ಪ್ರತಿಭಟನೆ ಉದ್ದೇಶ ಸ್ಪಷ್ಟಪಡಿಸಿ

Team Udayavani, Jun 14, 2021, 6:06 PM IST

Clarify the purpose of the protest

ಬೆಂಗಳೂರು: ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ ನಡೆಸುತ್ತಿರುವ ಪ್ರತಿಭಟನೆಉದ್ದೇಶವನ್ನು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ,ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲಿಕ್ಕಾಗಿಯೋ ಅಥವಾ ಪೆಟ್ರೋಲ್‌-ಡೀಸೆಲ್‌ ಅನ್ನು ಸರಕು ಸೇವಾ ತೆರಿಗೆ (ಜಿಎಸ್ಟಿ)ಗೆಸೇರಿಸಲಿಕ್ಕಾಗಿಯೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪೆಟ್ರೋಲ್‌- ಡೀಸೆಲ್‌ ಅನ್ನು ಜಿಎಸ್ಟಿ ಅಡಿ ತಂದಾಗ ಮಾತ್ರ ತೈಲ ಬೆಲೆ ಇಳಿಕೆಗೆಸಾಧ್ಯ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ತೈಲ ಬೆಲೆಏರಿಕೆ ವಿರುದ್ಧ ದೇಶಾದ್ಯಂತ ಹೋರಾಟ ನಡೆಸಿರುವಕಾಂಗ್ರೆಸ್‌ ಕೂಡ ಅದನ್ನು ಜಿಎಸ್ಟಿಗೆ ಸೇರಿಸಬೇಕು ಎಂದುಪ್ರತಿಪಾದಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನಹೋರಾಟದ ಮೂಲ ಉದ್ದೇಶವನ್ನು ಸ್ಪಷ್ಟಪಡಿಸಬೇಕುಎಂದು ಆಗ್ರಹಿಸಿದ್ದಾರೆ.ಈ ಸಂಬಂಧ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ,ಪೆಟ್ರೋಲಿಯಂ ಖಾತೆಯ ಮಾಜಿ ಸಚಿವರೂ, ಕಾಂಗ್ರೆಸ್‌ನ ಹಿರಿಯರೂಆಗಿರುವ ನಾಯಕರೊಬ್ಬರು ಪೆಟ್ರೋಲ್‌ ಅನ್ನು ಜಿಎಸ್ಟಿಗೆ ಸೇರಿಸಬೇಕು ಎಂದುಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೇಳುವುದಾದರೆ, ಪೆಟ್ರೋಲ್‌ ಮೇಲಿನ ಮಿತಿಇಲ್ಲದ ತೆರಿಗೆ ಇಳಿಸುವುದು ಕಾಂಗ್ರೆಸ್‌ ಉದ್ದೇಶವಲ್ಲ. ಬದಲಿಗೆ ಅದನ್ನು ಜಿಎಸ್ಟಿಗೆಸೇರಿಸುವುದಷ್ಟೇ. ಆದರೆ ಅದರ ಅಪಾಯ ಕಾಂಗ್ರೆಸ್‌ಗೆ ಗೊತ್ತಿದ್ದಂತಿಲ್ಲ.

ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ ಆಗಿದೆ. ರಾಜ್ಯಗಳ ಹಿತಾಸಕ್ತಿ,ಸ್ಥಳೀಯ ಅಗತ್ಯಗಳು ಆ ಪಕ್ಷಗಳಿಗೆ ಲೆಕ್ಕಕ್ಕೇ ಇಲ್ಲ. ಪೆಟ್ರೋಲ್‌ ಅನ್ನು ಜಿಎಸ್ಟಿಗೆಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್‌, ಬಿಜೆಪಿಗಳೆರಡೂಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ ಎಂದು ಮಾಜಿಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಪೆಟ್ರೋಲ್‌ ಅನ್ನು ಜಿಎಸ್ಟಿಗೆ ಸೇರಿಸುವ ಈ ಎರಡೂ ರಾಷ್ಟ್ರೀಯ ಪಕ್ಷಗಳಹುನ್ನಾರದ ವಿರುದ್ಧ ಹೋರಾಡುವುದೂ ನಮ್ಮ ನಿಲುವು. ಈ ಸಂಬಂಧಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದುಹೇಳಿದ್ದಾರೆ.

ಟಾಪ್ ನ್ಯೂಸ್

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.