ಕನ್ನಡೇತರರಿಗೆ ಕನ್ನಡ ಕಲಿಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ
Team Udayavani, Aug 19, 2021, 8:18 PM IST
ಬೆಂಗಳೂರು: ಬೆಂಗಳೂರಿನಲ್ಲಿ ಕನ್ನಡೇತರರಿಗೆ ಕನ್ನಡ ಭಾಷೆ ಕಲಿಸುವ ಕುರಿತು ಕಾರ್ಯಕ್ರಮ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲಹೆ ನೀಡಿದರು.
ಅವರು ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹಮ್ಮಿಕೊಂಡಿದ್ದ ಕರ್ನಾಟಕ ಸರ್ಕಾರದ ಕನ್ನಡ ಕಾಯಕ ಕೃತಿಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಕನ್ನಡಿಗರು ಇತರ ರಾಜ್ಯಗಳಿಗೆ ಹೋದಾಗ ಅಲ್ಲಿನ ಭಾಷೆಯನ್ನು ಕಲಿಯುತ್ತಾರೆ. ಅದೇ ರೀತಿ ಬೆಂಗಳೂರಿನಲ್ಲಿರುವ ಕನ್ನಡೇತರರೂ ಕನ್ನಡ ಕಲಿಯುವಂತಾಗಬೇಕು ಎಂದು ಆಶಿಸಿದರು.
1983ರಲ್ಲಿ ಕನ್ನಡ ಕಾವಲು ಸಮಿತಿ ಎಂಬ ಹೆಸರಿನಲ್ಲಿ ಪ್ರಾರಂಭವಾದ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ತನ್ನ ಕಾರ್ಯವ್ಯಾಪ್ತಿಯನ್ನೂ ವಿಸ್ತರಿಸಿದೆ. ಕನ್ನಡ ಭಾಷೆ ಕುರಿತಂತಹ ಇತರ ಸಂಸ್ಥೆಗಳ ಸಹಯೋಗದಿಂದ ವಿವಿಧ ಕಾರ್ಯಕ್ರಮಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ಪ್ರಾಧಿಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ವಿವರ ನೀಡಿದರು.
ಸಮಾರಂಭದಲ್ಲಿ ಸಾಹಿತಿಗಳಾದ ದೊಡ್ಡರಂಗೇಗೌಡ, ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಜೆ. ರವಿಶಂಕರ್ ಮತ್ತು ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.