ಬಿಎಸ್‌ವೈ ವಿರುದ್ಧ ಹೇಳಿಕೆ : ಸಿಎಂಗೆ ನೋಟಿಸ್
Team Udayavani, Mar 16, 2018, 10:35 AM IST
ಬೆಂಗಳೂರು: ಸಾರ್ವಜನಿಕ ವೇದಿಕೆಗಳಲ್ಲಿ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಹೇಳಿಕೆ ನೀಡದಂತೆ ನಿರ್ದೇಶಿಸಲು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ರಿಟ್ ಅರ್ಜಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಲಯದಿಂದ ದೋಷ ಮುಕ್ತ ಗೊಂಡಿದ್ದರೂ ಸಹ ಸಿಎಂ ಮತ್ತಿತರರು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಸಾರ್ವಜನಿಕ ಜೀವನದಲ್ಲಿರುವ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದನ್ನು ಪ್ರತಿಬಂಧಿಸಬೇಕು ಎಂದು ಬಿ.ಎಸ್ ಯಡಿಯೂರಪ್ಪ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಕೋರಿದ್ದಾರೆ.
ಈ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ನ್ಯಾ| ಜಿ. ನರೇಂದರ್ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳಾದ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಎಂ.ಬಿ ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಸಿ.ಎಂ. ಇಬ್ರಾಹಿಂ, ವಿ.ಎಸ್ ಉಗ್ರಪ್ಪ, ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ ಸಹಿತ ಇನ್ನಿತರರಿಗೆ ನೋಟಿಸ್ ಜಾರಿಗೊಳಿಸಿತು.
ವಿಚಾರಣೆ ವೇಳೆ ಯಡಿಯೂರಪ್ಪ ಪರ ವಕೀಲರು ವಾದಿಸಿ, ಈ ಅರ್ಜಿ ಇತ್ಯರ್ಥವಾಗುವ ತನಕ ಅರ್ಜಿದಾರರ ವಿರುದ್ಧ ಹೇಳಿಕೆ ನೀಡದಂತೆ ಮಧ್ಯಾಂತರ ಆದೇಶ ನೀಡಲು ಮಾಡಿದ ಮನವಿಯನ್ನು ನ್ಯಾಯಪೀಠ ನಿರಾ ಕರಿಸಿ ವಿಚಾರಣೆಯನ್ನು ಮಾರ್ಚ್ 23ಕ್ಕೆ ಮುಂದೂಡಿತು. ಈ ಹಿಂದೆ ಬಿಎಸ್‌ವೈ ಅವರು ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.