ದಿಢೀರ್‌ ವಿದ್ಯುತ್‌ ವ್ಯತ್ಯಯ ಪರದಾಡಿದ ನಾಗರಿಕರು

Team Udayavani, Nov 8, 2017, 11:35 AM IST

vidyuth.jpg

ಬೆಂಗಳೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್‌ ಸ್ಥಾವರದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದಾಗಿ ವಿದ್ಯುತ್‌ ಉತ್ಪಾದನೆ ದಿಢೀರ್‌ ಕುಸಿತ ಕಂಡಿದೆ. ಇದರಿಂದ ಬೆಂಗಳೂರಿನ ಜನತೆ ತೀವ್ರ ತೊಂದರೆ ಅನುಭವಿಸುವಂತಾಗಿದೆ.. ಬುಧವಾರವೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.

ಬೆಸ್ಕಾಂ ವ್ಯಾಪ್ತಿಗೆ ಹಂಚಿಕೆಯ ವಿದ್ಯುತ್‌ನಲ್ಲಿ 500 ಮೆಗಾ ವ್ಯಾಟ್‌ ಕೊರತೆ ಸಂಭವಿಸಿದ ಪರಿಣಾಮವಾಗಿ ವಿದ್ಯುತ್‌ ಕೊರತೆ ಉಂಟಾಗಿದೆ.  ನಗರದಲ್ಲಿ ವಿದ್ಯುತ್‌ ವ್ಯತ್ಯಯದ ಬಗ್ಗೆ ಯಾವುದೇ ಪೂರ್ವ ಮಾಹಿತಿ ಇಲ್ಲದೇ ಇರುವುದರಿಂದ ಸಾರ್ವಜನಿಕರು, ಸಣ್ಣ ಉದ್ಯಮಿಗಳು, ಹೋಟೆಲ್‌, ದಿನಿಸಿ ಅಂಗಡಿ ಮೊದಲಾದ ಸ್ಥಳಗಳಲ್ಲಿ ಸಂಜೆಯ ಅಂಧಕಾರ ದಟ್ಟವಾಗಿತ್ತು.

ಬೆಳಗ್ಗೆಯಿಂದಲೇ ವಿದ್ಯುತ್‌ ಕಣ್ಣಾಮುಚ್ಚಾಲೇ ಇದ್ದರೂ. ದಿನವಿಡೀ ವಿದ್ಯುತ್‌ ವ್ಯತ್ಯಯ ಆಗುತ್ತದೇ ಎಂದು ಯಾರೂ ಭಾವಿಸಿರಲಿಲ್ಲ. ಬೆಸ್ಕಾನಿಂದಲೂ ಈ ಬಗ್ಗೆ ಯಾವುದೇ ಸಾರ್ವಜನಿಕ ಮಾಹಿತಿ ನೀಡಿದೇ ಇರುವುದರಿಂದ ಸಮಸ್ಯೆ ಇನ್ನಷ್ಟು ಬಿಗುಡಾಯಿಸಿತ್ತು.

ಮಲ್ಲೇಶ್ವರ, ಜಯನಗರ, ಬಸವನಗುಡಿ, ಚಾಮರಾಜಪೇಟೆ, ರಾಜಾಜಿನಗರ, ಯಶವಂತಪುರ, ಶೇಷಾದ್ರಿಪುರ ಸೇರಿದಂತೆ ಹಲವು ಭಾಗದಲ್ಲಿ ಬೀದಿ ದೀಪಕ್ಕೂ ವಿದ್ಯುತ್‌ ಇರಲಿಲ್ಲ. ನಗರದ ಜನತೆ ಕೆಲಸ ಮುಗಿಸ ಸಂಜೆ ಮನೆಗೆ ಹೋಗಿ ಆರಾಮವಾಗಿ ಟೀವಿ ನೋಡಲು ಸಾಧ್ಯವಾಗಿಲ್ಲ. ಕ್ಯಾಂಡಲ್‌, ಸೋಲಾರ್‌ ಹಾಗೂ ಬ್ಯಾಟರಿ ಲೈಟ್‌ನಲ್ಲಿ  ದಿನ ದೂಡಿದ್ದಾರೆ.

ಬೆಸ್ಲಾಂ ಸಹಾಯವಾಣಿ 1912 ಸಂಪರ್ಕವೇ ಸಿಗುತ್ತಿರಲ್ಲ. ಬುಧವಾರವೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಆರ್‌ಟಿಪಿಎಸ್‌ ಸ್ಥಾವರದಲ್ಲಿ ಎರಡು ಘಟಕಗಳು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ವಿದ್ಯುತ್‌ ಉತ್ಪಾದನೆಯಲ್ಲಿ ಇಳಿಕೆಯಾಗಿದೆ. ಬೆಸ್ಕಾಂಗೆ ಹಂಚಿಕೆಯಾಗುವ ಸರಾಸರಿ ವಿದ್ಯುತ್‌ನಲ್ಲಿ ಸುಮಾರು 800 ಮೆಗಾವ್ಯಾಟ್‌ ಇಳಿಕೆಯಾಗಿದೆ.

ಐಇಎಕ್ಸ್‌ನಿಂದ ತಕ್ಷಣಕ್ಕೆ 300 ಮೆಗಾವ್ಯಾಟ್‌ ಖರೀದಿಸಿ ಪರಿಸ್ಥಿತಿ ನಿಭಾಯಿಸಲಾಗುತ್ತಿದೆ. ವಿದ್ಯುತ್‌ ವ್ಯತ್ಯಯಕ್ಕೆ ವಿಷಾದಿಸಿರುವ ಬೆಸ್ಕಾಂ ಸಹಕರಿಸುವಂತೆ ಮನವಿ ಮಾಡಿದೆ. ಪರಿಸ್ಥಿತಿ ನಿರ್ವಹಣೆಗಾಗಿ ಇಂಡಿಯನ್‌ ಎನರ್ಜಿ ಎಕ್ಸ್‌ಚೇಂಜ್‌ನಿಂದ (ಐಇಎಕ್ಸ್‌) 300 ಮೆಗಾವ್ಯಾಟ್‌ ವಿದ್ಯುತ್‌ ಪಡೆಯಲಾಗುತ್ತಿದ್ದು, ಬುಧವಾರ ಪೂರೈಕೆ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆ ಇದೆ ಎಂದು ಬೆಸ್ಕಾಂ ತಿಳಿಸಿದೆ.

ಅಭಾವಕ್ಕೆ ಕಾರಣ: ರಾಯಚೂರು ಆರ್‌ಟಿಪಿಎಸ್‌ ಸ್ಥಾವರದಲ್ಲಿ ತಾಂತ್ರಿಕ ದೋಷದಿಂದ ಎರಡು ಘಟಕಗಳು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ವಿದ್ಯುತ್‌ ಉತ್ಪಾದನೆ ಕುಸಿತ ಕಂಡಿದೆ. ಒಂದು ಘಟಕದ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಸದ್ಯದಲ್ಲೇ ಕಾರ್ಯಾರಂಭವಾಗಲಿದೆ ಎಂದು ಕೆಪಿಸಿಎಲ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

3

Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ

2

Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು

6-mahadevapura

Mahalingpur: ಹೊಸ ಬಸ್‌ ನಿಲ್ದಾಣದಲ್ಲಿ ಹಳೆ ಸಮಸ್ಯೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.