ಕೆಮಿಕಲ್‌ ಫ್ರೀ ಗಣೇಶನ ಮಾಡುವ ಕಮಲಿನಿ ಸಂಸ್ಥೆ

Team Udayavani, Aug 19, 2017, 11:14 AM IST

ganesha.jpg

ಬೆಂಗಳೂರು: ಯಾವುದೇ ರಾಸಾಯನಿಕ ಪದಾರ್ಥ ಹೊಂದಿರುವ ಬಣ್ಣಗಳನ್ನು ಉಪಯೋಗಿಸದೇ ಮಲ್ಲೇಶ್ವರದ ಕಮಲಿನಿ ಸಂಸ್ಥೆಯು ಪರಿಸರ ಸ್ನೇಹಿ ಗಣೇಶನ ವಿಗ್ರಹ ಸಿದ್ಧಪಡಿಸಿದೆ. ಪ್ಲಾಸ್ಟರ್‌ ಆಫ್ ಪ್ಯಾರಿಸ್‌ (ಪಿಒಪಿ) ನಡುವೆ ಕಳೆದು ಹೋಗಿದ್ದ ಪರಿಸರ ಸ್ನೇಹಿ ಗಣೇಶಮೂರ್ತಿಗೆ ಬೇಡಿಕೆ ಹೆಚ್ಚುತ್ತಿದೆ.

ಗಣೇಶನ ಭಕ್ತರು ಮತ್ತು ಯುವಜನತೆ ಪಿಒಪಿ ಗಣೇಶ ವಿಗ್ರಹದೆಡೆಗೆ ಆಕರ್ಷಿತರಾಗುತ್ತಿದ್ದ ವೇಳೆಯಲ್ಲೂ ಕೂಡ ಕಮಲಿನಿ ಸಂಸ್ಥೆ ಪರಿಸರ ಸ್ನೇಹಿ ಗಣೇಶ ವಿಗ್ರಹಕ್ಕೆ ಆದ್ಯತೆ ನೀಡಿತ್ತು. ಪಿಒಪಿ ಮತ್ತು ರಾಸಾಯನಿಕ ಬಣ್ಣಗಳನ್ನು ಬಳಸಿ ತಯಾರಿಸಿದ ಗಣೇಶ ವಿಗ್ರಹಗಳನ್ನು ನೀರಿಗೆ ಹಾಕಿ ಜಲಮೂಲ ನಾಶ ಮಾಡಬಾರದು ಎಂಬ ಉದ್ದೇಶದಿಂದಲೇ ಕಮಲಿನಿ ಸಂಸ್ಥೆ ಪರಿಸರ ಸ್ನೇಹಿ ಗಣೇಶ ವಿಗ್ರಹಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ.

ಕಡಿಮೆ ದರ-ಉತ್ತಮ ಗುಣಮಟ್ಟ
ಪ್ರಸ್ತುತ ಕಮಲಿನಿ ಸಂಸ್ಥೆಯಲ್ಲಿ 1ರಿಂದ 6 ಅಡಿಗಳ ವರೆಗಿನ ಗಣೇಶನ ವಿಗ್ರಹಗಳು ಲಭ್ಯವಿದೆ. 1 ಅಡಿ ಗಣೇಶ ವಿಗ್ರಹಕ್ಕೆ 400 ರೂ.ಗಳು. 1.50 ಅಡಿ ವಿಗ್ರಹಕ್ಕೆ 500 ರೂ.ಗಳು, 2 ಅಡಿಗೆ 600 ರೂ.ಗಳಂತೆ ಬೆಲೆ ನಿಗದಿಪಡಿಸಲಾಗಿದೆ. ಗೌರಿ ವಿಗ್ರಹ (ದೊಡ್ಡದು)ಕ್ಕೆ 250 ರೂ. ಮತ್ತು 2.50 ಇಂಚಿನ ವಿಗ್ರಹಕ್ಕೆ 180 ರೂ.ನಂತೆ ಮಾರಾಟ ಮಾಡಲಾಗುತ್ತಿದೆ.  ಗಣೇಶ ಮತ್ತು ಗೌರಿ ವಿಗ್ರಹಗಳಿಗೆ ಯಾವುದೇ ರಾಸಾಯನಿಕ ಬಣ್ಣ ಬಳಸಿಲ್ಲ. ಜೇಡಿ ಮಣ್ಣನ್ನು ಬಳಕೆ ಮಾಡಿ ವಿಗ್ರಹ ಮಾಡಲಾಗಿದೆ. 

ಪ್ರತಿ ವರ್ಷವೂ ಪರಿಸರ ಸ್ನೇಹಿ ಗಣೇಶ ಮತ್ತು ಗೌರಿ ವಿಗ್ರಹಗಳನ್ನು ಮಾರಾಟ ಮಾಡುತ್ತಿದ್ದೇವೆ. ನಮ್ಮ ಗ್ರಾಹಕರು ಕೂಡ ಪರಿಸರ ಸ್ನೇಹಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವವರಾಗಿದ್ದಾರೆ. ಹಬ್ಬಕ್ಕೂ ಎರಡು ವಾರ ಮುಂಚಿನಿಂದಲೇ ಬುಕ್ಕಿಂಗ್‌ ಮಾಡಿಕೊಳ್ಳಲಾಗುತ್ತದೆ. ಈ ಬಾರಿ ಆ.16ರಿಂದ ಬುಕ್ಕಿಂಗ್‌ ಪ್ರಾರಂಭವಾಗಿದ್ದು, ಈಗಾಗಲೇ ಸುಮಾರು 40ಕ್ಕೂ ಹೆಚ್ಚು ಮೂರ್ತಿಗಳು ಬುಕ್‌ ಆಗಿವೆ. ಹಬ್ಬಕ್ಕೆ ಇನ್ನೂ 5 ದಿನ ಬಾಕಿ ಇರುವುದರಿಂದ ಈ ಸಂಖ್ಯೆ ಹೆಚ್ಚುವ ನಿರೀಕ್ಷೆ ಇದೆ.

ಇತ್ತೀಚೆಗೆ ನಗರದ ಹಲವು ಕಡೆಗಳಲ್ಲಿ ಗಣೇಶ ವಿಗ್ರಹ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಬುಕ್ಕಿಂಗ್‌ ಮಾಡಿದವರಿಗೆ ಮೊದಲ ಆದ್ಯತೆ ನೀಡುತ್ತಿದ್ದೇವೆ. ಸುಮ್ಮನೆ ಹೆಚ್ಚು ವಿಗ್ರಹಗಳನ್ನು ಮಾಡಿಟ್ಟುಕೊಂಡು ಮಾರಾಟವಾಗದಿದ್ದರೆ ಸಮಸ್ಯೆವುಂಟಾಗುತ್ತದೆ. ಆದ್ದರಿಂದ ಎಷ್ಟು ಬೇಕೋ ಅಷ್ಟು ವಿಗ್ರಹಗಳನ್ನು ಮಾತ್ರ ವಿಗ್ರಹಗಳನ್ನು ತಂದಿಟ್ಟುಕೊಂಡಿದ್ದೇವೆ ಎನ್ನುತ್ತಾರೆ ಕಮಲಿನಿ ಸಂಸ್ಥೆ ಮುಖ್ಯಸ್ಥರು. 

ಭೇಟಿ ಮಾಡಿ
ಪರಿಸರ ಸ್ನೇಹಿ ಗೌರಿ-ಗಣೇಶ ವಿಗ್ರಹಗಳು ಬೇಕೆನ್ನಿಸಿದರೆ ಭಕ್ತರು, ಕಮಲಿನಿ, ಶ್ರೀಭೂಮ, ನಂ.37, 17ನೇ ತಿರುವು, ಮಲ್ಲೇಶ್ವರಂ, ಬೆಂಗಳೂರು-57. ದೂರವಾಣಿ: 080-23567470 ಸಂಪರ್ಕಿಸಬಹುದು. ಆ.24ರಂದು ಗೌರಿ ಹಬ್ಬ ಇದ್ದು ಅಂದು ಮಧ್ಯಾಹ್ನದ ವರೆಗೆ ಮಾತ್ರ ಅಂಗಡಿ ಕಾರ್ಯನಿರ್ವಹಿಸಲಿದೆ. 

* ಸಂಪತ್‌ ತರೀಕೆರೆ

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.