ವಿವಾಹವಾಗುವುದಾಗಿ ವಂಚನೆ; ಯುವತಿ ಆತ್ಮಹತ್ಯೆ ಯತ್ನ
Team Udayavani, Feb 6, 2019, 6:41 AM IST
ಬೆಂಗಳೂರು: ಪ್ರೀತಿಸಿ ವಂಚನೆಗೊಳಗಾದ ವಿಚಾರ ಕುರಿತು ಆಪ್ತಸಮಾಲೋಚನೆಗೆ ಬಂದಿದ್ದ ಯುವತಿಯೊಬ್ಬಳು ಕೈಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಬೆಂಗಳೂರಿನ ಹಲಸೂರು ನಿವಾಸಿ ಸಂಗೀತಾ(25)(ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆಗೆ ಯತ್ನಿಸಿದ ಯುವತಿ. ಸಂತ್ರಸ್ತೆಗೆ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರು ಮೂಲದ ಪ್ರದೀಪ್(ಹೆಸರು ಬದಲಾಯಿಸಲಾಗಿದೆ) ವಂಚನೆ ಮಾಡಿದವನು.
ಮೈಸೂರು ಮೂಲದ ಪ್ರದೀಪ್ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿದ್ದು, ಇಲ್ಲಿಯೇ ವಾಸವಾಗಿದ್ದಾನೆ. ಈ ವೇಳೆ ತನ್ನ ಸ್ನೇಹಿತರ ಮೂಲಕ ಹಲಸೂರು ನಿವಾಸಿ ಸಂಗೀತಾ ಅವರನ್ನು ಪರಿಚಯಿಸಿಕೊಂಡಿದ್ದಾನೆ. ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಕಳೆದ 10 ತಿಂಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಪ್ರದೀಪ್ ಮದುವೆ ಮಾಡಿಕೊಳ್ಳುವುದಾಗಿ ಹೇಳಿ ಆಕೆಯ ಜತೆ ಸಲುಗೆಯಿಂದಿದ್ದ.
ಇದೀಗ ಸಂತ್ರಸ್ತೆ ನಾಲ್ಕು ತಿಂಗಳ ಗರ್ಭಿಣಿ. ಆದರೆ, ಕೆಲ ತಿಂಗಳಿಂದ ಪ್ರದೀಪ್ ಸಂತ್ರಸ್ತೆಯ ಸಂಪರ್ಕಕ್ಕೆ ಸಿಗದೆ, ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದ. ಇದರಿಂದ ಆತಂಕಗೊಂಡ ಸಂತ್ರಸ್ತೆ ಒಂದು ತಿಂಗಳ ಹಿಂದೆ ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿರುವ ವನಿತಾ ಸಹಾಯವಾಣಿ ಕೇಂದ್ರದಲ್ಲಿ ದೂರು ನೀಡಿದ್ದರು ಎಂದು ಕೇಂದ್ರದ ಅಧಿಕಾರಿಗಳು ಹೇಳಿದರು.
ಮದುವೆಗೆ ನಿರಾಕರಣೆ: ಸಂತ್ರಸ್ತೆಯ ದೂರಿನ ಸಂಬಂಧ ಸಹಾಯವಾಣಿ ಕೇಂದ್ರದ ಅಧಿಕಾರಿಗಳು ಇಬ್ಬರನ್ನು ಎರಡು ಬಾರಿ ಆಪ್ತಸಮಾಲೋಚನೆ ಮಾಡಿದ್ದಾರೆ. ಈ ವೇಳೆ ಕೆಲ ಷರತ್ತುಗಳನ್ನು ಒಪ್ಪಿಕೊಂಡರೆ, ಆಕೆಯನ್ನು ವಿವಾಹ ಮಾಡಿಕೊಳ್ಳುವುದಾಗಿ ಪ್ರದೀಪ್ ಹೇಳಿಕೆ ನೀಡಿದ್ದ. ಆತನ ಷರತ್ತುಗಳಿಗೆ ಸಂತ್ರಸ್ತೆ ಕೂಡ ಸಮ್ಮತಿ ಸೂಚಿಸಿದ್ದರು.
ಹೀಗಾಗಿ ಫೆ.5ರಂದು ಮತ್ತೂಮ್ಮೆ ಕೌನ್ಸೆಲಿಂಗ್‌ಗೆ ಬರುವಂತೆ ಕೇಂದ್ರದ ಅಧಿಕಾರಿಗಳೂ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಕೌನ್ಸೆಲಿಂಗ್‌ಗೆ ಬಂದ ಪ್ರದೀಪ್, ಸಂಗೀತಾರನ್ನು ಮದುವೆ ಮಾಡಿಕೊಳ್ಳಲು ಕಾಲವಕಾಶ ಬೇಕಿದೆ ಎಂದು ನುಣುಕಿಕೊಳ್ಳಲು ಯತ್ನಿಸಿದ್ದಾನೆ.
ಶೌಚಾಲಯದಲ್ಲಿ ಆತ್ಮಹತ್ಯೆಗೆ ಯತ್ನ: ಪ್ರಿಯಕರನ ಮಾತು ಕೇಳಿದ ಸಂತ್ರಸ್ತೆ ಆತಂಕಗೊಂಡು ಸಹಾಯವಾಣಿ ಕೇಂದ್ರದಿಂದ ಹೊರಬಂದು ಶೌಚಾಲಯಕ್ಕೆ ಹೋಗಿದ್ದಾರೆ. ಅನುಮಾನಗೊಂಡ ಪೋಷಕರು ಆಕೆಯ ಹಿಂದೆಯೇ ಹೋಗಿದ್ದಾರೆ. ಬಳಿಕ ಶೌಚಾಲಯದ ಬಾಗಿಲು ಹಾಕಿಕೊಂಡ ಸಂತ್ರಸ್ತೆ, ಗಾಜಿನ ಬಳೆಯ ಮೂಲಕ ಎಡಗೈ ಕೊಯ್ದುಕೊಂಡಿದ್ದಾರೆ.
ಇದನ್ನು ಗಮನಿಸಿದ ಆಕೆಯ ಸಂಬಂಧಿಕರು ಜೋರಾಗಿ ಕೂಗಿಕೊಂಡಿದ್ದಾರೆ. ಕೂಡಲೇ ನೆರವಿಗೆ ಧಾವಿಸಿದ ಕಚೇರಿಯ ಸಿಬ್ಬಂದಿ ಶೌಚಾಲಯದಿಂದ ಆಕೆಯನ್ನು ಹೊರ ಕರೆತಂದು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವನಿತಾ ಸಹಾಯವಾಣಿ ಕೇಂದ್ರದ ಅಧಿಕಾರಿಗಳು ಹೇಳಿದರು.
ಆತ್ಮಹತ್ಯೆಗೆ ಯತ್ನಿಸಿದ ಯುವತಿ ಮದುವೆಯಾಗಿಲ್ಲ. 10 ತಿಂಗಳ ಹಿಂದೆ ಯವಕನೊಬ್ಬನನ್ನು ಪ್ರೀತಿಸುತ್ತಿದ್ದರು. ಈಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾರೆ. ಮಂಗಳವಾರ ಕೌನ್ಸೆಲಿಂಗ್ ವೇಳೆ ಆತ ಮದುವೆಗೆ ಕಾಲವಕಾಶ ಕೇಳಿದ್ದ. ಇದರಿಂದ ಆತಂಕಗೊಂಡ ಸಂತ್ರಸ್ತೆ ಶೌಚಾಲಯದಲ್ಲಿ ಕೈ ಕೊಯ್ದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಂದು ವೇಳೆ ಯುವಕ ಮದುವೆಗೆ ನಿರಾಕರಿಸಿದರೆ, ಪೊಲೀಸರಿಗೆ ದೂರು ನೀಡಲಾಗುವುದು.
-ರಾಣಿ ಶೆಟ್ಟಿ, ವನಿತಾ ಸಹಾಯವಾಣಿ ಕೇಂದ್ರದ ಮುಖ್ಯಸ್ಥೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.