ಪತ್ರ ಬರೆದ ಅಧಿಕಾರಿಗೇ ಸಿಎಂ ಧಮ್ಕಿ!
Team Udayavani, Mar 13, 2018, 12:00 PM IST
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬೆಂಗಳೂರು ರಕ್ಷಿಸಿ ಪಾದಯಾತ್ರೆ 10 ದಿನ ಪೂರೈಸಿದ್ದು, ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದ ಪ್ರಹ್ಲಾದ ಜೋಶಿ ಮತ್ತಿತರರು ಪಾಲ್ಗೊಂಡು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದ ಪಾದಯಾತ್ರೆ ಸೋಮವಾರ ದಾಸರಹಳ್ಳಿ ಮತ್ತು ಯಲಹಂಕ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಿತು. ದಾಸರಹಳ್ಳಿ ಕ್ಷೇತ್ರದಲ್ಲಿ ನಡೆದ ಪಾದಯಾತ್ರೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳಿಗೆ ಯಾವ ರೀತಿ ಕಿರುಕುಳ ನೀಡುತ್ತಿದೆ? ಇದರಿಂದ ಕಾನೂನು ಸುವ್ಯವಸ್ಥೆ ಹೇಗೆ ಹದಗೆಟ್ಟಿದೆ ಎಂಬುದಕ್ಕೆ ಐಪಿಎಸ್ ಅಧಿಕಾರಿಗಳ ಸಂಘ ಸರ್ಕಾರಕ್ಕೆ ಬರೆದಿರುವ ಪತ್ರ ಸಾಕ್ಷಿ ಎಂಧರು.
“ಆದರೆ, ಈ ಪತ್ರ ಆಧರಿಸಿ ಲೋಪ ಸರಿಪಡಿಸುವ ಬದಲು ಪತ್ರ ಬರೆದ ಅಧಿಕಾರಿಗೇ ಧಮಕಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಈ ಮೂಲಕ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಂದಿಸುವ ಕೆಲಸ ಮಾಡಿದ್ದಾರೆ. ಇದರಿಂದ ಅಧಿಕಾರಿಗಳು ಧೃತಿಗೆಡುವ ಅಗತ್ಯವಿಲ್ಲ. ಇನ್ನು ಕೆಲವೇ ತಿಂಗಳಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ಒದಗಿಸಲಾಗುವುದು,’ ಎಂದು ಭರವಸೆ ನೀಡಿದರು.
ಕೆಂಪಯ್ಯ ಕೈಲಿ ಪೊಲೀಸ್ ಇಲಾಖೆ: ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, “ಹಿಂದೆ ಮುಖ್ಯ ಶಿಕ್ಷಕರಂತೆ ಪೊಲೀಸ್ ಇಲಾಖೆಯನ್ನು ನಡೆಸುತ್ತಿದ್ದ ಕೆಂಪಯ್ಯ, ಇದೀಗ ಸೂಪರ್ ಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಅವಕಾಶ ನೀಡದೆ ತಾವೇ ಪೊಲೀಸ್ ಇಲಾಖೆಯನ್ನು ಮುನ್ನಡೆಸುತ್ತಿದ್ದಾರೆ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ,’ ಎಂದು ಆರೋಪಿಸಿದರು.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮಾತನಾಡಿ, ಉದ್ಯಮಿ ಪುತ್ರ ವಿದ್ವತ್ ಮೇಲೆ ಶಾಸಕರ ಪುತ್ರ ಮೊಹಮದ್ ನಲಪಾಡ್ ಹಲ್ಲೆ ನಡೆಸಿದ ಪ್ರಕರಣದ ಸಾಕ್ಷ್ಯ ಮುಚ್ಚಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಸರ್ಕಸ್ ಮಾಡುತ್ತಿದೆ.
ಆಸ್ಪತ್ರೆಯಲ್ಲಿದ್ದ ಗಾಯಾಳುವಿನ ವೈದ್ಯಕೀಯ ದಾಖಲೆಗಳು ಆರೋಪಿ ಕೈಯ್ಯಲ್ಲಿವೆ ಎಂದರೆ, ಸಾಕ್ಷ್ಯ ನಾಶ ಮಾಡುವಲ್ಲಿ ಸರ್ಕಾರದ ಪಾತ್ರವಿರುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದರು. ದಾಸರಹಳ್ಳಿಯ ಮಾರಮ್ಮ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆಯಲ್ಲಿ ಶಾಸಕ ಮುನಿರಾಜು ಸೇರಿದಂತೆ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.
ಸಂಜೆ ಯಲಹಂಕದಲ್ಲಿ ಪಾದಯಾತ್ರೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಆರ್.ಅಶೋಕ್, ಶಾಸಕ ಎಸ್.ಆರ್.ವಿಶ್ವನಾಥ್ ಮತ್ತಿತರರು ಡೊಳ್ಳು ಬಾರಿಸುತ್ತಾ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.
ಖೇಣಿಯಿಂದ ಸಿಎಂಗೆ ಲಂಚ: ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿಯಿಂದ ಲಂಚ ಪಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂಪನಿ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಬೆಂಗಳೂರು ರಕ್ಷಿಸಿ ಪಾದಯಾತ್ರೆ ವೇಳೆ ಯಲಹಂಕದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, ಅಶೋಕ್ ಖೇಣಿಯನ್ನು ಕಾಂಗ್ರೆಸ್ ಸೇರಿಸಿಕೊಂಡಿರುವುದನ್ನು ಮಲ್ಲಿಕಾರ್ಜುನ ಖರ್ಗೆಯವರೇ ಪ್ರಶ್ನೆ ಮಾಡಿದ್ದಾರೆ. ಇದರಿಂದ ಪಕ್ಷದ ಅಭಿಪ್ರಾಯ ಪಡೆಯದೆ ಖೇಣಿ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿರುವುದು ಸ್ಪಷ್ಟವಾಗಿದ್ದು, ಮುಖ್ಯಮಂತ್ರಿ ಮತ್ತು ಅವರ ಕಂಪನಿ ಖೇಣಿಯಿಂದ ಲಂಚ ಪಡೆದು ಈ ಕೆಲಸ ಮಾಡಿದೆ ಎಂದರು.
ತಮ್ಮ ಅಧಿಕಾರಾವಧಿ ಕೊನೆಗೊಳ್ಳುತ್ತಿರುವುದರಿಂದ ಎಷ್ಟು ಸಾಧ್ಯವೋ ಅಷ್ಟು ಲೂಟಿ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದಂತಿದೆ. ಅದಕ್ಕಾಗಿ ಬಡವರ ಭೂಮಿ ಲೂಟಿ ಮಾಡಿದ ಅಶೋಕ್ ಖೇಣಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿದ್ದಾರೆ ಎಂದು ಕಿಡಿ ಕಾರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನವಿರೋಧಿ ಧೋರಣೆ, ಕೆಟ್ಟ ಆಡಳಿತದಿಂದ ಕಾಂಗ್ರೆಸಿಗರೇ ರೋಸಿ ಹೋಗಿದ್ದು, ಮಾ. 23ರಂದು ರಾಜ್ಯಸಭೆ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್‌ನ ಅನೇಕ ಶಾಸಕರು, ನಾಯಕರು ಬಿಜೆಪಿಗೆ ಬರಲಿ¨ªಾರೆ ಎಂದು ಯಡಿಯೂರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.