ನಗರದೆಲ್ಲೆಡೆ ಗೋವಿಂದ ನಾಮಸ್ಮರಣೆ


Team Udayavani, Jan 9, 2017, 11:43 AM IST

bang-lord-venki.jpg

ಬೆಂಗಳೂರು: ನಗರದಾದ್ಯಂತ ಭಾನುವಾರ ಭಕ್ತಿ ಭಾವದೊಂದಿಗೆ ವೈಕುಂಠ ಏಕಾದಶಿ ಆಚರಣೆ ನಡೆಯಿತು. ವಿಷ್ಣು ಹಾಗೂ ವೆಂಕಟೇಶ್ವರ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ, ಆರಾಧನೆಗಳು ನೆರವೇರಿದವು. ದೇವಾಲಯಗಳಲ್ಲಿ ನಿರ್ಮಿಸಿದ್ದ ವೈಕುಂಠ ದ್ವಾರ ಪ್ರವೇಶಿಸುವ ಮೂಲಕ ಭಕ್ತರು ಸ್ವರ್ಗ ಪ್ರವೇಶಿಸಿದ ಧನ್ಯತಾ ಭಾವ ಮೆರೆದರು.

ವೈಕುಂಠ ಏಕಾದಶಿ ಅಂಗವಾಗಿ ಉದ್ಯಾನನಗರಿಯ ವಿವಿಧೆಡೆಯ ವಿಷ್ಣು , ವೆಂಕಟೇಶ್ವರ, ಶ್ರೀನಿವಾಸ, ಶ್ರೀರಾಮ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಅಲಂಕಾರ, ಪೂಜೆ, ನಾದ ಸಂಗೀತ ಮೇಳೈಸಿದವು. ಚುಮುಚುಮು ಚಳಿಯನ್ನೂ ಲೆಕ್ಕಿಸದೆ ಜನ ನಸುಕಿನಲ್ಲೇ ಎದ್ದು ಸ್ನಾನ, ಮಡಿ, ಉಪವಾಸ ಆಚರಣೆಯೊಂದಿಗೆ ದೇವಾಲಯಗಳಿಗೆ ಆಗಮಿಸಿ ಸ್ವಾಮಿಯ ದರ್ಶನ ಪಡೆದರು. ರಾತ್ರಿ 11 ಗಂಟೆವರೆಗೂ ದೇವಾಲಯಗಳಲ್ಲಿ ವೈಕುಂಠದ ವೈಭವ ಅದ್ಧೂರಿಯಾಗಿ ನೆರವೇರಿತು.

ಬಹುತೇಕ ಎಲ್ಲಾ ದೇವಾಲಯಗಳಲ್ಲಿ ಅರ್ಚನೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ಇದರ ಜತೆಗೆ ಕೆಲವೆಡೆ ಬೆಳಗ್ಗೆಯಿಂದಲೇ ಸಾಂಸ್ಕೃತಿಕ ಹಾಗೂ ಸಂಗೀತ ಕಛೇರಿ ಏರ್ಪಡಿಸಲಾಗಿತ್ತು. ಇನ್ನು ಕೆಲವೆಡೆ ಸಂಜೆ ಭಕ್ತಿಗೀತೆಗಳ ಗಾಯನ, ಭಜನೆ, ವಿಷ್ಣು ಸಹಸ್ರನಾಮ ಪಠನ ಮಾಡಲಾಯಿತು.

ಚಾಮರಾಜಪೇಟೆಯ ಶ್ರೀ ಪ್ರಸನ್ನ ವೆಂಕಟೇಶ್ವರಸ್ವಾಮಿ ದೇವಾಲಯ, ಸತ್ಯನಾರಾಯಣಸ್ವಾಮಿ ದೇವಾಲಯ, ಬನ್ನೇರುಘಟ್ಟ ಮುಖ್ಯರಸ್ತೆಯ ಮಹಾಗಣಪತಿ ಶ್ರೀ ಲಕ್ಷ್ಮೀವೆಂಕಟೇಶ್ವರಸ್ವಾಮಿ ದೇವಾಲಯ, ಕೊಪ್ಪಗೇಟ್‌ ಬಳಿಯ ಪ್ರಸನ್ನವರದ ವೆಂಕಟೇಶ್ವರ ಸ್ವಾಮಿ ದೇವಾಲಯ, ರಾಜಾಜಿನಗರದ ಕೈಲಾಸ ವೈಕುಂಠ ಮಹಾಕ್ಷೇತ್ರ, ವೈಯಾಲಿಕಾವಲ್‌ನ ವೆಂಕಟೇಶ್ವರಸ್ವಾಮಿ ದೇವಾಲಯ, ಶ್ರೀರಾಮಪುರದ ಶ್ರೀರಾಮಚಂದ್ರಸ್ವಾಮಿ ದೇವಾಲಯ,

ಸಜ್ಜನ್‌ರಾವ್‌ ವೃತ್ತದ ಲಕ್ಷ್ಮೀ ವೆಂಕಟೇಶ್ವರಸ್ವಾಮಿ ದೇವಾಲಯ, ಬಸವನಗುಡಿಯ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಾಲಯ, ಬನಶಂಕರಿ 2ನೇ ಹಂತದ ವರಪ್ರದ ಶ್ರೀ ವೆಂಕಟೇಶ್ವರ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಮಹೋತ್ಸವ ವೈಭವವಾಗಿ ನೆರವೇರಿತು. ಬೆಳಗಿನ ಜಾವ 3ಗಂಟೆಯಿಂದಲೇ ಭಕ್ತರು ದೇವಸ್ಥಾನಗಳಿಗೆ ಆಗಮಿಸಿ ಸ್ವಾಮಿಯ  ದರ್ಶನ ಪಡೆದರು. ದೇವಾಲಯಗಳಲ್ಲಿ ನಿರ್ಮಿಸಿದ್ದ ವೈಕುಂಠ ದ್ವಾರ ಪ್ರವೇಶಿಸಿ ಧನ್ಯತೆ ಮೆರೆದರು.

ಇದಲ್ಲದೆ, ನಗರದ ಉತ್ತರಾಧಿ ಮಠದಲ್ಲಿ ವೈಕುಂಠ ಏಕಾದರ್ಶಿ ಪ್ರಯುಕ್ತ ಬೆಳಗ್ಗೆಯಿಂದಲೇ ವಿಷ್ಣುಪಾದ ಪೂಜೆ, ಪಂಚಾಮೃತ, ಸರ್ವಮೂಲ ಪಾರಾಯಣ, ಭಜನೆ, ಅಷ್ಟೋತ್ತರ, ಮೂಲರಾಮದೇವರ ಪೂಜೆ, ಮಂಗಳ ಮಹೋತ್ಸವ ನೆರವೇರಿದವು. ರಾಜಾಜಿನಗರದ 5ನೇ ಬ್ಲಾಕ್‌ನ ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ಶ್ರೀನಿವಾಸ ಸ್ವಾಮಿಗೆ ಮಹಾಭಿಷೇಕ, ಪಂಚಾಮೃತ ಅಭಿಷೇಕ, ಸುಪ್ರಭಾತ ಸೇವೆ, ಮಹಾಮಂಗಳರಾತಿ ನಡೆದವು.

ಶ್ರೀರಾಮಪುರದ ರಾಮಚಂದ್ರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಗಾಯನ, ವೈಯಾಲಿಕಾವಲ್‌ನ ತಿರುಮಲ ತಿರುಪತಿ ದೇವಾಲಯದಲ್ಲಿ ಸತೀಶ್‌ ಶರ್ಮಾ ಹಾಗೂ ಕಿರಣ್‌ ಶರ್ಮಾ ಅವರಿಂದ ವೇದಪಾರಾಯಣ, ವಿದ್ವಾನ್‌ ಬಿ.ಹರಿಪ್ರಸಾದ್‌ ಅವರಿಂದ ನಾದಸ್ವರ, ವಾಸವಿ ಮಹಿಳಾ ಮಂಡಳಿಯಿಂದ ವಿಷ್ಣುಪಾರಾಯಣ, ವಿದ್ವಾನ್‌ ಉಮಾ ಕುಮಾರ್‌ ಅವರಿಂದ ಭಕ್ತಿ ಸಂಗೀತ, ಭಾರತಿ ತೀರ್ಥ ಭಜನ ಮಂಡಳಿಯಿಂದ ಭಜನೆ, ಎಸ್‌.ಎನ್‌.ಸುರೇಶ್‌ ದಾಸ್‌ ಅವರಿಂದ ಹರಿಕಥೆ ಆಯೋಜಿಸಲಾಗಿತ್ತು. 

ಅದೇ ರೀತಿ ವೈಕುಂಠ ಏಕಾದಶಿ ಪ್ರಯುಕ್ತ ಪಾಂಡುರಂಗ ವಿಷ್ಣುಸಹಸ್ರನಾಮ ಮಂಡಳಿಯಿಂದ ಮಲ್ಲೇಶ್ವರ ಆಟದ ಮೈದಾನದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ, ಅರಿಶಿನ -ಕುಂಕುಮ ಹಂಚಿಕೆ, ಅಕ್ಷತೆ ತುಳಸಿ, ಹೂವಿನ ಅರ್ಚನೆ ಹಾಗೂ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. 

ಇಸ್ಕಾನ್‌ನಲ್ಲಿ ವೈಭವದ ವೈಕುಂಠ ಏಕಾದಶಿ 
ವಿಷ್ಣುವಿನ 10 ಅವತಾರಗಳಲ್ಲಿ ಕೃಷ್ಣಾವತಾರವೂ ಒಂದು. ಹಾಗಾಗಿ ಯಶವಂತಪುರ ಬಳಿಯ ಹರೇ ಕೃಷ್ಣಗಿರಿ “ಇಸ್ಕಾನ್‌’ನಲ್ಲೂ ವೈಭವದ ವೈಕುಂಠ ಏಕಾದರ್ಶಿ ಭಾನುವಾರ ನೆರವೇರಿತು. ನಗರದ ನಾನಾ ಭಾಗಗಳಿಂದ ಆಗಮಿಸಿದ ಲಕ್ಷಾಂತರ ಭಕ್ತರು ಸಾಲುಗಟ್ಟಿ ನಿಂತು ಶ್ರೀ ಕೃಷ್ಣನ ದರ್ಶನ ಪಡೆದರು.

ಮುಂಜಾನೆಯಿಂದಲೇ ವೇದ ಮಂತ್ರಗಳೊಂದಿಗೆ ಶ್ರೀನಿವಾಸನ ಮೂರ್ತಿಗೆ ಹಾಲು, ಮೊಸರು, ತುಪ್ಪ, ಬೆಣ್ಣೆ, ಜೇನುತುಪ್ಪ, ಹಣ್ಣಿನ ರಸದ ಅಭಿಷೇಕ ನೆರವೇರಿಸಲಾಯಿತು. ಬಳಿಕ ವೈವಿದ್ಯಮಯ ಪುಷ್ಪಗಳಿಂದ ಗೋವಿಂದನ್ನು ಅಲಂಕರಿಸಿ, ಮಹಾಮಂಗಳಾರತಿ ನೆರವೇರಿಸಲಾಯಿತು. ನಂತರ ರಾಧಾ ಕೃಷ್ಣ ಉತ್ಸವ ಮೂರ್ತಿಯನ್ನು ಲಕ್ಷ್ಮೀ-ನಾರಾಯಣನ ಅಲಂಕಾರದಲ್ಲಿ ಇಸ್ಕಾನ್‌ ಸುತ್ತಲ ರಸ್ತೆಗಲಲ್ಲಿ ಮೆರವಣಿಗೆ ನಡೆಸಲಾಯಿತು. 

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.