ರೇಸ್‌ಕೋರ್ಸ್‌ ಮೇಲೆ ಸಿಐಡಿ ಅಧಿಕಾರಿಗಳ ದಾಳಿ


Team Udayavani, May 19, 2017, 11:52 AM IST

race-corse.jpg

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ನ ರೇಸ್‌ ಕುದುರೆ ಕ್ವೀನ್‌ ಲತೀಫಾಗೆ ಉದ್ದೀಪನ ಮದ್ದು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸಿಐಡಿ ಅಧಿಕಾರಿಗಳು ಕ್ಲಬ್‌ನ ಮೇಲೆ ದಾಳಿ ನಡೆಸಿ ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. 

ಕ್ವೀನ್‌ ಲತೀಫಾ ಸೇರಿದಂತೆ ಕೆಲವು ಕುದುರೆಗಳಿಗೆ ಉದ್ದೀಪನ ಮದ್ದು ನೀಡುತ್ತಿದ್ದಾರೆ ಎಂದು ಆರೋಪಿಸಿ ರೇಸ್‌ ಕುದುರೆಗಳ ಮಾಲೀಕರ ಸಂಘದ ಅಧ್ಯಕ್ಷ ಚಂದ್ರೇಗೌಡ ಇತ್ತೀಚೆಗೆ ಹೈಗ್ರೌಂಡ್ಸ್‌ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಗಂಭೀರ ಸ್ವರೂಪದ ಪ್ರಕರಣವಾಗಿದ್ದರಿಂದ ಸರ್ಕಾರ  ಹೆಚ್ಚಿನ ವಿಚಾರಣೆಗಾಗಿ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಡಿಐಜಿ ನಾಗರಾಜ್‌, ಎಸ್ಪಿ ಕುಮಾರಸ್ವಾಮಿ ನೇತೃತ್ವದ ತಂಡ ಬೆಳಗ್ಗೆ 11 ಗಂಟೆಗೆ ದಾಳಿ ನಡೆಸಿ, ಕ್ಲಬ್‌ನ ಸಿಇಒ ನಿರ್ಮಲ್‌ಪ್ರಸಾದ್‌ ಸೇರಿದಂತೆ ಕ್ಲಬ್‌ನ ಪದಾಧಿಕಾರಿಗಳ ವಿಚಾರಣೆ ನಡೆಸಿದರು.

ಪದಾಧಿಕಾರಿಗಳಿಗೆ ನೋಟಿಸ್‌: ಪ್ರಕರಣ ಸಂಬಂಧ ಕ್ಲಬ್‌ನ ಅಧ್ಯಕ್ಷ ಜಗನ್ನಾಥ್‌, ಸಿಇಒ ನಿರ್ಮಲ್‌ ಪ್ರಸಾದ್‌, ಚೀಫ್ ಸ್ಟೈಫ‌ಂಡರಿ ಆಫೀಸರ್‌ ಪ್ರದ್ಯುಮ್ನ ಸಿಂಗ್‌, ವೈದ್ಯ ಡಾ.ಮಹೇಶ್‌, ಕುದುರೆ ಮಾಲೀಕ ಅರ್ಜುನ್‌ ಸಜನಾನಿ ಮತ್ತು ಜಾಕಿ ನೀಲ್‌ ದರ್ಶನ್‌ ಅವರಿಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರೇಸ್‌ನ ದೃಶ್ಯಾವಳಿ, ಹಾರ್ಡ್‌ ಡಿಸ್ಕ್ ವಶ: ಗುರುವಾರ ಬೆಳಗ್ಗೆ ಏಕಾಏಕಿ ದಾಳಿ ನಡೆಸಿದ ಸಿಐಡಿ ಅಧಿಕಾರಿಗಳ ತಂಡ, ಕ್ಲಬ್‌ ಹಾಗೂ ಕುದುರೆ ಲಾಯವನ್ನು ಸಂಪೂರ್ಣ ವಾಗಿ ಪರಿಶೀಲನೆ ನಡೆಸಿತು. ಬಳಿಕ ರೇಸ್‌ ಜಾಗ, ಕುದುರೆ ಲಾಯ ಬಳಿಯಿದ್ದ ಸಿಸಿ ಕ್ಯಾಮೆರಾಗಳ ದೃಶ್ಯವಾಳಿಗಳು, ಕಂಪ್ಯೂಟರ್‌ಗಳ ಹಾರ್ಡ್‌ಡಿಸ್ಕ್ಗಳನ್ನು ವಶಕ್ಕೆ ಪಡೆಯಿತು. ಜತೆಗೆ ಕ್ವೀನ್‌ ಲತೀಫಾ ಭಾಗವಹಿಸಿದ್ದ ರೇಸ್‌ನ ಸಂದರ್ಭದಲ್ಲಿ ನಡೆದಿರುವ ಬೆಟ್ಟಿಂಗ್‌ ದಾಖಲೆಗಳನ್ನು ಸಹ ಸಂಗ್ರಹಿಸಲಾಗಿದೆ ಎಂದು ಸಿಐಡಿಯ ಮೂಲಗಳು ತಿಳಿಸಿವೆ.

ಏನಿದು ಉದ್ದೀಪನ ಮದ್ದು ಪ್ರಕರಣ ?
ಕುದುರೆ ಕ್ವೀನ್‌ ಲತೀಫಾ ಮಾರ್ಚ್‌ನಲ್ಲಿ ನಡೆದ ಬಿಟಿಸಿ ಟ್ರೋಫಿಯಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಅದರ ಮೂತ್ರದ ಮಾದರಿಯನ್ನು ಸಂಗ್ರಹಿಸಿ ದೆಹಲಿಯ ಪರೀûಾ ಕೇಂದ್ರಕ್ಕೆ ಕಳುಹಿಸಿದಾಗ ನಿಷೇಧಿತ ಮದ್ದನ್ನು ಕುದುರೆಗೆ ನೀಡಿರುವುದು ವರದಿಯಲ್ಲಿ ಗೊತ್ತಾಗಿತ್ತು. ಇದಾದ ಬಳಿಕ ಊಟಿಯಲ್ಲಿ ನಡೆದ ಟ್ರೋಫಿಯಲ್ಲಿ ಲತೀಫಾ ಭಾಗವಹಿಸಿತ್ತು.

ಈ ಕುದುರೆ ಮೇಲೆ ಬುಕ್ಕಿಗಳು ಕೋಟ್ಯಂತರ ರೂಪಾಯಿ ಹಣ ಹೂಡಿಕೆ ಮಾಡಿದ್ದರು. ಆದರೆ, ಲತೀಫಾ 4ನೇ ಸ್ಥಾನಗಳಿಸಿ ಸೋಲು ಕಂಡಿತ್ತು. ಈ ಮಾಹಿತಿ ಇದ್ದರೂ ಟರ್ಫ್ನ ಸಿಇಒ ನಿರ್ಮಲ್‌ ಪ್ರಸಾದ್‌ ಹಾಗೂ ಪದಾಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಿ ರೇಸ್‌ ಕುದುರೆಗಳ ಮಾಲೀಕರ ಸಂಘದ ಅಧ್ಯಕ್ಷ ದೂರು ನೀಡಿದ್ದರು. 

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.