ಬಿಎಂಟಿಸಿ ಬಸ್ ಹರಿದು ಬಾಲಕ ಸಾವು
Team Udayavani, Sep 8, 2019, 3:00 AM IST
ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಒಂಭತ್ತನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ವಿಜಯನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಾಗಡಿ ರಸ್ತೆ ನಿವಾಸಿ ಆಯುಷ್(14) ಮೃತ ವಿದ್ಯಾರ್ಥಿ. ದುರ್ಘಟನೆ ಎಸಗಿದ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ನಗರದ ಶಾಲೆಯೊಂದರಲ್ಲಿ ಒಂಭತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಆಯುಷ್ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಟ್ಯೂಷನ್ ಮುಗಿಸಿಕೊಂಡು ಅಗ್ರಹಾರ ದಾಸರಹಳ್ಳಿ ಸಮೀಪದ ಬೇಕರಿಯೊಂದರಲ್ಲಿ ಸ್ವೀಟ್ ತಿಂದು ರಸ್ತೆ ಬಂದಿ ನಿಂತಿದ್ದ. ಈ ವೇಳೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಚಾಲಕ ಆಯುಷ್ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಕೆಳಗೆ ಬಿದ್ದಿದ್ದಾನೆ. ನಂತರ ಬಸ್ ಮಂದಿನ ಚಕ್ರ ವಿದ್ಯಾರ್ಥಿ ಮೇಲೆ ಹರಿದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ವೇಳೆ ಬಸ್ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣ ಪ್ರಮಾಣದಲ್ಲಿ ಗಾಯಗಳಾಗಿವೆ. ಚಾಲಕ ಮತ್ತು ನಿರ್ವಾಹಕ ಬಸ್ ಬಿಟ್ಟು ಪರಾರಿಯಾಗಿದ್ದು, ಬಸ್ ವಶಕ್ಕೆ ಪಡೆಯಲಾಗಿದೆ. ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಪ್ರಕರಣ ವಿಜಯನಗರ ಸಂಚಾರ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.