ಶಿಕ್ಷಕರು ಜವಾಬ್ದಾರಿ ಅರಿತು ಸೇವೆ ಸಲ್ಲಿಸಿ: ಸಿಎಂ


Team Udayavani, Sep 6, 2017, 8:10 AM IST

CM-Day-5-9.jpg

ಬೆಂಗಳೂರು: ಬುದ್ಧ, ಬಸವ, ಕನಕ, ಗಾಂಧಿ, ಅಂಬೇಡ್ಕರ್‌ ಮೊದಲಾದವರ ಕನಸಿನ ಭಾರತ ನಿರ್ಮಾಣದ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಸಮಾನತೆ, ಸಾಮಾಜಿಕ ನ್ಯಾಯ, ಭ್ರಾತೃತ್ವ ಹಾಗೂ ಸಹಬಾಳ್ವೆ ಪ್ರತಿಯೊಬ್ಬರಿಗೂ ಸಿಗುವಂತೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಂಗಳವಾರ ನಗರದ ಅಂಬೇಡ್ಕರ್‌ ಭವನದಲ್ಲಿ ಹಮ್ಮಿ ಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ 31 ಉತ್ತಮ ಶಿಕ್ಷಕ ಸಹಿತ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದ ಶಿಕ್ಷಕರನ್ನು ಗೌರವಿಸಿ  ಅವರು ಮಾತನಾಡಿದರು.

ಡಾ| ಸರ್ವೇಪಲ್ಲಿ ರಾಧಾಕೃಷ್ಣನ್‌ ಮೈಸೂರು ಮಹಾರಾಜ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಪ್ರತಿ ಶಿಕ್ಷಕನಿಗೆ ರಾಧಾಕೃಷ್ಣನ್‌ ಸ್ಫೂರ್ತಿಯಾಗಿದ್ದು, ಶಿಕ್ಷಕ ವೃತ್ತಿಯ ಪೂಜ್ಯತೆ ಹಾಗೂ ಶಿಕ್ಷಕ, ವಿದ್ಯಾರ್ಥಿ ನಡುವಿನ ಸಂಬಂಧದ ಪಾವಿತ್ರ್ಯವನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದರು. ಶಾಲಾ ಶಿಕ್ಷಕರ ನಡವಳಿಕೆ, ಗುಣ ಮತ್ತು ಕ್ರಿಯಾಶೀಲತೆ ಮಕ್ಕಳ ಮೇಲೆ ಪ್ರಭಾವ ಬೀರುವಂತಿರಬೇಕು. ದೇಶದ ಅಥವಾ ರಾಜ್ಯದ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅಪಾರವಾಗಿದೆ. ಮಾನವ ಸಂಪನ್ಮೂಲದಲ್ಲಿ ಅಭಿವೃದ್ಧಿ ಹೊಂದದ ದೇಶ ಸರ್ವಾಂಗೀಣ ವಿಫ‌ಲತೆ ಕಾಣುತ್ತದೆ. ಸಾಮಾಜಿಕ ವ್ಯವಸ್ಥೆಯಲ್ಲಿ ಯುವ ಸಮುದಾಯವನ್ನು ಸಜ್ಜುಗೊಳಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಕಿವಿ ಮಾತು ಹೇಳಿದರು.

ಶಿಕ್ಷಕರು ಓದು, ಬರಹ ಕಲಿಸುವ ಜತೆಗೆ ಬದುಕಿಗೆ ಸ್ಪಂದಿಸುವ ಮತ್ತು ವ್ಯಕ್ತಿತ್ವ ವಿಕಸನದ ಶಿಕ್ಷಣವನ್ನು ನೀಡಬೇಕು. ಮಕ್ಕಳಲ್ಲಿರುವ ಪ್ರತಿಭೆಯ ಅನಾವರಣ ಮಾಡಿ, ಸರಕಾರಿ ಶಾಲೆಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಮಾಡಬೇಕು ಎಂಬ ಸಲಹೆ ನೀಡಿದರು.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇಠ್ ಮಾತನಾಡಿ, ಈಗಾಗಲೇ 7,905 ಪ್ರಾ.ಶಾಲಾ ಶಿಕ್ಷಕರ ನೇಮಕ ಮಾಡಿದ್ದೇವೆ, 10 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಿದ್ದೇವೆ. ಭಾಷಾ ಹಾಗೂ ವಿಷಯ ಶಿಕ್ಷಕರ ನೇಮಕಕ್ಕೂ ಚಾಲನೆ ನೀಡಿದ್ದೇವೆ. ಗ್ರಂಥಪಾಲಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಜತೆಗೆ  ಡಿ ದರ್ಜೆ ನೌಕರರ ಭರ್ತಿಗೂ ಚಿಂತನೆ ನಡೆಯುತ್ತಿದೆ. ಶಾಲೆಗಳ ಉನ್ನತೀಕರಣ ಮಾಡುತ್ತಿದ್ದೇವೆ ಎಂದರು.

ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರ ಶಾಲೆಗೆ ಪ್ರತಿವರ್ಷ ಇಲಾಖೆಯಿಂದ ವಿಶೇಷ ಬಹುಮಾನ ನೀಡಲಾಗುತ್ತದೆ. ಈ ಹಿಂದೆ ಕಂಪ್ಯೂಟರ್‌, ಪುಸ್ತಕ ಇತ್ಯಾದಿ ನೀಡುತ್ತಿದ್ದೆವು. ಈ ವರ್ಷ ಆ ಶಾಲೆಯ ಅಭಿವೃದ್ಧಿಗೆ 2.50 ಲಕ್ಷ ನೀಡಲಿದ್ದೇವೆ.
– ತನ್ವೀರ್‌ ಸೇಠ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ.

ಟಾಪ್ ನ್ಯೂಸ್

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.