ಅನಿತಾ ಬದಲು ನಿಖಿಲ್ ‘ರಂಗಪ್ರವೇಶ’?
Team Udayavani, Oct 3, 2018, 3:15 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ರಾಜೀನಾಮೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ರಾಮನಗರ ವಿಧಾನಸಭೆ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧೆಗಿಳಿಯುವುದು ಖಚಿತ. ಆದರೂ ಕೊನೇ ಕ್ಷಣದಲ್ಲಿ ನಿಖೀಲ್ ಕಣಕ್ಕಿಳಿದರೂ ಅಚ್ಚರಿಯಿಲ್ಲ. ಪುತ್ರ ನಿಖೀಲ್ ಅವರನ್ನು ಕುಮಾರಸ್ವಾಮಿಯವರ ರಾಜಕೀಯ ವಾರಸುದಾರರನ್ನಾಗಿ ಮಾಡುವ ಬಯಕೆ ಹೊಂದಿರುವ ಅನಿತಾ ಕುಮಾರಸ್ವಾಮಿ, ರಾಮನಗರ ಉಪಚುನಾವಣೆಯಲ್ಲೇ ‘ರಂಗಪ್ರವೇಶ’ಕ್ಕೆ ಒಲವು ಹೊಂದಿದ್ದಾರೆ. ಆದರೆ ನಿಖೀಲ್ ಈಗಲೇ ರಾಜಕೀಯ ಪ್ರವೇಶ ಮಾಡುವುದು ಬೇಡ. ಉಪ ಚುನಾವಣೆಯಲ್ಲಿ ಅನಿತಾ ಅಥವಾ ಪಕ್ಷದ ಬೇರೆ ಮುಖಂಡರಿಗೆ ಅವಕಾಶ ಕಲ್ಪಿಸಿಕೊಡಲು ಕುಮಾರಸ್ವಾಮಿ ಬಯಸಿದ್ದಾರೆಂದು ಹೇಳಲಾಗಿದೆ.
ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಇರುವುದರಿಂದ ರಾಮನಗರ ಮತ್ತು ಜಮಖಂಡಿ ಕ್ಷೇತ್ರಗಳ ಉಪ ಚುನಾವಣೆಗೂ ಮೈತ್ರಿ ಖಚಿತವಾಗಿದ್ದು, ರಾಮನಗರ ಜೆಡಿಎಸ್‌ಗೆ, ಜಮಖಂಡಿ ಕಾಂಗ್ರೆಸ್‌ಗೆ ಬಿಟ್ಟುಕೊಡುವ ತೀರ್ಮಾನವಾಗಿದೆ. ಹೀಗಾಗಿ ರಾಮನಗರದಲ್ಲಿ ಜೆಡಿಎಸ್‌ನಿಂದ ಯಾರೇ ಸ್ಪರ್ಧಿಸಿದರೂ ಅನಾಯಾಸವಾಗಿ ಗೆಲ್ಲುವ ಸಾಧ್ಯತೆ ಇರುವುದರಿಂದ ನಿಖೀಲ್ ರಾಜಕೀಯ ಪ್ರವೇಶಕ್ಕೆ ಸೂಕ್ತ ಕಾಲ.
ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿರುವಾಗ ಪುತ್ರ ವಿಧಾನಸಭೆ ಪ್ರವೇಶಿಸಿದರೆ ರಾಜಕೀಯವಾಗಿ ಪ್ರವರ್ಧಮಾನಕ್ಕೆ ಬರಲು ಅವಕಾಶ ದೊರೆಯುತ್ತದೆ. ಮುಂದಿನ ರಾಜಕೀಯ ಭವಿಷ್ಯಕ್ಕೂ ಒಳ್ಳೆಯದಾಗುತ್ತದೆ ಎಂಬ ಅಭಿಪ್ರಾಯವೂ ಗೌಡರ ಕುಟುಂಬದಲ್ಲಿದೆ ಎಂದು ಹೇಳಲಾಗಿದೆ.
ಆದರೆ ‘ಜಾಗ್ವಾರ್’ ಬಳಿಕ ‘ಸೀತಾರಾಮ ಕಲ್ಯಾಣ’ ಸೇರಿ ಎರಡು -ಮೂರು ಹೊಸ ಚಲನಚಿತ್ರಗಳ ಬಗ್ಗೆ ಹೆಚ್ಚು ಆಸಕ್ತಿ ವಹಿಸಿರುವ ನಿಖೀಲ್‌ಗೆ ರಾಮನಗರ ಚುನಾವಣೆಯಲ್ಲಿ ಸ್ಪರ್ಧಿಸಲು ಇಷ್ಟವಿಲ್ಲ. ಚುನಾವಣೆಗೆ ಸ್ಪರ್ಧೆ ಮಾಡುವುದೇ ಆದರೆ ಮಂಡ್ಯ ಕ್ಷೇತ್ರದಿಂದ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖೀಲ್ ಆಸಕ್ತಿ ಹೊಂದಿದ್ದಾರೆ. ಅದು 2019 ಅಥವಾ ಮುಂದಿನ ಚುನಾವಣೆಯೂ ಆಗಬಹುದು ಎಂದು ಹೇಳಲಾಗಿದೆ.
ಈ ನಡುವೆ, ಸಮ್ಮಿಶ್ರ ಸರಕಾರ ಇದ್ದರೂ ರಾಮನಗರದಿಂದ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸಬೇಕು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮುಸ್ಲಿಂ ಅಭ್ಯರ್ಥಿ ಇಕ್ಬಾಲ್ ಹುಸೇನ್ 69,900 ಮತ ಪಡೆದಿದ್ದರು. ಹೀಗಾಗಿ, ಜೆಡಿಎಸ್‌ಗೆ ಬಿಟ್ಟುಕೊಟ್ಟರೆ ಅಲ್ಲಿ ಪಕ್ಷದ ನೆಲೆ ಹೋಗುತ್ತದೆ ಎಂಬುದು ವಿಧಾನಪರಿಷತ್ ಸದಸ್ಯ ಲಿಂಗಪ್ಪ ಸೇರಿ ಅಲ್ಲಿನ ಜಿಲ್ಲಾ ಮುಖಂಡರ ಅಭಿಪ್ರಾಯ. ಆದರೆ ಸಮ್ಮಿಶ್ರ ಸರಕಾರ ಇರುವುದರಿಂದ ಮೈತ್ರಿ ಅನಿವಾರ್ಯ. ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಡುವುದು ಖಚಿತ.
ಬಿಜೆಪಿಯಿಂದ ಯಾರು?
ರಾಮನಗರ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಅನಿತಾ ಅಥವಾ ನಿಖೀಲ್ ಯಾರೇ ಸ್ಪರ್ಧಿಸಿ ದರೂ ಅವರ ವಿರುದ್ಧ ಮಾಜಿ ಸಚಿವ ಚನ್ನಪಟ್ಟಣದ ಸಿ.ಪಿ.ಯೋಗೇಶ್ವರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಆದರೆ ಯೋಗೇಶ್ವರ್ ಸದ್ಯದ ಸ್ಥಿತಿಯಲ್ಲಿ ಸ್ಪರ್ಧೆಗೆ ಒಲವು ತೋರುತ್ತಿಲ್ಲ. ಹೀಗಾಗಿ ಕಂಠೀರವ ಸ್ಟುಡಿಯೋ ಮಾಜಿ ಅಧ್ಯಕ್ಷ ರುದ್ರೇಶ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಸಿ.ಪಿ.ಯೋಗೇಶ್ವರ್ ಲೋಕಸಭೆ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯಬಹುದು ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.