ಸಿಎಸ್ ಆಯ್ಕೆ ಅಧಿಕಾರ ಸಿಎಂಗೆ
Team Udayavani, Jun 29, 2018, 6:00 AM IST
ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರನ್ನು ಮತ್ತೆ ಮೂರು ತಿಂಗಳು ಅಧಿಕಾರದಲ್ಲಿ ಮುಂದುವರಿಸಲು ಕೇಂದ್ರಕ್ಕೆ ಬರೆದಿರುವ ಪತ್ರಕ್ಕೆ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಹೊಸ ಮುಖ್ಯ ಕಾರ್ಯದರ್ಶಿ ಆಯ್ಕೆ ಅಧಿಕಾರವನ್ನು ಸಚಿವ ಸಂಪುಟ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೀಡಿದೆ.
ಸಿಎಸ್ ರತ್ನಪ್ರಭಾ ಅಧಿಕಾರಾವಧಿ ಮಾರ್ಚ್ ಅಂತ್ಯಕ್ಕೆ ಕೊನೆಗೊಂಡಿದ್ದು, ಚುನಾವಣೆ ಕಾರಣದಿಂದಾಗಿ ಅವರನ್ನೇ ಮೂರು ತಿಂಗಳ ಕಾಲ ಮುಂದುವರಿಸಲು ನಿರ್ಧರಿಸಿದ್ದ ಹಿಂದಿನ ಕಾಂಗ್ರೆಸ್ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದ್ದಾಗ ಸ್ಪಂದನೆ ಸಿಕ್ಕಿತ್ತು. ಇದೀಗ ಸಮ್ಮಿಶ್ರ ಸರ್ಕಾರ ಮತ್ತೆ ಅವರನ್ನು ಮೂರು ತಿಂಗಳು ಮುಂದುವರಿಸಲು ಅವಕಾಶ ಕೋರಿ ರಾಜ್ಯ ಸರ್ಕಾರ 10 ದಿನಗಳ ಹಿಂದೆಯೇ ಕೇಂದ್ರಕ್ಕೆ ಪತ್ರ ಬರೆದಿದೆ.
ಆದರೆ, ಇದುವರೆಗೂ ಉತ್ತರ ಸಿಕಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನೇತೃತ್ವದ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದು, ಜೂ. 30ರೊಳಗೆ ಕೇಂದ್ರದಿಂದ ಉತ್ತರ ಬರದಿದ್ದಲ್ಲಿ ಹೊಸ ಮುಖ್ಯ ಕಾರ್ಯದರ್ಶಿಯನ್ನು ನೇಮಿಸುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ವಹಿಸಲಾಗಿದೆ ಎಂದು ಸಂಪುಟ ಸಭೆ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
Congress: ಶಾಸಕರಿಗೆ 100 ಕೋ.ರೂ. ಆಮಿಷಕ್ಕೆ ದಾಖಲೆ ಕೊಡಿ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.