ಕುಲಪತಿ ನೇಮಕ ವಿಳಂಬಕ್ಕೆ ಗೌರ್ನರ್ ಕಾರಣ: ರಾಯರಡ್ಡಿ
Team Udayavani, Sep 11, 2017, 6:10 AM IST
ಬೆಂಗಳೂರು: ಮೈಸೂರು ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ನೇಮಕವನ್ನು ರಾಜ್ಯಪಾಲರೇ ವಿಳಂಬ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಆರೋಪಿಸಿದರು.
ಬಸವ ಭವನದಲ್ಲಿ ಬಿ.ಡಿ.ಜತ್ತಿಯವರ ಜನ್ಮದಿನಾಚರಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮತ್ತು ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳ ಸ್ಥಾನ ಖಾಲಿಯಾಗಿ ಆರು ತಿಂಗಳಾಗಿದೆ. ಈ ಎರಡು ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಚಿಸಿರುವ ಶೋಧನಾ ಸಮಿತಿ ಅರ್ಹರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಹೆಸರು ಕಳುಹಿಸಿದೆ. ರಾಜ್ಯಸರ್ಕಾರ ಆ ಹೆಸರುಗಳನ್ನು ಶಿಫಾರಸ್ಸಿನ ಮೂಲಕ, ಯಾರನ್ನು ಕುಲಪತಿ ಮಾಡಬೇಕು ಎಂಬುದನ್ನು ರಾಜ್ಯಪಾಲರಿಗೆ ಸಲ್ಲಿಸಿದೆ. ಆದರೆ, ರಾಜ್ಯಪಾಲರು ಇನ್ನು ಒಪ್ಪಿಗೆ ನೀಡಿಲ್ಲ ಎಂದರು.
ರಾಜ್ಯ ವಿಶ್ವವಿದ್ಯಾಲಯ ಕಾಯ್ದೆಯ ಪ್ರಕಾರ ರಾಜ್ಯ ಸರ್ಕಾರದ ಸಹಮತಿಯೊಂದಿಗೆ ರಾಜ್ಯಪಾಲರು ಕುಲಪತಿಗಳ ನೇಮಕ ಮಾಡಬೇಕು ಎಂಬುದು ಸ್ಪಷ್ಟವಾಗಿದೆ. ರಾಜ್ಯಪಾಲರು ವಿಶ್ವವಿದ್ಯಾಲಯದ ನಿಯಮವನ್ನು ಅಧ್ಯಯನ ಮಾಡುತ್ತಿರಬೇಕು. ರಾಜ್ಯಪಾಲರು ನಮ್ಮ ಶಿಫಾರಸ್ಸಿಗೆ ತ್ವರಿತ ಒಪ್ಪಿಗೆ ನೀಡಿದರೆ ಆರೋಗ್ಯಕರ ಬೆಳವಣಿಗೆ ಆಗಲಿದೆ ಎಂದು ಹೇಳಿದರು.
ಕಲಬುರಗಿ ವಿವಿಗೆ ಬಸವಣ್ಣನ ಹೆಸರು:
ಕಲಬುರಗಿ ರಾಜ್ಯ ವಿಶ್ವವಿದ್ಯಾಲಯಕ್ಕೆ ಜಗಜ್ಯೋತಿ ಬಸವಣ್ಣನವರ ಹೆಸರು ಇಡಲು ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ. ನವೆಂಬರ್ ಒಳಗೆ ಮರು ನಾಮಕರಣ ಮಾಡಲಿದ್ದೇವೆ. ಹಾಗೆಯೇ ಕಲುºರ್ಗಿ ಕೇಂದ್ರ ವಿಶ್ವವಿದ್ಯಾಲಯಕ್ಕೆ ಅಂಬೇಡ್ಕರ್ ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ, ಪ್ರತ್ಯೇಕವಾಗಿ ಪತ್ರವನ್ನು ಬರೆದಿದ್ದೇವೆ. ಯಾವುದೇ ಪ್ರಯೋಜನವಾಗಿಲ್ಲ. ಇನ್ನೊಮ್ಮೆ ಮುಖ್ಯಮಂತ್ರಿಗಳ ಮೂಲಕ ಪತ್ರ ಬರೆಸಲಿದ್ದೇನೆ ಎಂದು ಸಚಿವ ರಾಯರೆಡ್ಡಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.