ಕಾಲರಾ ಮುನ್ನೆಚ್ಚರಿಕೆಗೆ ತಪಾಸಣೆ

Team Udayavani, Mar 11, 2020, 3:08 AM IST

kalara

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಲರಾ ಸೋಂಕು ತಡೆಯುವ ನಿಟ್ಟಿನಲ್ಲಿ ನಗರದ ಹೋಟೆಲ್‌ಗ‌ಳ ಅಡುಗೆ ಮಾಡುವ(ಕಿಚನ್‌) ಸ್ಥಳಗಳ ಸ್ವತ್ಛತೆ ಪರಿಶೀಲನೆ ಮಾಡುವಂತೆ ಪಾಲಿಕೆಯ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪಾಲಿಕೆಯ ಮುಖ್ಯ ಆರೋಗ್ಯಾಧಿಕಾರಿ(ಸಾರ್ವಜನಿಕ) ಡಾ.ವಿಜಯೇಂದ್ರ ತಿಳಿಸಿದರು.

ಕೊರೊನಾ ಹಾಗೂ ಕಾಲರಾಗೆ ಸಂಬಂಧಿಸಿದಂತೆ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಾಲರಾ ಸೋಂಕು ತಡೆಯುವ ಉದ್ದೇಶದಿಂದ ತೆರೆದಿಟ್ಟ ಆಹಾರ ಪದಾರ್ಥ ಮಾರಾಟ ಮಾಡುವುದನ್ನು ನಿಷೇಧ ಮಾಡಲಾಗಿದ್ದು, ತೆರೆದಿಟ್ಟ ಆಹಾರ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಪಾಲಿಕೆಯ ಆರೋಗ್ಯಾಧಿಕಾರಿಗಳು ಇನ್ನು ಎರಡು ದಿನಗಳಲ್ಲಿ ನಗರದ ಎಲ್ಲ ಹೋಟೆಲ್‌ಗ‌ಳ ಕಿಚನ್‌ ತಪಾಸಣೆ ಪ್ರಾರಂಭಿಸಲಿದ್ದಾರೆ. ಈ ವೇಳೆ ಲೋಪ ಕಂಡು ಬಂದರೆ ನಿರ್ದಾಕ್ಷ್ಯಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು ನಗರದಲ್ಲಿ ಕಾಲರಾ ಪ್ರಕರಣಗಳು ಪತ್ತೆಯಾದ ಹಿನ್ನಲೆ ಬಿಬಿಎಂಪಿ ಸೋಮವಾರದಿಂದಲೇ ಬೀದಿಬದಿ ಆಹಾರ ವಸ್ತುಗಳ ಮಾರಾಟ ನಿಷೇಧಿಸಿದ್ದು, ಬೋಂಡ, ಕಲ್ಲಂಗಡಿ, ಸೌತೆಕಾಯಿ, ಊಟ-ಉಪಹಾರಗಳನ್ನು ರಸ್ತೆ ಬದಿಯೇ ಮಾರಾಟ ಮಾಡುವವರ ಮಳಿಗೆಗಳನ್ನು ತೆರವು ಮಾಡುತ್ತಿದೆ.

ಕಲುಷಿತ ನೀರಿನಿಂದ ಕಾಲರಾ ಬರುವ ಹಿನ್ನಲೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಿಬಿಎಂಪಿ ಪಶ್ಚಿಮ ವಿಭಾಗದ ಆರೋಗ್ಯಾಧಿಕಾರಿ ಬಾಲಸುಂದರ್‌ ಮಾತನಾಡಿ, ಆಯುಕ್ತರ ಆದೇಶದ ಮೇರೆಗೆ ಈಗಾಗಲೇ ಮುನ್ನೂರಕ್ಕೂ ಹೆಚ್ಚು ಅಂಗಡಿಗಳನ್ನು ತೆರವು ಮಾಡಲಾಗಿದೆ. ತೆರವು ಮಾಡಿದ ಜಾಗದಲ್ಲಿ ಮತ್ತೆ ತಳ್ಳುವ ಗಾಡಿಗಳು ತಂದರೆ ವಸ್ತುಗಳನ್ನು ಜಪ್ತಿ ಮಾಡಲಾಗುವುದು ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಸಂಬಂಧ ವದಂತಿಗಳು ಹರಿಬಿಡುತ್ತಿದ್ದು, ಇದರಿಂದ ಜನರು ಆತಂಕಕ್ಕೀಡಾ ಗುತ್ತದೆ. ಇದರಿಂದ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದ್ದು, ಜಾಲತಾಣಗಳಲ್ಲಿ ವದಂತಿಗಳನ್ನು ಹರಡದಂತೆ ನಿರ್ಬಂಧ ಹೇರಬೇಕು. ಹಾಗೇ ಜನರು ಕೂಡ ನಿರ್ಲಕ್ಷ್ಯವಹಿಸದೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.
-ಚಂದ್ರ, ಬೆಂಗಳೂರು ನಿವಾಸಿ

ದುಡಿಯಲು ಬೆಂಗಳೂರಿಗೆ ಬಂದಿದ್ದೇವೆ. ಆದರೆ, ಇಲ್ಲಿ ಕೊರೊನಾ ಆತಂಕ ಎದುರಾಗಿದ್ದು, ರಸ್ತೆಯಲ್ಲಿ ಓಡಾಟ ನಡೆಸಲು ಮತ್ತು ಹೋಟೆಲ್‌ಗ‌ಳಲ್ಲಿ ಊಟ ಮಾಡಲು ಭಯವಾಗಿದೆ. ಮನೆಯವರು ಊರಿಗೆ ಮರಳಿ ಬರುವಂತೆ ತಿಳಿಸಿದ್ದಾರೆ.
-ಪ್ರವೀಣ, ಯಾದಗಿರಿ

ಟಾಪ್ ನ್ಯೂಸ್

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.