ಅನನ್ಯ, ನಿನ್ನ ಭೇಟಿ ಮಾಡುವೆ
Team Udayavani, Jul 12, 2018, 6:00 AM IST
ಬೆಂಗಳೂರು: ಉದಯವಾಣಿ “ಜೋಶ್’ ಪುರವಣಿ ಮೂಲಕ “ನನ್ನ ಶಾಲೆ ನನ್ನ ಹೆಮ್ಮೆ’ ಎಂದು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಅಕ್ಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಎಚ್.ಎಸ್.ಅನನ್ಯಳಿಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪಂದಿಸಿದ್ದಾರೆ. ಅಷ್ಟೇ ಅಲ್ಲ, ನಾನೇ ಖುದ್ದಾಗಿ ನಿನ್ನನ್ನು ನಾನು ಖುದ್ದಾಗಿ ಭೇಟಿ ಮಾಡುತ್ತೇನೆ ಎಂದು ಪತ್ರ ಮುಖೇನವೇ ಉತ್ತರ ನೀಡಿದ್ದಾರೆ.
ಪತ್ರದ ಸಾರಾಂಶ: ಉದಯವಾಣಿಯ “ಜೋಶ್’ ಪುರವಣಿಯ”ನನ್ನ ಶಾಲೆ ನನ್ನ ಹೆಮ್ಮೆ’ ಎಂಬ ಅಂಕಣದಲ್ಲಿ ನೀನು ನನಗೆ ಬರೆದ ಪತ್ರವನ್ನು ಓದಿದೆ. ನಿನ್ನ ಆತಂಕ ಅರ್ಥವಾಗಿದೆ. ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಸುಧಾರಿಸಿ ಸರ್ಕಾರಿ ಶಾಲೆಗಳನ್ನು ವಿದ್ಯಾರ್ಥಿಗಳು ಅಪ್ಪಿಕೊಳ್ಳುವಂತೆ ಮಾಡುವುದು ನನ್ನ ಉದ್ದೇಶ. ಆಯವ್ಯಯದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದೇನೆ. ಗ್ರಾಮೀಣ ಹಂತದಲ್ಲಿ ಸರ್ಕಾರಿ ಶಾಲೆಗಳಲ್ಲಿನ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಮುಂತಾದ ಸೌಲಭ್ಯಗಳಿರಬೇಕು ಎನ್ನುವುದು ನನ್ನ ಗುರಿ. ಕನ್ನಡದ ಜೊತೆಗೆ ಇಂಗ್ಲಿಷ್‌ನ್ನು ಸಹ ಒಂದು ವಿಷಯವನ್ನಾಗಿ ಕಲಿಯಬೇಕೆನ್ನುವುದು ನನ್ನ ಆಶಯ. ಭಾಷಾ ತಜ್ಞರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ.
“ಪೋಷಕರ ಕಾನ್ವೆಂಟ್‌ನ ವ್ಯಾಮೋಹಕ್ಕೆ ಕಡಿವಾಣ ಹಾಕಿ, ಸರ್ಕಾರಿ ಶಾಲೆಗಳ ಬಗ್ಗೆ ಪ್ರೀತಿ ಬರಬೇಕು. ನೀನು ಪತ್ರ ಬರೆದಿದ್ದಕ್ಕೆ ಧನ್ಯವಾದಗಳು, ನಿನ್ನ ಓದಿನ ಬಗ್ಗೆ ಕೇಂದ್ರೀಕರಿಸು, ಒಳ್ಳೆಯದಾಗಲಿ. ನಾನು ನಿನ್ನನ್ನು ಖುದ್ದಾಗಿ ಭೇಟಿ ಮಾಡುತ್ತೇನೆ.
ಶುಭಾಶಯಗಳು
ಎಚ್.ಡಿ.ಕುಮಾರಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.