ಸಿಸ್ಕೋ ಇಂಡಿಯಾ ಕಂಪನಿಗೆ ಹುಸಿ ಬಾಂಬ್ ಕರೆ
Team Udayavani, Jun 9, 2018, 11:59 AM IST
ಬೆಂಗಳೂರು: ಮಾರತ್ಹಳ್ಳಿಯ ಸೆಸ್ನಾ ಬ್ಯುಸಿನೆಸ್ ಪಾರ್ಕ್ನಲ್ಲಿರುವ ಸಿಸ್ಕೋ ಸಿಸ್ಟಂ ಇಂಡಿಯಾ ಕಂಪನಿಗೆ ಶುಕ್ರವಾರ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಶುಕ್ರವಾರ ಮಧ್ಯಾಹ್ನ 12.07ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಹಿಂದಿಯಲ್ಲಿ ಮಾತನಾಡಿ ಇನ್ನು 10 ನಿಮಿಷಗಳಲ್ಲಿ ಕಚೇರಿಯಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ವೈಟ್ಫೀಲ್ಡ್ ವಿಭಾಗದ ಪೊಲೀಸರು, ಸಂಸ್ಥೆಯಲ್ಲಿದ್ದ ಸುಮಾರು 700 ಮಂದಿಯನ್ನು ಕೂಡಲೇ ಹೊರಗಡೆ ಕಳುಹಿಸಿದ್ದಾರೆ. ಬಳಿಕ ಶ್ವಾನ ದಳ, ಬಾಂಬ್ ನಿಷ್ಕ್ರಿàಯ ದಳ ಹಾಗೂ ಅಗ್ನಿಶಾಮಕ ಸಿಬ್ಬಂದಿ ಜತೆ ಇಡೀ ಕಂಪೆನಿಯ ಕಟ್ಟಡವನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ವೈಟ್ಫೀಲ್ಡ್ ವಿಭಾಗ ಡಿಸಿಪಿ ಅಬ್ದುಲ್ ಅಹ್ಮದ್ ಸ್ಪಷ್ಟಪಡಿಸಿದರು.
ಇಂಟರ್ನೆಟ್ ಕರೆ: ಆರೋಪಿ ಇಂಟರ್ನೆಟ್ ಕರೆ ಮಾಡಿದ್ದು, ಎಲ್ಲಿಂದ ಕರೆ ಬಂದಿದೆ ಎಂದು ತಿಳಿಯುತ್ತಿಲ್ಲ. ಅಲ್ಲದೆ, ಸಿಸ್ನಾ ಕಂಪೆಯ ಕೇಂದ್ರ ಕಚೇರಿ ಅಮೆರಿಕಾದಲ್ಲಿದೆ. ಇಲ್ಲಿನ ಟೋಲ್ ಫ್ರೀ ನಂಬರ್ಗೆ ಕರೆ ಬಂದಿದ್ದು, ಈ ವೇಳೆ ಅಪರಿಚಿತ ವ್ಯಕ್ತಿ ಹಿಂದಿಯಲ್ಲಿ ಮಾತನಾಡಿದರಿಂದ ಅಲ್ಲಿನ ಸಿಬ್ಬಂದಿ ಕೂಡಲೇ ಬೆಂಗಳೂರಿನ ಕಚೇರಿಗೆ ಕರೆಯನ್ನು ವರ್ಗಾಹಿಸಿದ್ದಾರೆ. ಹೀಗಾಗಿ ಸೈಬರ್ ಕ್ರೈಂ ಪೊಲೀಸರ ನೆರವು ಕೋರಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.