ಅಬಕಾರಿ ಆಯುಕ್ತರಿಗೆ ಮುಖ್ಯಮಂತ್ರಿ ಕ್ಲಾಸ್
Team Udayavani, Jun 9, 2018, 6:10 AM IST
ಬೆಂಗಳೂರು: ಚುನಾವಣಾ ಕಾರ್ಯಕ್ಕಾಗಿ ವಿವಿಧೆಡೆ ನಿಯೋಜನೆಗೊಂಡಿದ್ದ ಸಿಬ್ಬಂದಿಯನ್ನು ಅವರ ಮೂಲ
ಸ್ಥಳಗಳಿಗೆ ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದರೂ ಅಬಕಾರಿ ಇಲಾಖೆ ಸಿಬ್ಬಂದಿಯನ್ನು
ಮೂಲ ಸ್ಥಳಗಳಿಗೆ ವರ್ಗಾವಣೆ ಮಾಡದಿರುವ ಇಲಾಖೆ ಆಯುಕ್ತ ಮನೀಶ್ ಮೌದ್ಗಿಲ್ ವಿರುದ್ಧ ಮುಖ್ಯಮಂತ್ರಿ
ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದು, ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ಚುನಾವಣಾ ಕಾರ್ಯಕ್ಕಾಗಿ ವಿವಿಧೆಡೆ ನಿಯೋಜಿಸಿರುವ ಸಿಬ್ಬಂದಿಯವನ್ನು ಮೂಲ ಸ್ಥಾನಗಳಿಗೆ ವರ್ಗಾವಣೆ
ಮಾಡುವಂತೆ ಚುನಾವಣಾ ಆಯೋಗ ಮತ್ತು ಸರ್ಕಾರ ಸೂಚನೆ ನೀಡಿದ್ದರೂ ಅಬಕಾರಿ ಇಲಾಖೆಯಲ್ಲಿ ಈ ಆದೇಶ
ಪಾಲನೆ ಮಾಡಿಲ್ಲ ಎಂದರೆ ಹೇಗೆ? ಸರ್ಕಾರಕ್ಕಿಂತ ಒಬ್ಬ ಐಎಎಸ್ ಅಧಿಕಾರಿ ದೊಡ್ಡವನೇ ಎಂದು ಗುಡುಗಿದ್ದಾರೆ.
ಅಲ್ಲದೆ, ಸೋಮವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿಯೂ ಮನೀಶ್ ಮೌದ್ಗಿಲ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿ ಕೇವಲ ಪ್ರಾಮಾಣಿಕನಾಗಿದ್ದರೆ ಸಾಲದು, ಮಾನವೀಯತೆಯೂ ಇರಬೇಕು. ಅಧಿಕಾರಿ ಎಷ್ಟೇ
ದೊಡ್ಡವನಿರಲಿ, ಸರ್ಕಾರದ ಆದೇಶ ಪಾಲಿಸಲೇ ಬೇಕು. ಇಲ್ಲದಿದ್ದರೆ ಕೆಲಸಕ್ಕೆ ಬಾರದ ಸ್ಥಳದಲ್ಲಿ ಕುಳಿತುಕೊಳ್ಳುವಂತೆ ಮಾಡಬೇಕಾಗುತ್ತದೆ. ಸಿಬ್ಬಂದಿ ವರ್ಗಾವಣೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶವನ್ನು ಧಿಕ್ಕರಿಸಿರುವ ಅಧಿಕಾರಿಗೆ ಸೋಮವಾರದವರೆಗೆ ಕಾಲಾವಕಾಶ ನೀಡಲಾಗಿದೆ. ಒಂದು ವೇಳೆ ಅಷ್ಟರೊಳಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.