ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ: ಪತ್ರಕರ್ತರಿಗೆ ಸಿಎಂ ಸಲಹೆ

Team Udayavani, Jul 1, 2021, 7:41 PM IST

9898226

ಬೆಂಗಳೂರು: ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟರು.

ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸುಮಾರು ಎರಡು ಶತಮಾನಗಳ ಹಿಂದೆ ಹರ್ಮನ್ ಮೊಗ್ಲಿಂಗ್ ಪ್ರಾರಂಭ ಮಾಡಿದ ಮಂಗಳೂರು ಸಮಾಚಾರ ಕನ್ನಡದ ಮೊತ್ತ ಮೊದಲ ಪತ್ರಿಕೆ. ಹೀಗೆ ಕರ್ನಾಟಕದಲ್ಲಿ ಆರಂಭಗೊಂಡ ಪತ್ರಿಕೋದ್ಯಮ ಇಂದು ಹಲವು ಸ್ಥಿತ್ಯಂತರಗಳನ್ನು ಕಂಡಿದೆ. ಅಂತರ್ಜಾಲ ಹಾಗೂ ತಂತ್ರಜ್ಞಾನದಿಂದಾಗಿ ಪತ್ರಿಕೋದ್ಯಮದ ಸ್ವರೂಪವೇ ಇಂದು ಬದಲಾಗಿದೆ. ಅದಾಗ್ಯೂ ಸತ್ಯ, ಪ್ರಾಮಾಣಿಕತೆ, ವಸ್ತುನಿಷ್ಠತೆಯ ನೆಲೆಗಟ್ಟಿನಲ್ಲಿ ವರದಿಗಳು ಮೂಡಿಬಂದಾಗ ಮಾತ್ರ ಮಾಧ್ಯಮದ ನಿಜ ಧ್ಯೇಯವನ್ನು ಸಾಧಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು ನುಡಿದರು.

ಮಾಧ್ಯಮ ಕ್ಷೇತ್ರ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಪತ್ರಕರ್ತರು ಅತ್ಯಂತ ಕ್ರಿಯಾಶೀಲರಾಗಿ ದುಡಿದಿದ್ದಾರೆ. ಅನೇಕರು ಅಸುನೀಗಿದ್ದಾರೆ. ಕೋವಿಡ್‍ನಿಂದ ಮೃತಪಟ್ಟ 31 ಪತ್ರಕತ್ರರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ  5 ಲಕ್ಷ ರೂ.ಗಳ ನೆರವು ನೀಡಲಾಗಿದೆ ಎಂದು ಅವರು ನುಡಿದರು.

ರಾಜ್ಯ ಸರ್ಕಾರ ಪತ್ರಕರ್ತರ ಕಾರ್ಯವನ್ನು ಮನಗಂಡು ಕೋವಿಡ್ ವಾರಿಯರ್ಸ್ ಎಂದು ಘೋಷಿಸಿ ಪತ್ರಿಕಾ ವಿತರಕರೂ ಸೇರಿದಂತೆ ಸುಮಾರು 25 ಸಾವಿರಕ್ಕೂ ಹೆಚ್ಚು ಪತ್ರಕರ್ತರು ಮತ್ತು  ಅವರ ಕುಟುಂಬದವರಿಗೆ ಉಚಿತವಾಗಿ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ಹಾಕಿಸಲಾಗಿದೆ. ಪತ್ರಕರ್ತರ ಕ್ಷೇಮ ನಿಧಿಗೆ 5 ಕೋಟಿ ರೂ.ಗಳ ನೆರವನ್ನು ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಜಿಲ್ಲೆಗಳ ಪತ್ರಕರ್ತರು ಈ ವರ್ಚುವಲ್ ಸಮಾರಂಭದಲ್ಲಿ ಭಾಗವಹಿಸಿ, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಮುಖ್ಯಮಂತ್ರಿಯವರ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮಾಧ್ಯಮ ಸಲಹೆಗಾರ ಎನ್. ಭೃಂಗೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ. ಪಿ.ಎಸ್. ಹರ್ಷ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.