ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸಿಎಂ ತಾಕೀತು
Team Udayavani, Jan 14, 2017, 3:50 AM IST
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆ, ಸ್ವಾಯತ್ತ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾಗಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು, ಹಿಂದುಳಿದ ವರ್ಗಗಳಿಗೆ ಮೀಸಲಾಗಿರುವ ಹುದ್ದೆಗಳು ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳಿಂದ ಖಾಲಿ ಇವೆ. ಹೀಗಾಗಿ ಖಾಲಿ ಇರುವ ಬ್ಯಾಕ್‌ಲಾಗ್ ಹು¨ªೆಗಳನ್ನು ಶೀಘ್ರ ಗುರುತಿಸಿ ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸಂಘ ಸಂಸ್ಥೆಗಳ ವಿದ್ಯಾರ್ಥಿ ನಿಲಯಗಳಿಗೂ “ವಿದ್ಯಾಸಿರಿ’:
ಹಿಂದುಳಿದ ವರ್ಗಗಳಿಗೆ ಸರ್ಕಾರದ ಕಾರ್ಯಕ್ರಮಗಳು ಮುಟ್ಟಬೇಕು. ಈ ನಿಟ್ಟಿನಲ್ಲಿ “ವಿದ್ಯಾಸಿರಿ’ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಪ್ರವರ್ಗ-1, 2ಎ ವರ್ಗಕ್ಕೆ ಸೇರಿದ ಸಂಘ-ಸಂಸ್ಥೆಗಳು ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳಿಗೂ ಯೋಜನೆ ವಿಸ್ತರಿಸಬೇಕು. ಜತೆಗೆ ವಿವಿಧ ಸಂಘ- ಸಂಸ್ಥೆಗಳು ನಡೆಸುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಕ್ಕೆ ತಲಾ ಐದು ಲಕ್ಷ ರೂ.ಗಳ ನಿರ್ವಹಣಾ ಅನುದಾನವನ್ನೂ ಕೂಡಲೇ ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಆದೇಶಿಸಿದರು.
ವಿದ್ಯಾರ್ಥಿ ನಿಲಯಗಳಲ್ಲಿ ಲೈಬ್ರರಿ ಸೌಲಭ್ಯ:
ಇದೇ ವೇಳೆ ವೈದ್ಯ ಮತ್ತು ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶುಲ್ಕವನ್ನು ಸಿಇಟಿಗೆ ವಿಳಂಬವಾಗದಂತೆ ಮರು ಪಾವತಿ ಮಾಡಬೇಕು. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಮುಂದಿನ ಬಜೆಟ್‌ನಲ್ಲಿ ಹಣಕಾಸು ಸೌಲಭ್ಯ ನೀಡಲು ಕ್ರಮ ಕೈಗೊಳ್ಳಬೇಕು. ಸ್ವಂತ ಕಟ್ಟಡ ನಿರ್ಮಿಸುವಾಗ ಲೈಬ್ರರಿಗೂ ಸ್ಥಳಾವಕಾಶ ಒದಗಿಸಬೇಕು. ಇದಲ್ಲದೆ ಹಾಲಿ ಇರುವ ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಹಾಸ್ಟೆಲ…ಗಳಲ್ಲಿಯೂ ವಿದ್ಯಾರ್ಥಿಗಳಿಗೆ ಲೈಬ್ರರಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಅಡುಗೆಯವರು ಮತ್ತು ಅಡುಗೆ ಸಹಾಯಕರ ಹು¨ªೆಗಳ ಭರ್ತಿ ಪ್ರಕ್ರಿಯೆಗೆ ಕೂಡಲೇ ಚಾಲನೆ ಕೊಡಬೇಕು. 6,500 ಹು¨ªೆಗಳು ಖಾಲಿ ಇದ್ದು, 4 ಸಾವಿರ ಹು¨ªೆಗಳ ಭರ್ತಿಗೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ನೇಮಕಾತಿ ಸಂದರ್ಭದಲ್ಲಿ ಈಗಾಗಲೇ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗೂ ಆದ್ಯತೆ ಕೊಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಾಸ್ಟೆಲ…ಗಳಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಕಡೆಗೂ ನಿಗಾ ಇರಿಸುವಂತೆ ಸೂಚಿಸಿದ ಅವರು, ಹಾಸ್ಟೆಲ್‌ಗಳಲ್ಲಿ ಕೈಗೊಂಡಿರುವ ಸುಧಾರಣಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಅಧಿಕಾರಿಗಳು, ಬಾಲಕಿಯರ ಹಾಸ್ಟೆಲ…ಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇಲಾಖೆಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಬಯೋಮೆಟ್ರಿಕ್, ಆನ್‌ಲೈನ್ ಅರ್ಜಿ ವ್ಯವಸ್ಥೆ, ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್, ವಿಧಾನಪರಿಷತ್ ಸದಸ್ಯ ಎಚ್.ಎಂ. ರೇವಣ್ಣ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜು, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮೊಹಮದ್ ಮೊಹಿಸಿನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಅನುºಕುಮಾರ್ ಹಾಜರಿದ್ದರು.
ಹಾಸ್ಟೆಲ್ ವಿದ್ಯಾರ್ಥಿಗಳಿಗೆ
15 ದಿನಕ್ಕೊಮ್ಮೆ ಚಿಕನ್
ಸರ್ಕಾರವು ವಿದ್ಯಾರ್ಥಿನಿಲಯಗಳ ಭೋಜನ ವೆಚ್ಚವನ್ನು ಹೆಚ್ಚಿಸಿರುವುದರಿಂದ ಊಟ, ತಿಂಡಿಗೆ ಹೊಸ ಮೆನು ಚಾರ್ಟ್ ಸಿದ್ಧಪಡಿಸಲಾಗಿದೆ. ನೂತನ ಚಾರ್ಟ್ ಪ್ರಕಾರ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಸಿಹಿ ಊಟ, ಪ್ರತಿ ತಿಂಗಳ 1 ಮತ್ತು 15ನೇ ತಾರೀಖೀನಂದು ಚಿಕನ್, ವಾರದಲ್ಲಿ ಮೂರು ದಿನ ಬಾಳೆಹಣ್ಣು, ಮೂರು ದಿನ ಮೊಟ್ಟೆ ನೀಡಲಾಗುತ್ತದೆ. ಇದರ ಜೊತೆಗೆ ಕಡ್ಡಾಯವಾಗಿ ಕಾಫಿ, ಟೀ ಮತ್ತು ಕುರಕಲು ತಿಂಡಿ ವ್ಯವಸ್ಥೆಯೂ ಇರಲಿದೆ ಎಂದು ಅಧಿಕಾರಿಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ
RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ
Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್ ಆಸ್ಪತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.