ಸುತ್ತೋಲೆ ವಾಪಸ್ ಪಡೆದ ರಾಜ್ಯ ಸರ್ಕಾರ
Team Udayavani, Sep 18, 2018, 6:35 AM IST
ಬೆಂಗಳೂರು: ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಲೋಕಾಯುಕ್ತ ಸಂಸ್ಥೆ ಮಾಡಿರುವ ಶಿಫಾರಸುಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿದ ಸುತ್ತೋಲೆಯಲ್ಲೇ ಲೋಪ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆಯನ್ನು ವಾಪಸ್ ಪಡೆದಿದೆ.
ಲೋಕಾಯುಕ್ತ ಶಿಫಾರಸುಗಳ ಜಾರಿ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರಿಗಳು ಕೈಗೊಳ್ಳುವ ಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯ ಕಾರ್ಯದರ್ಶಿಯವರು ಸೆ. 11ರಂದು ಹೊರಡಿಸಿದ ಸುತ್ತೋಲೆಯಲ್ಲಿ ದಿನಾಂಕವನ್ನು 2017ರ ಸೆ. 11 ಎಂದು ನಮೂದಿಸಲಾಗಿತ್ತು. ಅಲ್ಲದೆ, ಸುತ್ತೋಲೆ ಸಂಖ್ಯೆಯಲ್ಲೂ “ಸಿಆಸುಇ 27 ಸೇಲೋಯು 2017′ ಎಂದು ನಮೂದಾಗಿತ್ತು. ಈ ಸುತ್ತೋಲೆಗೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರೇ ಸಹಿ ಮಾಡಿದ್ದರು.
ಆದರೆ, ಸುತ್ತೋಲೆಯಲ್ಲಿ ನಮೂದಾಗಿದ್ದ ದಿನಾಂಕದ (2017ರ ಸೆ. 11) ವೇಳೆ ಮುಖ್ಯ ಕಾರ್ಯದರ್ಶಿಯಾಗಿದ್ದವರು ಕೆ.ರತ್ನಪ್ರಭಾ. ಹಾಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು ಅಧಿಕಾರ ವಹಿಸಿಕೊಂಡಿದ್ದು 2018ರ ಜುಲೈ 1ರಂದು. ಈ ತಾಂತ್ರಿಕ ಲೋಪದ ಹಿನ್ನೆಲೆಯಲ್ಲಿ ಸುತ್ತೋಲೆ ವಾಪಸ್ ಪಡೆಯಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮೂಲಗಳು ತಿಳಿಸಿವೆ.
ಏನಿದು ಸುತ್ತೋಲೆ?:
ಸರ್ಕಾರಿ ಅಧಿಕಾರಿಗಳು, ನೌಕರರ ವಿರುದ್ಧ ಬರುವ ಆರೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಥವಾ ಉಪಲೋಕಾಯುಕ್ತರು ಲೋಕಾಯುಕ್ತ ಕಾಯ್ದೆ 12(3)ರ ಅನ್ವಯ ತನಿಖೆ ನಡೆಸಿ ಆರೋಪ ಭಾಗಷಃ ಅಥವಾ ಪೂರ್ಣ ಸಾಬೀತಾಗಿದೆ ಎಂದು ಮನದಟ್ಟಾದಾಗ ಆ ಕುರಿತಂತೆ ಅಧಿಕಾರಿಗಳು, ನೌಕರರ ವಿರುದ್ಧ ಕ್ರಮಕ್ಕೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರಕ್ಕೆ ಶಿಫಾರಸು ಮಾಡುತ್ತದೆ. ಈ ಶಿಫಾರಸನ್ನು ಸಕ್ಷಮ ಪ್ರಾಧಿಕಾರವು ಕಾಯ್ದೆಯ ನಿಯಮ 12(4)ರ ಅನ್ವಯ ಪರಿಶೀಲಿಸಿ ಮೂರು ತಿಂಗಳೊಳಗೆ ಕ್ರಮ ಕೈಗೊಂಡಿರುವ ಕುರಿತ ವರದಿಯನ್ನು ಲೋಕಾಯುಕ್ತ ಅಥವಾ ಉಪಲೋಕಾಯುಕ್ತಕ್ಕೆ ಕಳುಹಿಸಿಕೊಡಬೇಕು.
ನಿಯಮಾವಳಿಯಂತೆ ಲೋಕಾಯುಕ್ತರ ಶಿಫಾರಸಿನನ್ವಯ ಸಕ್ಷಮ ಪ್ರಾಧಿಕಾರವು ಕ್ರಮ ಕೈಗೊಳ್ಳುವಾಗ ತನ್ನ ವಿವೇಚನೆ ಬಳಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆಯಾದರೂ ನಿಯಮ ಉಲ್ಲಂ ಸಿ ಸಕ್ಷಮ ಪ್ರಾಧಿಕಾರವು ಲೋಕಾಯುಕ್ತರ ಶಿಫಾರಸನ್ನು ಆರೋಪಿತ ಅಧಿಕಾರಿ ಅಥವಾ ನೌಕರರಿಗೆ ಕಳುಹಿಸಿಕೊಟ್ಟು ಅದರ ಕುರಿತಂತೆ ಅವರಿಂದ ಲಿಖೀತ ಹೇಳಿಕೆಗಳನ್ನು ಪಡೆಯುತ್ತಿತ್ತು. ಬಳಿಕ ಈ ಲಿಖೀತ ಹೇಳಿಕೆ ಆಧರಿಸಿ ಕ್ರಮ ಕೈಗೊಳ್ಳುತ್ತಿತ್ತು.
ಈ ಲೋಪವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು ಎಲ್ಲಾ ಇಲಾಖೆ ಮುಖ್ಯಸ್ಥರಿಗೆ ಸುತ್ತೋಲೆ ಕಳುಹಿಸಿ, ಶಿಸ್ತು ಕ್ರಮ ಕುರಿತಂತೆ ಲೋಕಾಯುಕ್ತರು ಮಾಡಿದ ಶಿಫಾರಸಿನ ಕುರಿತು ಸಕ್ಷಮ ಪ್ರಾಧಿಕಾರಿಗಳು ಕ್ರಮ ಕೈಗೊಳ್ಳುವಾಗ ಶಿಫಾರಸನ್ನು ಆರೋಪಿತ ನೌಕರರಿಗೆ ಕಳುಹಿಸಿಕೊಟ್ಟು ಅವರಿಂದ ಹೇಳಿಕೆ ಪಡೆಯಲು ಅವಕಾಶವಿಲ್ಲ. ಸಕ್ಷಮ ಪ್ರಾಧಿಕಾರವೇ ತನ್ನ ವಿವೇಚನೆ ಬಳಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.