ಅಂದೂ ಇಂದೂ ಗಮನಸೆಳೆದ ಹಸಿರು ಶಾಲು


Team Udayavani, May 18, 2018, 6:10 AM IST

ban18051807medn.jpg

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಬಿ.ಎಸ್‌. ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಿ.ಆರ್‌.ವಾಲಾ ಅವರು ಯಡಿಯೂರಪ್ಪ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಹಸಿರು ಶಾಲು ಹಾಕಿಕೊಂಡು ದೇವರು ಹಾಗೂ ರೈತರ ಹೆಸರಿನಲ್ಲಿ ಪ್ರಮಾಣ ಸ್ವೀಕಾರ ಮಾಡಿದ ಯಡಿಯೂರಪ್ಪ ವಿಜಯದ ಸಂಕೇತ ಬೀರಿದರು. ಪ್ರಮಾಣ ಸ್ವೀಕರಿಸುತ್ತಿದ್ದಂತೆ ಗಾಜಿನ ಮನೆಯಲ್ಲಿ ಸೇರಿದ್ದ ಬಿಜೆಪಿ ಶಾಸಕರು, ಮುಖಂಡರ ಕರತಾಡನ ಮುಗಿಲು ಮುಟ್ಟಿತು. ಬಿಜೆಪಿ, ನರೇಂದ್ರ ಮೋದಿ, ಯಡಿಯೂರಪ್ಪ ಪರ ಜಯಘೋಷಗಳು ಮೊಳಗಿದವು. ಐದೇ ನಿಮಿಷದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಮುಗಿಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಿಜೆಪಿ ಶಾಸಕರು, ಸಂಸದರು, ಪಾಲಿಕೆ ಸದಸ್ಯರು, ಮುಖಂಡರು ಯಡಿಯೂರಪ್ಪಗೆ ಅಭಿನಂದನೆ ಸಲ್ಲಿಸಿದರು. ಸಂಸದೆ ಶೋಭಾ ಕರಂದ್ಲಾಜೆ ಯಡಿಯೂರಪ್ಪ ಅವರಿಗೆ ಕಾಲು ಮುಟ್ಟಿ ನಮಸ್ಕರಿಸಿದರು. ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಪ್ರಕಾಶ್‌ ಜಾವಡೇಕರ್‌, ಡಿ.ವಿ.ಸದಾನಂದ ಗೌಡ, ಧರ್ಮೇಂದ್ರ ಪ್ರಧಾನ್‌, ರಾಜ್ಯ ಉಸ್ತುವಾರಿ ಮುರುಳೀಧರ್‌ ರಾವ್‌, ರಾಜ್ಯ ಮುಖಂಡರಾದ ಶ್ರೀರಾಮುಲು, ಕೆ.ಎಸ್‌. ಈಶ್ವರಪ್ಪ,ಗೋವಿಂದ ಕಾರಜೋಳ, ಆರ್‌.ಅಶೋಕ್‌, ಸಿ.ಟಿ.ರವಿ, ಅರವಿಂದ ಲಿಂಬಾವಳಿ, ರಾಮಚಂದ್ರಗೌಡ, ವಿ.ಸೋಮಣ್ಣ, ಕೆ.ಬಿ.ಶಾಣಪ್ಪಮತ್ತಿತರ ನಾಯಕರು ಉಪಸ್ಥಿತರಿದ್ದರು.

ಪ್ರಮಾಣ ವಚನ ಬಳಿಕ ಸಂಪುಟ ಸಭೆ: ಪ್ರಮಾಣ ವಚನ ಸ್ವೀಕರಿಸಿದ ನಂತರ ಬಿಎಸ್‌ವೈ ಸಂಪುಟ ಸಭೆ ನಡೆಸಿದರು. ಬಳಿಕ, ಸುದ್ದಿಗೋಷ್ಠಿ ನಡೆಸಿದರು.ನಂತರ, ಮತ್ತೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಯಡಿಯೂರಪ್ಪ ಬಹುಮತ ಸಾಬೀತು ಸಂಬಂಧ ಮುಖಂಡರ ಜತೆ ಸಮಾಲೋಚನೆ ನಡೆಸಿದರು.

ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ ನೀಡಿ, ಮುಖಂಡರ ಜತೆ ಸಮಾಲೋಚನೆ ನಡೆಸಿದರು.ಮುಗಿಲು ಮುಟ್ಟಿದ ಸಂಭ್ರಮ: ರಾಜಭವನದ ಒಳಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದರೆ ಹೊರಗೆ ಬಿಜೆಪಿ ಕಾರ್ಯಕರ್ತರ 
ಸಂಭ್ರಮ ಮುಗಿಲು ಮುಟ್ಟಿತ್ತು. ಬೆಳಗ್ಗೆಯಿಂದಲೇ ರಾಜಭವನದ ಮುಂದೆ ಜಾನಪದ ಕಲಾ ತಂಡಗಳ ಸಮೇತ ಜಮಾಯಿಸಿದ್ದ ಕಾರ್ಯಕರ್ತರು, ಬಿಜೆಪಿ ಪರ ಘೋಷಣೆ ಹಾಕಿ ನೃತ್ಯ ಪ್ರದರ್ಶಿಸಿ ಸಂತಸ ಪಟ್ಟರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಹಸ್ರಾರು ಕಾರ್ಯಕರ್ತರು ರಾಜಭವನದ ಮುಂದೆ ಒಮ್ಮೇಲೆ ಬಂದಿದ್ದರಿಂದ ನೂಕು ನುಗ್ಗಲು ಉಂಟಾಗಿ, ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.

ಸಂಚಾರ ದಟ್ಟಣೆ: ಪ್ರಮಾಣ ವಚನ ಸಮಾರಂಭದ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ರಾಜಭವನ
ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಇದರಿಂದ ರಾಜಭವನ ರಸ್ತೆ ಮೂಲಕ ಚಾಳುಕ್ಯ ಸರ್ಕಲ್‌, ಬಳ್ಳಾರಿ ರಸ್ತೆ, ಮಲ್ಲೇಶ್ವರಂ ಭಾಗಗಳಿಗೆ ಹೋಗಬೇಕಾದವರು ಪರದಾಡುವಂತಾಯಿತು.ಕಾμ ಬೋರ್ಡ್‌ ಬಳಿಯೇ ತಿರುವು ಪಡೆದು ಕನ್ನಿಂಗಹ್ಯಾಂ ರಸ್ತೆ ಮೂಲಕ ಪರ್ಯಾಯ ಮಾರ್ಗ ಅನುಸರಿಸುವಂತಾಯಿತು.

ಮುಖದಲ್ಲಿ ಆತಂಕದ ಛಾಯೆ: ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೂ ಅವರ ಮುಖದಲ್ಲಿ ನಗು ಇರಲಿಲ್ಲ.ಮುಂದೇನಾಗುವುದೋ ಎಂಬ ಆತಂಕ ಕಂಡು ಬರುತ್ತಿತ್ತು. ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲೂ ಸಪ್ಪೆಯಾಗಿಯೇ ಇದ್ದರು. ಸರ್ಕಾರ ರಚನೆಗೆ ಆಹ್ವಾನ ನೀಡಿರುವ ವಿಚಾರ ಸುಪ್ರೀಂಕೋರ್ಟ್‌
ಮೆಟ್ಟಿಲು ಹತ್ತಿರುವುದು, ಜತೆಗೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸರ್ಕಾರ ರಚನೆ ಪ್ರಯತ್ನ ಮುಂದುವರಿಸಿರುವುದರಿಂದ ಯಡಿಯೂರಪ್ಪ ಅವರಲ್ಲಿ ಎಂದಿನ ನಗು ಮಾಯವಾಗಿತ್ತು.

ಕೇಂದ್ರ ಸಚಿವರ ಕಾರ್ಯತಂತ್ರ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ನಂತರ ಇದೀಗ ಬಹುಮತ ಸಾಬೀತು ಸವಾಲು ಎದುರಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು ಕೇಂದ್ರ ಸಚಿವರ ದಂಡು ರಾಜಧಾನಿಯಲ್ಲೇ ಬೀಡು ಬಿಟ್ಟಿದೆ. ಜೆ.ಪಿ.ನಡ್ಡಾ,ಪ್ರಕಾಶ್‌ ಜಾವಡೇಕರ್‌, ಧರ್ಮೇಂದ್ರ ಪ್ರಧಾನ್‌ ಇಲ್ಲೇ ಇದ್ದಾರೆ. ಅನಂತಕುಮಾರ್‌ ಸೇರಿ ಎಲ್ಲ ಸಚಿವರ ಜತೆ ಅಮಿತ್‌ ಶಾ ನಿರಂತರ ಸಂಪರ್ಕದಲ್ಲಿದ್ದಾರೆ.

ರಾಜಭವನ, ಕೇಂದ್ರ ಸರ್ಕಾರದ ನಡುವೆ ಸಮನ್ವಯತೆ ಸಾಧಿಸುವುದು ಹಾಗೂ ತಂತ್ರಗಾರಿಕೆ ರೂಪಿಸಲು ಕೇಂದ್ರ ಸಚಿವರು ಇಲ್ಲೇ ಮೊಕ್ಕಾಂ ಹೂಡಿದ್ದಾರೆ ಎಂದು ಹೇಳಲಾಗಿದೆ.

5 ನಿಮಿಷ ಕಾರ್ಯಕ್ರಮ
ಪ್ರಮಾಣ ವಚನ ಸ್ವೀಕಾರ ಸಮಾರಂಭ 9 ಗಂಟೆಗೆ ಆರಂಭಗೊಂಡು ಐದೇ ನಿಮಿಷದಲ್ಲಿ ಮುಗಿದ ಕಾರಣ ತಡವಾಗಿ ಬಂದ ಹಲವಾರು ಶಾಸಕರು ನಿರಾಸೆಗೊಂಡರು. ರಾಜಭವನದ ಮುಂಭಾಗ ಸೇರಿ ಸಂಚಾರ ದಟ್ಟಣೆ ಹೆಚ್ಚಾದ ಕಾರಣ ಶಾಸಕರ ಕಾರುಗಳಿಗೆ ರಾಜಭವನದೊಳಗೆ ಪ್ರವೇಶ ದೊರೆಯುವ ವೇಳೆಗೆ ಸಮಾರಂಭವೇ ಮುಗಿದು ಹೋಗಿತ್ತು. ಹೀಗಾಗಿ, ತಿಪಟೂರು ಶಾಸಕ ನಾಗೇಶ್‌ ಸೇರಿ ಹಲವರು ತಡವಾಗಿ ಬಂದು ಯಡಿಯೂರಪ್ಪ ಅವರಿಗೆ ಶುಭ ಕೋರಿದರು.

ಟಾಪ್ ನ್ಯೂಸ್

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

1-eeee

1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!

1-e-eqw

Netherlands: ಇಸ್ರೇಲ್‌ ಫುಟ್ಬಾಲ್‌ ಅಭಿಮಾನಿಗಳ ಮೇಲೆ ದಿಢೀರ್‌ ದಾಳಿ!

Modi 2

BJP; ಒಂದಾಗಿದ್ದರಷ್ಟೇ ಸುರಕ್ಷೆ: ಯೋಗಿ ಬಳಿಕ ಮೋದಿ ಹೊಸ ಸ್ಲೋಗನ್‌!

putin (2)

Vladimir Putin; ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಗಳಿಸಲು ಭಾರತ ಅರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

1-eeee

1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!

1-e-eqw

Netherlands: ಇಸ್ರೇಲ್‌ ಫುಟ್ಬಾಲ್‌ ಅಭಿಮಾನಿಗಳ ಮೇಲೆ ದಿಢೀರ್‌ ದಾಳಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.