ವಿದ್ಯುತ್‌ ದರ ಏರಿಕೆ ಮಾಡಿದ್ದರ ಬಗ್ಗೆ ಬೆಸ್ಕಾಂನಿಂದ ಸ್ಪಷ್ಟನೆ

Team Udayavani, Jun 12, 2023, 3:41 PM IST

ವಿದ್ಯುತ್‌ ದರ ಏರಿಕೆ ಮಾಡಿದ್ದರ ಬಗ್ಗೆ ಬೆಸ್ಕಾಂನಿಂದ ಸ್ಪಷ್ಟನೆ

ಬೆಂಗಳೂರು: ಪ್ರತಿ ಯೂನಿಟ್‌ಗೆ 70 ಪೈಸೆ ವಿದ್ಯುತ್‌ ದರ ಪರಿಷ್ಕರಣೆ ಜತೆಗೆ ಗೃಹ ಬಳಕೆದಾರರ ಎರಡು ಹಂತಗಳ ಶುಲ್ಕ ನಿಗದಿಯಲ್ಲೂ ಮಾರ್ಪಾಡು ಮಾಡಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಆದೇಶ ಹೊರಡಿಸಿದೆ.

ಇದರಿಂದ ಜೂನ್‌ನಲ್ಲಿಯ ಬಿಲ್‌ನಲ್ಲಿ ಗ್ರಾಹಕರಿಗೆ ದರ ಹೆಚ್ಚಳ ಆಗುತ್ತಿದೆ ಎಂದು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ) ಸಮಜಾಯಿಷಿ ನೀಡಿದೆ.

ಮಾರ್ಚ್‌-ಏಪ್ರಿಲ್‌ನಲ್ಲಿ ಜಾರಿಗೆ ಬರಬೇಕಿದ್ದ ದರ ಪರಿಷ್ಕರಣೆ ಆದೇಶವನ್ನು ಮಾರ್ಚ್‌ 29, 2023ರಂದು ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನೆಲೆಯಲ್ಲಿ ಕೆಇಆರ್‌ಸಿ ತಡೆ ಹಿಡಿದಿತ್ತು, ಚುನಾವಣೆ ಮುಗಿದ ತಕ್ಷಣ, ಮೇ 12ರಂದು ದರ ಪರಿಷ್ಕರಣೆ ಮಾಡಿ ಏಪ್ರಿಲ್‌ನಿಂದ ಪೂರ್ವನ್ವ ಯವಾಗುವಂತೆ ಮೇ 12ರಂದು ಕೆಇಆರ್‌ಸಿ ಆದೇಶ ಹೊರಡಿಸಿದೆ. ಅದರಂತೆ ಹಿಂಬಾಕಿ ಯನ್ನು ಬಿಲ್‌ನಲ್ಲಿ ನೀಡಲಾಗುತ್ತಿದೆ.

ಮೂರು ಹಂತಗಳಲ್ಲಿ ದರ ನಿಗದಿ ಇತ್ತು: ಅಲ್ಲದೆ, 0-100 ಯೂನಿಟ್‌ವರೆಗೆ ಪ್ರತಿ ಯೂನಿಟ್‌ಗೆ 4.75 ರೂ. ಇದೆ. ಒಂದು ವೇಳೆ 100 ಯೂನಿಟ್‌ ಮೀರಿದರೆ, ಬಳ ಸಿದ ಅಷ್ಟೂ ಯೂನಿಟ್‌ಗೆ ಪ್ರತಿ ಯೂನಿಟ್‌ಗೆ 7 ರೂ. ದರ ಅನ್ವಯ ಆಗಲಿದೆ. ಈ ಮೊದಲು ಮೂರು ಹಂತಗಳಲ್ಲಿ ದರ ವಿಧಿಸಲಾಗುತ್ತಿತ್ತು. 0-50 ಯೂನಿಟ್‌ಗೆ ತಲಾ 4.15 ರೂ., 51-100 ಯೂನಿಟ್‌ಗೆ ತಲಾ 4.75 ರೂ. ಹಾಗೂ 100 ಯೂನಿಟ್‌ ಮೀರಿ ದರೆ ತಲಾ 7 ರೂ. ನಿಗದಿಪಡಿಸಲಾಗಿತ್ತು. ಈಗ ಇದನ್ನು ಎರಡು ಹಂತಕ್ಕೆ ಇಳಿಸಿದ್ದು, 100 ಯೂನಿಟ್‌ ದಾಟಿದರೆ ಪ್ರತಿ ಯೂನಿಟ್‌ಗೆ 7 ರೂ. ದರ ವಿಧಿಸಲು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಎಸ್ಕಾಂಗಳಿಗೆ ಅನುಮತಿ: ಇನ್ನು ಕಾಲ- ಕಾಲಕ್ಕೆ ಕೆಇಆರ್‌ಸಿ ಜಾರಿಗೊಳಿಸುವ ವಿದ್ಯುತ್‌ ದರ ಪರಿಷ್ಕರಣೆಗೂ ಮತ್ತು ಎಸ್ಕಾಂ ಗಳು ಜನರೇಟರ್‌ಗಳಿಂದ ಖರೀದಿ ಸುವ ವಿದ್ಯುತ್‌ ಮೇಲಿನ ಇಂಧನ ವೆಚ್ಚದಲ್ಲಿನ ಬೆಲೆಯಲ್ಲಿ ವ್ಯತ್ಯಾಸ ಉಂಟಾಗುವುದರಿಂದ “ಇಂಧನ ಮತ್ತು ವಿದ್ಯುತ್‌ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ’ವನ್ನು ವಿಧಿಸಲು ಕೆಇಆರ್‌ಸಿ ಎಸ್ಕಾಂಗಳಿಗೆ ಅನುಮತಿ ನೀಡುತ್ತದೆ. ಅದರಂತೆ ಇಂಧನ ಮತ್ತು ವಿದ್ಯುತ್‌ ಖರೀದಿ ವೆಚ್ಚವನ್ನು ಪ್ರತಿ ತಿಂಗಳು ಗ್ರಾಹಕರಿಂದ ಸಂಗ್ರಹಿಸಲು ಕೆಇಆರ್‌ಸಿ 2023ರ ಫೆಬ್ರವರಿ 23ರಂದು ಅಧಿಸೂಚನೆ ಹೊರಡಿಸಿತ್ತು. ಹಾಗಾಗಿ ಇಂಧನ ಮತ್ತು ವಿದ್ಯುತ್‌ ಖರೀದಿ ವೆಚ್ಚವನ್ನು ಬೆಸ್ಕಾಂ ಗ್ರಾಹ ಕರಿಗೆ ಪ್ರತಿ ಯೂನಿಟ್‌ಗೆ 59 ಪೈಸೆಯಷ್ಟು ವಿಧಿಸಲು ಆಯೋಗ ಅನುಮತಿ ನೀಡಿದೆ. ಈ ಮೊತ್ತ ವನ್ನು ಜೂನ್‌ ತಿಂಗಳಲ್ಲಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.