ಗುಂಡು ಹಾರಿಸಿಕೊಂಡು ಸಿಐಎಸ್‌ಎಫ್ ಪೇದೆ ಆತ್ಮಹತ್ಯೆ


Team Udayavani, Jan 17, 2017, 11:41 AM IST

suicide-constable.jpg

ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಕಾನ್‌ಸ್ಟೆಬಲ್‌ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ. ಮಹಾರಾಷ್ಟ್ರದ ಸಾಂಗ್ಲಿ ಮೂಲದ ಸುರೇಶ್‌ ವಿ.ಗಾಯಕ್‌ವಾಡ್‌ (29) ಮೃತ ಕಾನ್‌ಸ್ಟೆಬಲ್‌. 2009ರಿಂದ ಸಿಐಎಸ್‌ಎಫ್ ಕಾನ್‌ಸ್ಟೆಬಲ್‌ ಆಗಿದ್ದ ಸುರೇಶ್‌ ತ್ರಿಪುರಾದ ಅಗರ್ತಲಾ ವಿಮಾನ ನಿಲ್ದಾಣದಲ್ಲಿ ಸೇವೆ ಸಲ್ಲಿಸುತ್ತಿದ್ದರು. 

ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದ ಅವರು ವಿವಾಹಿತರಾಗಿದ್ದರೂ, ಕೆಐಎನ ಸಿಐಎಸ್‌ಎಫ್ ಕ್ವಾಟ್ರಸ್‌ನಲ್ಲಿ ಒಬ್ಬರೇ ನೆಲೆಸಿದ್ದರು.  ವಿಮಾನ ನಿಲ್ದಾಣದ ಏಳನೇ ವೀಕ್ಷಣಾ ಗೋಪುರದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6ರ ತನಕ ಸುರೇಶ್‌ ಕೆಲಸ ನಿರ್ವಹಿಸುತ್ತಿದ್ದರು. ಸೋಮವಾರ ಬೆಳಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದ ಸುರೇಶ್‌ ಎಕೆ-47 ಮಾದರಿಯ ಇನ್ಸಾಸ್‌ ರೈಫ‌ಲ್‌ ತೆಗೆದುಕೊಂಡು ಭದ್ರತೆಗೆ ತೆರಳಿದ್ದರು. ಪ್ರತಿದಿನ ಬೆಳಗ್ಗೆ 9.30ರಲ್ಲಿ ಸಿಐಎಸ್‌ಎಫ್ ಗಸ್ತು ವಾಹನ ಬಂದಾಗ ಗೋಪುರ ಮೇಲಿಂದ ಇಳಿದು ಗಸ್ತು ಸಿಬ್ಬಂದಿ ಜತೆ ಟೀ ಕುಡಿಯುತ್ತಿದ್ದರು.

ಸೋಮವಾರ ಬೆಳಗ್ಗೆ 9.15ಕ್ಕೆ ಗಸ್ತು ವಾಹನದಲ್ಲಿ ಪೇದೆ ವೆಂಕಟೇಶ್‌ ಎಂಬುವರು ಬಂದಾಗ ಸುರೇಶ್‌ ವೀಕ್ಷಣ ಗೋಪುರದಿಂದ ಇಳಿದು ಕೆಳಗೆ ಬಂದಿರಲಿಲ್ಲ. ಹೀಗಾಗಿ ವೆಂಕಟೇಶ್‌ ಗೋಪುರದ ಮೇಲೆ ಹೋಗಿ ನೋಡಿದಾಗ ರಕ್ತದ ಮಡುವಿನಲ್ಲಿ ಸುರೇಶ್‌ ಒದ್ದಾಡುತ್ತಿದ್ದರು. ತಕ್ಷಣ ಕೆಐಎ ವೈದ್ಯರನ್ನು ಕರೆಸಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕೊಂಡೊಯ್ಯಲು ಯತ್ನಿಸಲಾಯಿತಾದರೂ ಅಷ್ಟರಲ್ಲಿ ಸುರೇಶ್‌ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೌಟುಂಬಿಕ ಕಲಹ ಕಾರಣ?: ವಿವಾಹಿತರಾಗಿರುವ ಸುರೇಶ್‌ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಪತ್ನಿ ವಿಚ್ಚೇಧನ ಕೋರಿ ಮಹಾರಾಷ್ಟ್ರದಲ್ಲಿನ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಕೇಸ್‌ಗೆ ಹಾಜರಾಗಲು ಸುರೇಶ್‌ ಆಗಾಗೆ ರಜೆ ತೆಗೆದುಕೊಂಡು ಹೋಗುತ್ತಿದ್ದರು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಲ್ಲದೆ, ಕಳೆದ ನ್ಯಾಯಾಲಯದ ಅಂತಿಮ ತೀರ್ಪು ಇದೆ ಎಂದು ಹೇಳಿ ಸುರೇಶ್‌ ರಜೆ ಹಾಕಿ ಮಹಾರಾಷ್ಟ್ರಕ್ಕೆ ತೆರಳಿದ್ದರು.

ಅಲ್ಲಿಂದ ಬಂದ ಬಳಿಕ ತೀರ್ಪು ಏನಾಯ್ತು ಎಂದು ಯಾರ ಬಳಿಯೂ ಹೇಳಿಕೊಂಡಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.  ಮಹಾರಾಷ್ಟ್ರದಲ್ಲಿರುವ ಕಾನ್‌ಸ್ಟೆಬಲ್‌ ಕುಟುಂಬಕ್ಕೆ ವಿಷಯ ತಿಳಿಸಿದ್ದು, ಅವರು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಶವ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಕೆಐಎ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.