ಅಧ್ಯಕ್ಷ ಸ್ಥಾನ ತೆರವು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Team Udayavani, Jun 23, 2018, 7:15 AM IST
ಬೆಂಗಳೂರು: ಅವಧಿ ಪೂರ್ಣಗೊಳ್ಳುವ ಮುನ್ನವೇ ಅಧ್ಯಕ್ಷ ಸ್ಥಾನ ತೆರವುಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿರುವುದು ಕಾನೂನು ಬಾಹಿರ ಎಂದು ಆಕ್ಷೇಪಿಸಿ ನಾಲ್ವರು ನಿಗಮ ಮಂಡಳಿಗಳ ನಿಕಟಪೂರ್ವ ಅಧ್ಯಕ್ಷರು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಅಯೋಗದ ಅಧ್ಯಕ್ಷರಾಗಿದ್ದ ಎ.ಮುನಿಯಪ್ಪ ಹಾಗೂ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಆರ್ ವೆಂಕಟೇಶ್, ಡಾ.ಬಾಬುಜಗಜೀವನ್ ರಾಂ ಚರ್ಮ ಮತ್ತು ಕೈಗಾರಿಕೆ ಅಭಿವೃದಿಟಛಿ ನಿಗಮದ ಓ ಶಂಕರ್, ಅಂಬಿಗರ ಚೌಡಯ್ಯ ನಿಗಮದ ಜಗನ್ನಾಥ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತಾದ ಪ್ರತ್ಯೇಕ ರಿಟ್ ಅರ್ಜಿಗಳನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾ. ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠ,ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿತು.
ನಿಗಮ-ಮಂಡಳಿಗಳು ಹಾಗೂ ಆಯೋಗದ ಅಧ್ಯಕ್ಷ ಸ್ಥಾನ ತೆರವುಗೊಳಿಸುವಂತೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಮೇ 28ರಂದು ಆದೇಶ ಹೊರಡಿಸಿದೆ.
ಆದರೆ, ಅಧಿಕಾರಾವಧಿ ಪೂರ್ಣಗೊಳ್ಳದೆ ಈ ಆದೇಶ ಹೊರಡಿಸಿರುವುದು ಸಂವಿಧಾನದ 14 ಹಾಗೂ 21ನೇ
ವಿಧಿಯ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.