ಅಕ್ರಮ ಮನೆಗಳಿಗೆ ಹಕ್ಕುಪತ್ರ
Team Udayavani, Sep 12, 2019, 3:06 AM IST
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸರ್ಕಾರಿ ಕಂದಾಯ ಭೂಮಿಯಲ್ಲಿ 1,200 ಚದರ ಅಡಿಗಿಂತ ಕಡಿಮೆ ವಿಸ್ತೀರ್ಣದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿರುವವರಿಗೆ ಹಕ್ಕುಪತ್ರ ಜತೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಂದಾಯ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡಿರುವವರ ಪೈಕಿ ನಿಯಮ 94ಸಿಸಿ ಅಡಿ 10,000 ಕುಟುಂಬಗಳಿಗೆ ನವೆಂಬರ್‌ನೊಳಗೆ ಹಕ್ಕುಪತ್ರದ ಜತೆಗೆ ನೋಂದಣಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ 30- 40 ವರ್ಷಗಳಿಂದ ಅಕ್ರಮವಾಗಿ ಮನೆ ನಿರ್ಮಿಸಿ ಸಾಕಷ್ಟು ಮಂದಿ ನೆಲೆಸಿದ್ದಾರೆ. ಆ ಮನೆಗಳನ್ನು ನಿಯಮ 94ಸಿಸಿ ಅಡಿ ಸಕ್ರಮೀಕರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನವೆಂಬರ್‌ನಲ್ಲಿ 10,000 ಮಂದಿಗೆ ಹಕ್ಕುಪತ್ರದ ಜತೆಗೆ 50 ರೂ. ಶುಲ್ಕದಲ್ಲಿ ಆಸ್ತಿ ನೋಂದಣಿ ಮಾಡಿಕೊಡಲಾಗುವುದು. ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನ ಇಲ್ಲವೇ ಅರಮನೆ ಮೈದಾನದಲ್ಲಿ ಸಮಾವೇಶ ನಡೆಸಿ ಹಕ್ಕುಪತ್ರ ವಿತರಣೆ ಜತೆಗೆ ಆಸ್ತಿ ನೋಂದಣಿ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಬೆಂಗಳೂರು ಪೂರ್ವ, ಉತ್ತರ, ದಕ್ಷಿಣ, ಯಲಹಂಕ, ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ನಿಯಮ 94ಸಿಸಿ ಅಡಿ ಅಕ್ರಮ ಮನೆ ಸಕ್ರಮೀಕರಣಕ್ಕೆ 52,813 ಅರ್ಜಿ ಸ್ವೀಕೃತವಾಗಿತ್ತು. ಈ ಪೈಕಿ 11,964 ಅರ್ಜಿ ಮಂಜೂರಾಗಿದ್ದರೆ, 25,553 ಅರ್ಜಿ ತಿರಸ್ಕೃತವಾಗಿತ್ತು. 15,296 ಅರ್ಜಿಗಳು ಬಾಕಿ ಇವೆ. ಮಂಜೂರಾದ ಅರ್ಜಿಗಳ ಪೈಕಿ 5868 ಪ್ರಕರಣಗಳಲ್ಲಿ ಹಕ್ಕುಪತ್ರ ನೀಡಿದ್ದರೆ, 6096 ಪ್ರಕರಣಗಳಲ್ಲಿ ಹಕ್ಕುಪತ್ರ ನೀಡಬೇಕಿದೆ. ಒಟ್ಟು 10,000 ಕುಟುಂಬಗಳನ್ನು ಸಕ್ರಮೀಕರಣಗೊಳಿಸಲು ಕಂದಾಯ ಇಲಾಖೆ ಮುಂದಾಗಿದೆ.
ಒಟ್ಟು 1,200 ಅಡಿ ಚದರ ಅಡಿಗಿಂತ ಕಡಿಮೆ ವಿಸ್ತೀರ್ಣದಲ್ಲಿ ನಿರ್ಮಿಸಿಕೊಂಡಿರುವ ಮನೆಗಳಿಗೆ ಮಾತ್ರ ಅನ್ವಯವಾಗಲಿದೆ. ಬದಲಿಗೆ ವ್ಯಾಪಾರ, ಮಳಿಗೆ, ವಾಣಿಜ್ಯ ಚಟುವಟಿಕೆ ನಡೆಸುತ್ತಿದ್ದರೆ ಅನ್ವಯವಾಗದು. 15 ವರ್ಷ ಮಾರಾಟಕ್ಕೆ ಅವಕಾಶವಿರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.