ಚಾಮರಾಜಪೇಟೆ ಮೈದಾನ: ಮುಂದುವರಿದ ಒಡೆತನ ವಿವಾದ
Team Udayavani, Jun 20, 2022, 8:24 PM IST
ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನದ ಒಡೆತನಕ್ಕೆ ಸಂಬಂಧಿಸಿ ವಕ್ಫ್ ಬೋರ್ಡ್‌ನಿಂದ ಬಿಬಿಎಂಪಿಗೆ ದಾಖಲೆ ಸಲ್ಲಿಸಲಾಗಿದ್ದು, ಅದನ್ನು ಕಾನೂನು ವಿಭಾಗದಿಂದ ಪರಿಶೀಲಿಸಲಾಗುತ್ತಿದೆ.
ಮೈದಾನದ ಒಡೆತನ ವಿಚಾರವಾಗಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಮೈದಾನ ತಮಗೆ ಸೇರಿದ್ದು ಎಂಬ ವಾದವನ್ನು ವಕ್ಫ್ ಬೋರ್ಡ್ ಮಂಡಿಸುತ್ತಿದ್ದ ಕಾರಣ, ದಾಖಲೆಗಳನ್ನು ಸಲ್ಲಿಸುವಂತೆ ಅದಕ್ಕೆ ಬಿಬಿಎಂಪಿ ನೋಟಿಸ್ ನೀಡಿತ್ತು. ವಕ್ಫ್ ಬೋರ್ಡ್ ಕಳೆದ ಶುಕ್ರವಾರ ದಾಖಲೆಗಳನ್ನು ಸಲ್ಲಿಸಿದೆ.
ವಕ್ಫ್ ಬೋರ್ಡ್ ಪ್ರಮುಖವಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶಗಳ ಪ್ರತಿ ಹಾಗೂ ವಕ್ಫ್ ಬೋರ್ಡ್ ದಾಖಲೆಯಲ್ಲಿ ಮೈದಾನದ ಕುರಿತು ಉಲ್ಲೇಖೀಸಿರುವ ದಾಖಲೆಗಳನ್ನು ಸಲ್ಲಿಸಿದೆ. ಸುಪ್ರೀಂಕೋರ್ಟ್ ಆದೇಶದಲ್ಲಿ ಮೈದಾನವು ವಕ್ಫ್ ಬೋರ್ಡ್‌ಗೆ ಸೇರಿದ್ದು ಎಂಬ ಉಲ್ಲೇಖವಿದ್ದು, ಅದರಿಂದಾಗಿ ಚಾಮರಾಜಪೇಟೆ ಮೈದಾನ ತಮ್ಮದು ಎಂದು ವಾದ ಮಂಡಿಸಲಾಗಿದೆ.
ಕಾರ್ಯಕ್ರಮಗಳಿಗೆ ಅನುಮತಿಯಿಲ್ಲ:
ಚಾಮರಾಜಪೇಟೆ ಮೈದಾನದಲ್ಲಿ ಜೂ. 21ರಂದು ಯೋಗ ದಿನ ಆಚರಣೆಗಾಗಿ ಕೆಲವು ಸಂಘಟನೆಗಳಿಂದ ಮನವಿ ಸಲ್ಲಿಕೆಯಾಗಿತ್ತು. ಆದರೆ ಒಡೆತನ ವಿಚಾರವಾಗಿ ಗೊಂದಲಗಳು ನಿವಾರಣೆಯಾಗದ ಕಾರಣ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ನೀಡದಿರಲು ಬಿಬಿಎಂಪಿ ನಿರ್ಧರಿಸಿದೆ.
ಚಾಮರಾಜಪೇಟೆ ಮೈದಾನಕ್ಕೆ ಸಂಬಂಧಿಸಿದಂತೆ ವಕ್ಫ್ ಬೋರ್ಡ್‌ನಿಂದ ದಾಖಲೆ ಸಲ್ಲಿಸಲಾಗಿದೆ. ಆ ದಾಖಲೆಗಳ ಪರಿಶೀಲನೆಗೆ ಬಿಬಿಎಂಪಿ ಕಾನೂನು ಕೋಶಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ಪ್ರತಿಕ್ರಿಯೆ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು.-ಶ್ರೀನಿವಾಸ್ ,ಬಿಬಿಎಂಪಿ ಜಂಟಿ ಆಯುಕ್ತ (ಪಶ್ಚಿಮ ವಲಯ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.