ಉಪ ಚುನಾವಣೆ ಬಳಿಕ ಬಿಜೆಪಿ ಆಟ ಬಂದ್
Team Udayavani, Oct 16, 2018, 6:50 AM IST
ಬೆಂಗಳೂರು:ಐದು ಕ್ಷೇತ್ರಗಳ ಉಪ ಚುನಾವಣೆ ಮುಂದಿನ ಲೋಕಸಭೆ ಚುನಾವಣೆಯ ಸೆಮಿಫೈನಲ್ ಎಂದು ಬಣ್ಣಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಚುನಾವಣೆ ಫಲಿತಾಂಶದ ನಂತರ ಬಿಜೆಪಿಯ ಎಲ್ಲ ಆಟಗಳು ಬಂದ್ ಆಗಲಿವೆ ಎಂದು ಹೇಳಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.10 ರ ನಂತರ ಸರ್ಕಾರ ಬೀಳುತ್ತದೆ ಎಂದು ಡೆಡ್‌ಲೈನ್ ನೀಡುತ್ತಿರುವ ಬಿಜೆಪಿ ನಾಯಕರಿಗೆ ಉಪ ಚುನಾವಣೆ ಫಲಿತಾಂಶ ಸೂಕ್ತ ಪಾಠವಾಗಲಿದೆ. ಆ ನಂತರವಾದರೂ ಬಿಜೆಪಿಯವರು ಹಗಲು ಕನಸು ಕಾಣುವುದು ಬಿಡಲಿ ಎಂದು ತಿಳಿಸಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಸಾಧನೆಗೆ ಉಪ ಚುನಾವಣೆಯಲ್ಲಿ ಮತದಾರರು ಮೈತ್ರಿಕೂಟದ ಅಭ್ಯರ್ಥಿಗಳಿಗೆ ಆರ್ಶೀವಾದ ಮಾಡಲಿದ್ದಾರೆ ಹೇಳಿದರು.
ರಾಷ್ಟ್ರ ರಾಜಕಾರಣದ ಹಿತದೃಷ್ಟಿಯಿಂದ ಶಿವಮೊಗ್ಗ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಲಿದ್ದಾರೆ. ಇದು ದೇವರ ಆಟ. ಯಾರೂ ಊಹಿಸದ ರೀತಿಯಲ್ಲಿ ನಡೆದ ಬೆಳವಣಿಗೆ ಎಂದು ತಿಳಿಸಿದರು.
ಶಿವಮೊಗ್ಗ ಕ್ಷೇತ್ರದಿಂದ ಮಧು ಬಂಗಾರಪ್ಪ ಅವರನ್ನು ಕಾಂಗ್ರೆಸ್ ಜೆಡಿಎಸ್ ನಾಯಕರೆಲ್ಲಾ ಕುಳಿತು ಚರ್ಚಿಸಿ ತೀರ್ಮಾನಿಸಿದ್ದೇವೆ. ದೇವೇಗೌಡರು, ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್‌ಗುಂಡುರಾವ್, ಈಶ್ವರ್ ಖಂಡ್ರೆ,ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ , ಡಿ.ಕೆ.ಶಿವಕುಮಾರ್ ಒಪ್ಪಿಗೆಯ ಮೇರೆಗೆ ಕಣಕ್ಕಿಳಿಸಲಾಗುತ್ತಿದೆ ಎಂದು ಹೇಳಿದರು.ಮಧು ಬಂಗಾರಪ್ಪ, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಬಿ.ಎಂ.ಫರೂಕ್ ಮತ್ತಿತರರಿದ್ದರು.
ಯಾರೂ ಶಾಶ್ವತ ಶತ್ರುಗಳಲ್ಲ
ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದರಿಂದ ನಿಮ್ಮ ಹಳೇ ಸ್ನೇಹಿತರು ವಿರೋಧ ವ್ಯಕ್ತಪಡಿಸುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ, ವೈಯಕ್ತಿಕ ಬೇಸರ, ಅಸಮಾಧಾನ ಸಹಜ. ಆದರೆ, ಅದು ಶಾಶ್ವತವಲ್ಲ. ರಾಷ್ಟ್ರದ ಹಿತದೃಷ್ಟಿಯಿಂದ ತೆಗೆದುಕೊಂಡಿರುವ ತೀರ್ಮಾನ. ಅವರೂ ಒಪ್ಪಲಿದ್ದಾರೆ. ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ ಎಂದು ಮಾರ್ಮಿಕವಾಗಿ ನುಡಿದರು.
ಉಪ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಗೆಲ್ಲುವ ವಿಶ್ವಾಸವಿದೆ.ದೇವೇಗೌಡರು, ಕುಮಾರಣ್ಣ ಹಾಗೂ ಡಿ.ಕೆ.
ಶಿವಕುಮಾರ್ ಚುನಾವಣೆಗೆ ನಿಲ್ಲುವಂತೆ ಸೂಚಿಸಿದ್ದಾರೆ. ನಾನು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಾಯಕರಾದ ಕಾಗೋಡು ತಿಮ್ಮಪ್ಪ ಸೇರಿ ಎಲ್ಲರ ಜತೆಯೂ ಮಾತನಾಡಿದ್ದೇನೆ. ನೀವು ಸ್ಪರ್ಧೆ ಮಾಡಲು ಒಪ್ಪಿರುವುದು ಸಂತೋಷ ಎಂದು ಹೇಳಿದ್ದಾರೆ. ಹೀಗಾಗಿ, ನಾನು ಕಾಂಗ್ರೆಸ್ ನಾಯಕರಿಗೂ ಕೃತಜ್ಞತೆ ಸಲ್ಲಿಸುತ್ತೇನೆ.
– ಮಧು ಬಂಗಾರಪ್ಪ, ಜೆಡಿಎಸ್ ಅಭ್ಯರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.