ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ಆರಂಭ
Team Udayavani, Sep 24, 2017, 6:30 AM IST
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ತವಕಿಸುತ್ತಿರುವ ಕಾಂಗ್ರೆಸ್, ಶನಿವಾರ ರಾಜ್ಯಾದ್ಯಂತ “ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿತು. ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪ್ರಧಾನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಇದೇ ವೇಳೆ, ರಾಜ್ಯದ ಇತರ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿಯೂ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಅಲ್ಲದೆ, ರಾಜ್ಯ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯ ಕಿರುಹೊತ್ತಿಗೆಯನ್ನು ವಿತರಿಸಲಾಯಿತು.
ಮಹದೇವಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದರು. ಕೇಂದ್ರ ಸರ್ಕಾರದಿಂದ ರಾಜ್ಯದ ರೈತರ ಸಾಲ ಮನ್ನಾ ಮಾಡಿಸಲು ರಾಜ್ಯ ಬಿಜೆಪಿಯವರಿಗೆ ಮೀಟರ್ ಇಲ್ಲ ಎಂದು ವ್ಯಂಗ್ಯವಾಡಿದರು. ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ರೈತರ ಸಾಲ ಮನ್ನಾ ಮಾಡಿರುವುದನ್ನು “ಲಾಲಿ ಪಪ್ ನೀಡಿದ್ದಾರೆ’ ಎಂದಿದ್ದಾರೆ.
ಹಾಗಿದ್ದರೆ, ಕೇಂದ್ರ ಸಚಿವರು ರಾಜ್ಯದ ರೈತರ 42 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿ ಅವರೂ ಲಾಲಿಪಪ್ ಕೊಡಿಸಲಿ ಎಂದು ಸವಾಲು ಹಾಕಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ರೈತರ ಸಾಲ ಮನ್ನಾ ಮಾಡದಿದ್ದರೆ, ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದ್ದರು. ಇಲ್ಲಿ ಉತ್ತರನ ಪೌರುಷ ತೋರಿಸುವವರು ದೆಹಲಿಗೆ ತೆರಳಿ ಪ್ರಧಾನಿಯಿಂದ ಸಾಲ ಮನ್ನಾ ಮಾಡಿಸಲಿ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.