ಎಲ್ಲರ ಅನುಭವ, ಮಾರ್ಗದರ್ಶನದ ಅಗತ್ಯ
Team Udayavani, Oct 6, 2021, 12:52 PM IST
ಬೆಂಗಳೂರು : ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಎಲ್ಲರ ಅನುಭವ, ಸಲಹೆ ಹಾಗೂ ಮಾರ್ಗದರ್ಶನದ ಅಗತ್ಯವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಂಗಳವಾರ ಸೆಂಚುರಿ ಕ್ಲಬ್‌ಗ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ನನಗೆ ನನ್ನದೇ ಜವಾಬ್ದಾರಿಗಳಿವೆ. ನಾನು ಅನೇಕ ಸವಾಲುಗಳನ್ನು ಎದುರಿಸುತ್ತಲೇ ರಾಜ್ಯವನ್ನು ಕಟ್ಟಬೇಕು. ಸರತಿಯ ಕೊನೆಯಲ್ಲಿ ನಿಂತಿರುವ ವ್ಯಕ್ತಿಗೂ ತನ್ನ ಅಹವಾಲುಗಳನ್ನು ಆಲಿಸುವ ಸರ್ಕಾರ ಇದೆ
ಎನಿಸುವಂತೆ ಕೆಲಸ ಮಾಡಬೇಕು ಎನ್ನುವ ಆಶಯ ನಮ್ಮ ಸರ್ಕಾರದ್ದು ಎಂದರು. ಸೆಂಚುರಿ ಕ್ಲಬ್‌ನಲ್ಲಿ ತಾವು ಕಳೆದ ಸಮಯವನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಸೆಂಚುರಿ ಕ್ಲಬ್ ಗೆ ತನ್ನದೇ ಸುದೀರ್ಘ ಇತಿಹಾಸವಿದೆ. ಸರ್ ಎಂ.ವಿಶ್ವೇಶ್ವರಯ್ಯ ಅವರಿದ್ದ ವ್ಯಕ್ತಿತ್ವ ಅಪರೂಪದ್ದು. ಅವರಿಂದ ಪ್ರಾರಂಭಗೊಂಡ ಈ ಕ್ಲಬ್ ಅತ್ಯಂತ ವೈಶಿಷ್ಟÂಪೂರ್ಣ ಎಂದರಲ್ಲದೆ ಈ ಪರಂಪರೆಯನ್ನು ನಾವು ಮುಂದುವರಿಸಬೇಕು.
ಇದನ್ನೂ ಓದಿ;- ಎನ್‌ಇಪಿ ಅನುಷ್ಠಾನ: ಎಚ್ಚರ ಅಗತ್ಯ
ಬೆಂಗಳೂರು ಮಾತ್ರವಲ್ಲ ದೇಶದಲ್ಲಿಯೇ ಇದು ಅತ್ಯುತ್ತಮ ಕ್ಲಬ್ ಎಂದರು. ಇಕೋ-ಇಕಾಲಜಿ: ಸೆಂಚುರಿ ಕ್ಲಬ್ ತನ್ನ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಮುಖ್ಯಮಂತ್ರಿಗಳು ಅತ್ಯಂತ ಯೋಜಿತವಾಗಿ ಅಭಿವೃದ್ಧಿಯಾಗಬೇಕು. ಇಕೋ - ಎಕಾನಮಿ ಎನ್ನುವ ಹೊಸ ಪದ ಹುಟ್ಟಿಕೊಂಡಿದ್ದು, ಆರ್ಥಿಕತೆ ಮತ್ತು ಪರಿಸರದ ಸಮತೋಲನ ಸಾಧಿಸಬೇಕು.
ಇದನ್ನು ಸಾಧಿಸಲು ವೇಗದ ಅಭಿವೃದ್ಧಿ, ಪರಿಸರದ ಮಧ್ಯೆ ಆಯ್ಕೆ ಮಾಡಿಕೊಳ್ಳಬೇಕು. ಮುಂದಿನ ಆಯವ್ಯಯದಲ್ಲಿ ಪರಿಸರದ ಕೊರತೆಗಳನ್ನು ಪಟ್ಟಿ ಮಾಡಿ, ಈ ಕೊರತೆಯನ್ನು ತುಂಬಲು ಮೊದಲ ಬಾರಿಗೆ ಪರಿಸರ ಆಯವ್ಯಯವನ್ನು ಮಂಡಿಸಲಾಗುವುದು ಎಂದರು. ಶಾಸಕ ಉದಯ್ ಗರುಡಾಚಾರ್, ಸೆಂಚುರಿ ಕ್ಲಬ್ ಅಧ್ಯಕ್ಷ ಸುರೇಶ್ ನಾಯ್ಡು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.