ಕ್ರಿಸ್ಮಸ್ಗಿಲ್ಲ ಪ್ರತ್ಯೇಕ ಮಾರ್ಗಸೂಚಿ
Team Udayavani, Dec 11, 2021, 11:16 AM IST
ಬೆಂಗಳೂರು: ನಗರದಲ್ಲಿ ಕ್ರಿಸ್ಮಸ್ ಆಚರಣೆಗೆ ಯಾವುದೇ ಪ್ರತ್ಯೇಕ ಮಾರ್ಗ ಸೂಚಿ ಇರುವುದಿಲ್ಲ. ಈ ಹಿಂದಿನ ನಿಯಮಗಳೇ ಮುಂದುವರಿಯಲಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಮಾರ್ಗಸೂಚಿ ಪ್ರಕಾರವೇ ಕ್ರಿಸ್ಮಸ್ ಆಚರಣೆಗೆ ಅವಕಾಶ ನೀಡಲಾಗಿದೆ. ಆದರೆ, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಚರ್ಚ್ ಆವರಣ ದಲ್ಲಿ ಜನಸಂದಣಿ ಉಂಟಾಗದಂತೆ ನೋಡಿಕೊಳ್ಳಬೇಕು. ಈ ಸಂಬಂಧ ಈಗಾಗಲೇ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ.
ಇದನ್ನೂ ಓದಿ;-ಯುವ ಶಕ್ತಿ ಉತ್ತೇಜನ ಎಲ್ಲರ ಕರ್ತವ್ಯ
ಪ್ರಾರ್ಥನೆ ಮಾಡುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಎರಡು ಡೋಸ್ ಲಸಿಕೆ ಪಡೆದಿರಬೇಕು ಎಂದು ಹೇಳಿದರು. ಈ ಸಂಬಂಧ ಯಾವುದೇ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿಲ್ಲ ಎಂದು ಪುನರುತ್ಛರಿಸಿದ ಅವರು, ನಗರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗುವುದು.
ಪ್ರಸ್ತುತ ನಿತ್ಯ 40 ಸಾವಿರಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗುತ್ತಿದ್ದು, ಅಗತ್ಯ ಇರುವ ಕಡೆ ಪರೀಕ್ಷೆ ಪ್ರಮಾಣ ಹೆಚ್ಚು ಮಾಡಲಾಗುವುದು. ಜತೆಗೆ ರೋಗ ಲಕ್ಷಣ ಕಂಡು ಬಂದವರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೆಮ್ಮು, ಶೀತ ಸೇರಿದಂತೆ ಮತ್ತಿತರ ರೋಗ ಲಕ್ಷಣಗಳಿದ್ದರೆ, ಕೋವಿಡ್ ತಪಾಸಣೆ ನಡೆಸಿಕೊಳ್ಳಬೇಕು. ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೊರೊನಾ ತಪಾಸಣೆ ನಡೆಸುವಂತೆ ಇಗಾಗಲೇ ವೈದ್ಯರಿಗೆ ಸೂಚನೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್ಗೆ ಹೈ ಕಮಾಂಡ್ ತಡೆ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.