‌ ಪ್ಲೇಟ್‌ ಬದಲಾಯಿಸಿ ನಗರದ ಬಾಗಲಗುಂಟೆ, ವಿದ್ಯಾರಣ್ಯಪುರ, ನೆಲಮಂಗಲ ಟೌನ್‌, ನಂದಿನಿಲೇಔಟ್‌ ಠಾಣೆಯಲ್ಲಿ ಸರ ಕಳವು ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.