ತಿಂಗಳಲ್ಲಿ 2 ದಿನ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಿ: ಸಿಎಂ


Team Udayavani, May 7, 2017, 10:14 AM IST

170506kpn82.jpg

ಬೆಂಗಳೂರು: ಹಿರಿಯ ಐಎಎಸ್‌ ಅಧಿಕಾರಿಗಳಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಮಗೆ ನಿಗದಿಪಡಿಸಿದ ಜಿಲ್ಲೆಗಳಿಗೆ ತಿಂಗಳಿಗೆ ಎರಡು ದಿನ ಭೇಟಿ ನೀಡುವುದು ಮತ್ತು ಆ ಪೈಕಿ ಒಂದು ದಿನ ಅಲ್ಲೇ ಜಿಲ್ಲೆಯಲ್ಲೇ ವಾಸ್ತವ್ಯ ಹೂಡುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ವಿಧಾನಸೌಧದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ತಿಂಗಳೂ ಜಿಲ್ಲೆಗಳಿಗೆ ಎರಡು ದಿನ ಭೇಟಿ ನೀಡಬೇಕು. ಮೊದಲ ದಿನ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಿ ರಾತ್ರಿ ಅಲ್ಲೇ ವಾಸ್ತವ್ಯ ಹೂಡಬೇಕು. ಮಾರನೇ ದಿನ ಕ್ಷೇತ್ರ ಭೇಟಿ ನೀಡಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾಮಗಾರಿಗಳು ಹಾಗೂ ಇಲಾಖಾ ಕಾರ್ಯ ಚಟುವಟಿಕೆಗಳ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯ ನಿರ್ವಸಿದ ಅನುಭವದ ಸದ್ಬಳಕೆಯನ್ನು ಮಾಡಿಕೊಳ್ಳಲು ತಮ್ಮನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ. ಅಭಿವೃದ್ಧಿ ಯೋಜನೆಗಳು ಹಾಗೂ ಕಾರ್ಯಕ್ರಮಗಳು ನಿಗದಿತ ಅವಧಿಯಲ್ಲಿ ಹಾಗೂ ನಿರೀಕ್ಷಿಸಿದಂತೆ ಅನುಷ್ಠಾನಕ್ಕೆ ಬರಬೇಕು. ಅದಕ್ಕಾಗಿ ಮೇಲಿಂದ ಮೇಲೆ ಜಿಲ್ಲೆಗಳಿಗೆ ಭೇಟಿ ನೀಡಿ ಯೋಜನೆ ಅನುಷ್ಠಾನದ ಪ್ರತಿ ಹಂತದ ಪರಿಶೀಲನೆ ನಡೆಸಬೇಕು. ಕಾರ್ಯಕ್ರಮಗಳ ಪರಿಣಾಮಕಾರಿ  ಅನುಷ್ಠಾನಕ್ಕೆ ಕೆಳಹಂತದ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಬೇಕು. ಅನುಷ್ಠಾನದಲ್ಲಿ ಬದಲಾವಣೆ ಅವಶ್ಯಕತೆ ಇದ್ದಲ್ಲಿ, ಸಲಹೆ ಕೊಡಬೇಕು ಎಂದು ಸೂಚಿಸಿದರು.

ರಾಜ್ಯದ 160 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇರುವುದರಿಂದ ಗ್ರಾಮಾಂತರ ಪ್ರದೇಶದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು, ಜನರಿಗೆ ಉದ್ಯೋಗ ಒದಗಿಸಲು ಒತ್ತು ನೀಡಬೇಕು. ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಸರ್ಕಾರಿ ಮಾನದಂಡಗಳಂತೆ ಎಲ್ಲಾ ಕುಟುಂಬಗಳಿಗೂ ಪರಿಹಾರ ನೀಡಲಾಗಿದೆಯೇ? ಸಂತ್ರಸ್ತ ಕುಟುಂಬಗಳಿಗೆ ಪಿಂಚಣಿ ಸೌಲಭ್ಯ ವಿಸ್ತರಿಸಲಾಗಿದೆಯೇ? ಆತ್ಮಹತ್ಯೆ ಮಾಡಿಕೊಂಡ ರೈತರ ಅವಲಂಭಿತರಿಗೆ ಶಿಕ್ಷಣ ಒದಗಿಸುವ ಸರ್ಕಾರದ ಭರವಸೆ ಈಡೇರುತ್ತಿದೆಯೇ? ವೈದ್ಯಕೀಯ ಸೌಲಭ್ಯ ವಿಸ್ತರಿಸಲಾಗುತ್ತಿದೆಯೇ? ಎಂಬುದರ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಮುಖ್ಯಮಂತ್ರಿಗಳು, ಇಂತಹ ಪ್ರಕರಣಗಳನ್ನು ಇತ್ಯರ್ಥಗೊಳಿಸುವಾಗ ನಿಯಮಾವಳಿಗಿಂತ ಮಾನವೀಯತೆ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಿಎಂ ಪ್ರಶ್ನೆಗಳಿಗೆ ತಬ್ಬಿಬ್ಟಾದ ಅಧಿಕಾರಿಗಳು: ಸರ್ಕಾರಿ ಭೂಮಿ ಅತಿಕ್ರಮಣ ಕುರಿತಂತೆ ಮುಖ್ಯಮಂತ್ರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅಧಿಕಾರಿಗಳು ತಬ್ಬಿಬ್ಟಾಗಬೇಕಾಯಿತು. ಸರ್ಕಾರಿ ಭೂಮಿ ಅತಿಕ್ರಮಣದ ಬಗ್ಗೆ ಗಮನಹರಿಸಿದ್ದೀರಾ? ಹಾಗಿದ್ದರೆ ಎಷ್ಟು ಒತ್ತುವರಿ ತೆರವುಗೊಳಿಸಿದ್ದೀರಿ? ಎಲ್ಲೆಲ್ಲಿ ಭೂಮಿ ಸ್ವಾಧೀನಕ್ಕೆ ತೆಗೆದುಕೊಂಡಿದ್ದೀರಿ? ಸ್ವಾಧೀನ ಪಡಿಸಿಕೊಂಡಿರುವ ಜಮೀನು ರಕ್ಷಣೆಗೆ ಕೈಗೊಂಡಿರುವ ಕ್ರಮವೇನು? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದಾಗ ಅಧಿಕಾರಿಗಳು ಉತ್ತರಿಸಲು ಪರದಾಡಿದರು.

ಈ ಎಲ್ಲಾ ವಿಚಾರಗಳ ಬಗ್ಗೆ ಆಯಾ ಪಂಚಾಯ್ತಿ ಕಚೇರಿಗಳಲ್ಲಿ ಸೂಚನಾ ಫ‌ಲಕದಲ್ಲಿ ಪ್ರದರ್ಶಿಸಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿತ್ತು. ಈ ಬಗ್ಗೆ ಪರಿಶೀಲಿಸಿದ್ದೀರಾ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದಾಗ ಅಧಿಕಾರಿಗಳಲ್ಲಿ ಮೌನವೇ ಉತ್ತರವಾಗಿತ್ತು. ಇದರಿಂದ ಅಸಮಾಧಾನಗೊಂಡ ಮುಖ್ಯಮಂತ್ರಿಗಳು, ಕೂಡಲೇ ತಮ್ಮೆಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡು ಮಾಹಿತಿ ನೀಡುವಂತೆ ಆದೇಶಿಸಿದರು.

ಅದೇ ರೀತಿ ಜಾನುವಾರು ಗಣತಿ ಬಗ್ಗೆಯೂ ಪ್ರಶ್ನಿಸಿದ ಮುಖ್ಯಮಂತ್ರಿಗಳು, ಬರದ ಹಿನ್ನೆಲೆಯಲ್ಲಿ ಗ್ರಾಮ ಮಟ್ಟದಲ್ಲಿ ಜಾನುವಾರು ಗಣತಿ, ಮೇವಿನ ಲಭ್ಯತೆ ಬಗ್ಗೆ ಪರಿಶೀಲಿಸಲು ಸೂಚಿಸಿದ್ದೆ. ಅದರಂತೆ ಎಷ್ಟರ ಮಟ್ಟಿಗೆ ಕೆಲಸವಾಗಿದೆ? ಜಾನುವಾರುಗಳಿಗೆ ಮೇವು, ನೀರು, ನೆರಳು ಒದಗಿಸಲು ಕೈಗೊಂಡಿರುವ ಕ್ರಮಗಳೇನು? ಗೋಶಾಲೆಗಳಲ್ಲಿ ಮೇವು, ಔಷಧ ಲಭ್ಯವಿದೆಯೇ? ನೀರು, ನೆರಳು ಇದೆಯೇ? ಎಂದು ಕೇಳಿದ ಮುಖ್ಯಮಂತ್ರಿಗಳು ಈ ಬಗ್ಗೆ ಖುದ್ದು ಪರಿಶೀಲಿಸಿ ವರದಿ ನೀಡುವಂತೆಯೂ ನಿರ್ದೇಶಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಸುಭಾಷ್‌ಚಂದ್ರ ಕುಂಟಿಯಾ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ಅಭಿವೃದ್ಧಿ ಆಯುಕ್ತ ಟಿ.ಎಂ.ವಿಜಯಭಾಸ್ಕರ್‌, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್‌.ಪ್ರಸಾದ್‌, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಹೆಚ್ಚುವರಿ  ಮುಖ್ಯ ಕಾರ್ಯದರ್ಶಿ ಜಿ.ಕಲ್ಪನಾ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿಗಳಾದ ಎಲ್‌.ಕೆ.ಅತೀಕ್‌, ತುಷಾರ್‌ ಗಿರಿನಾಥ್‌ ಹಾಗೂ ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮೊಲ ಮತ್ತು ಆಮೆ ಜಾತಿಯ ಅಧಿಕಾರಿಗಳು!
ಎಲ್ಲರಿಗೂ ಒಂದೇ ರೀತಿಯ ಕೆಲಸ, ಒಂದೇ ರೀತಿಯ ಗುರಿ. ಆದರೆ, ಒಂದೆಡೆ ಮೊಲದ ಜಾತಿಯ ಅಧಿಕಾರಿಗಳು, ಇನ್ನೊಂದೆಡೆ ಆಮೆ ರೀತಿಯ ಅಧಿಕಾರಿಗಳು…!

ವಿವಿಧ ವಸತಿ ಯೋಜನೆಗಳಡಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಕಾರ್ಯವೈಖರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದು ಹೀಗೆ.

ಮನೆ ನಿರ್ಮಾಣದಲ್ಲಿ ಕೊಪ್ಪಳ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಕೊನೇ (30ನೇ) ಸ್ಥಾನದಲ್ಲಿದೆ. ಅದರಲ್ಲೂ ಗುರಿ ಸಾಧನೆಯಲ್ಲಿ ಅಜಗಜಾಂತರ ವ್ಯತ್ಯಾಸವಿದೆ. ಕೆಲವು ಜಿಲ್ಲೆಗಳಲ್ಲಿ ಶೇ. 100ರಷ್ಟು ಗುರಿ ಸಾಧಿಸಿದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಶೇ. 60-70ರ ಪ್ರಮಾಣದಲ್ಲಿದೆ. ಎಲ್ಲೆಡೆ ಒಂದೇ ರೀತಿಯ ವ್ಯವಸ್ಥೆ, ಒಂದೇ ರೀತಿಯ ಸಮಸ್ಯೆಗಳಿರುವಾಗ ಒಂದೆಡೆ ಕೆಲಸ ಸಾಧ್ಯವಾಗುತ್ತದೆಯಾದರೆ ಮತ್ತೂಂದೆಡೆ ಆಗದೇ ಇರಲು ಕಾರಣವೇನು? ಒಂದೆಡೆ ಮೊಲದ ಜಾತಿಯ, ಮತ್ತೂಂದೆಡೆ ಆಮೆ ಜಾತಿಯ ಅಧಿಕಾರಿಗಳಿದ್ದಾರೆಯೇ? ಈ ಬಗ್ಗೆ ಗಮನಹರಿಸಿ ಕೂಡಲೇ ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಆದೇಶಿಸಿದರು.

ನೋಟು ಅಮಾನ್ಯದಿಂದ ಹಣವಿದ್ದರೂ ಸಮಸ್ಯೆ
ಕೇಂದ್ರ ಸರ್ಕಾರದ ಅಪನಗದೀಕರಣದ ಪರಿಣಾಮ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದ ಮೇಲೆ ಬಿದ್ದಿದೆ. ಸರ್ಕಾರದ ಖಜಾನೆ ಹಾಗೂ ಬ್ಯಾಂಕ್‌ ಖಾತೆಗಳಲ್ಲಿ ಹಣ ಲಭ್ಯವಿದ್ದರೂ ವಹಿವಾಟಿನ ಮೇಲೆ ಆರ್ಥಿಕ ನಿರ್ಬಂಧ ಹೇರಲಾಗಿದೆ ಎಂದು ಹೇಳಿ ಕೆಲವು ರಾಷ್ಟ್ರೀಕೃತ ಬ್ಯಾಂಕ್‌ಗಳು ಫ‌ಲಾನುಭಗಳು ಹಾಗೂ ಗುತ್ತಿಗೆದಾರರಿಗೆ ನೀಡಿರುವ ಸರ್ಕಾರದ ಚೆಕ್‌ಗಳನ್ನು ಮಾನ್ಯ ಮಾಡುತ್ತಿಲ್ಲ. 

ಇದು ನಗದು ವ್ಯವಹಾರಕ್ಕೆ ಮಾತ್ರ ಸೀಮಿತವಾಗಿಲ್ಲ, ರಿಯಲ್‌ ಟೈಮ್‌ ಗ್ರಾಸ್‌ ಸೆಟಲ್‌ಮೆಂಟ್‌ (ಆರ್‌ಟಿಜಿಎಸ್‌) ಮೂಲಕ ನಿಧಿ ವರ್ಗಾವಣೆಗೂ ಸಮಸ್ಯೆ ತಂದೊಡ್ಡಿದ್ದು, ರಾಜ್ಯದ ಬ್ಯಾಂಕ್‌ಗಳಿಗೆ ಅಗತ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ನಗದು ಪೂರೈಕೆಯಾಗುತ್ತಿದೆ ಎಂಬುದನ್ನು ಸೂಚಿಸುತ್ತದೆ ಎಂಬ ಅಂಶವನ್ನು ಅಧಿಕಾರಿಗಳು ಸಭೆಯಲ್ಲಿ ಮುಖ್ಯಮಂತ್ರಿಗಳ ಗನಮಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಕೂಡಲೇ ಆರ್‌ಬಿಐ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಿ ಮಾತುಕತೆ ಫ‌ಲಿತಾಂಶವನ್ನು ನನ್ನ ಗಮನಕ್ಕೆ ತನ್ನಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದರು.

ಅಧಿಕಾರಿಗಳಿಗೆ ಸಿಎಂ ನೀಡಿದ ನಿರ್ದೇಶನಗಳು
– ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯನಿಗೆ ಏಳು ಕೆ.ಜಿ. ಅಕ್ಕಿ ವಿತರಿಸುತ್ತಿದ್ದು, ಇದು ಸರಿಯಾಗಿ ಜಾರಿಯಾಗುತ್ತಿರುವ ಬಗ್ಗೆ ಪರಿಶೀಲಿಸಬೇಕು.
– ತಹಶೀಲ್ದಾರ್‌ ಕಚೇರಿಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಸುಧಾರಿಸಿ ಅಧಿಕಾರಿಗಳು ಜನರಿಗೆ ಸ್ಪಂದಿಸುವಂತೆ ಕ್ರಮ ಕೈಗೊಳ್ಳಬೇಕು.
– ಕರ್ನಾಟಕವು ನಿಗಧಿತ ಅವಧಿಗೂ ಮುನ್ನ ಬಯಲು ಬಹಿರ್ದೆಸೆ ಮುಕ್ತ ರಾಜ್ಯವಾಗಲು ಕಾಳಜಿಯಿಂದ ಕಾರ್ಯನಿರ್ವಹಿಸಬೇಕು
– ಸ್ಥಳೀಯ ಸಂಸ್ಥೆಗಳಲ್ಲಿ ಎಂಜಿನಿಯರ್‌ಗಳ ಕೊರತೆ ಬಗೆಹರಿಸಲು ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳಿಗೆ ಜವಾಬ್ದಾರಿ ನೀಡಬೇಕು
– ಎಸ್‌ಸಿ, ಎಸ್ಟಿ ಸಮುದಾಯದ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳಬೇಕು.

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.