ಸಿಎಂ ಅವರೇ ನೇರ ಹೊಣೆ: ಬಿಜೆಪಿ ಆರೋಪ
Team Udayavani, Sep 23, 2017, 11:46 AM IST
ಬೆಂಗಳೂರು: ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿದ್ದ ಎಫ್ಐಆರ್‌ಗೆ ಹೈಕೋರ್ಟ್ ತಡೆ ನೀಡಿರುವುದು ಸರ್ಕಾರಕ್ಕೆ ಆದ ಭಾರಿ ಮುಖಭಂಗ. ಈ ಮುಖಭಂಗಕ್ಕೆ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನರವೇ ಹೊಣೆಗಾರರು ಎಂದು ಆರೋಪಿಸಿರುವ ಬಿಜೆಪಿ, ಇದಕ್ಕಾಗಿ ಸಿದ್ದರಾಮಯ್ಯನವರು ರಾಜೀನಾಮೆ ಕೊಟ್ಟು, ನ್ಯಾಯಾಲಯ, ರಾಜ್ಯದ ಜನತೆ ಹಾಗೂ ಯಡಿಯೂರಪ್ಪನವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.
ವಿಧಾನಸೌಧದಲ್ಲಿ ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಗೋ. ಮಧುಸೂಧನ್ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಜೆ. ಪುಟ್ಟಸ್ವಾಮಿ, ನಡೆಯದ ಅಪರಾಧಕ್ಕೆ ರಾಜಕೀಯ ದ್ವೇಷ ಸಾಧಿಸಲು ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯನ ಮಾತು ಕೇಳಿ, ಯಡಿಯೂರಪ್ಪ ಅವರ ವಿರುದ್ಧ ಎಸಿಬಿ ಮೂಲಕ ಎಫ್ಐಆರ್ ದಾಖಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು “ಕೆಂಪು ಮಂಗಳಾರತಿ’ ಮಾಡಿಸಿಕೊಂಡಿದ್ದಾರೆ ಎಂದು ಹರಿಹಾಯ್ದರು.
ಯಡಿಯೂರಪ್ಪನವರನ್ನು ರಾಜಕೀಯವಾಗಿ ಎದುರಿಸಲು ತಾಕತ್ತು ಇಲ್ಲದ ಸಿದ್ದರಾಮಯ್ಯ, ಹೇಗಾದರೂ ಮಾಡಿ ಅವರನ್ನು ಕಟ್ಟಿಹಾಕಬೇಕು ಎಂಬ ಉದ್ದೇಶದಿಂದ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವುದಕ್ಕೆ ಎಸಿಬಿ ದಾಖಲಿಸಿರುವ ಎಫ್ಐಆರ್‌ಗಳೇ ಸಾಕ್ಷಿ. ಆದರೆ, ಯಡಿಯೂರಪ್ಪನವರಿಗೆ ನ್ಯಾಯ ಸಿಕ್ಕಿದೆ. ಎಫ್ಐಆರ್‌ಗಳಿಗೆ ಹೈಕೋರ್ಟ್ ತಡೆ ನೀಡಿರುವುದರಿಂದ ಸರ್ಕಾರಕ್ಕೆ ಭಾರಿ ಮುಖಭಂಗ ಆಗಿದೆ. ಇದಕ್ಕೆ ಸಿದ್ದರಾಮಯ್ಯನವರೇ ನೇರ ಹೊಣೆ.
ಸರ್ಕಾರದ ಕೆಲಸ ದೇವರ ಕೆಲಸ ಎಂದು ಹೇಳುವ ವಿಧಾನಸೌಧದಲ್ಲಿ ಕುಳಿತು ಸಿದ್ದರಾಮಯ್ಯ ದೆವ್ವದ ಕೆಲಸ ಮಾಡಿದ್ದಾರೆ. ಅವರು ತಾವು ಮಾಡಿರುವ ಈ ಸುಳ್ಳು, ರಾಜಕೀಯ ಪ್ರೇರಿತ, ಕುತ್ಸಿತ ಹಾಗೂ ಹೀನ ಕೃತ್ಯಕ್ಕಾಗಿ ರಾಜೀನಾಮೆ ಕೊಡಬೇಕು. ರಾಜ್ಯದ ಜನರ ಕ್ಷಮೆ ಕೇಳಲಿ, ಅದಾಗದಿದ್ದರೆ ಯಡಿಯೂರಪ್ಪನವರ ಕ್ಷಮೆ ಕೇಳಲಿ, ಅದಕ್ಕೂ ನಾಚಿಕೆಯಾದರೆ, ನ್ಯಾಯಾಲಯದ ಕ್ಷಮೆ ಕೇಳಲಿ. ಇಲ್ಲದಿದ್ದರೆ ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನತೆ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಗೋ. ಮಧುಸೂಧನ್ ಹೇಳಿದರು.
“ಮುಖ್ಯಮಂತ್ರಿ ಸ್ಥಾನ ಯಾರಿಗೂ ಶಾಶ್ವತವಲ್ಲ. ಮುಂದೊಂದು ದಿನ ಸಿದ್ದರಾಮಯ್ಯನವರೂ ಮಾಜಿ ಆಗಲಿದ್ದಾರೆ. ಆಗ ಅವರೂ ಇದೇ ಪರಿಸ್ಥಿತಿ ಎದುರಿಸಬೇಕಾದೀತು. ಸರ್ಕಾರದ ಅಡ್ವೋಕೇಟ್ ಜನರಲ್, ನುರಿತ ವಕೀಲರ ತಂಡ ಇದ್ದಾಗ್ಯೂ ರವಿವರ್ಮಾ ಕುಮಾರ್ ಅವರನ್ನು ಈ ಪ್ರಕರಣದಲ್ಲಿ ವಾದ ಮಂಡಿಸಲು ನೇಮಕ ಮಾಡಿಕೊಂಡಿದ್ದು ಯಾಕೆ, ಅವರಿಗೆ ಹಣ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಟ್ಟರೋ ಅಥವಾ ಸರ್ಕಾರದ ಖಜಾನೆಯಿಂದಲೋ ಎನ್ನುವುದಕ್ಕೆ ಸರ್ಕಾರ ಉತ್ತರ ನೀಡಬೇಕು”.
-ಬಿ.ಜೆ. ಪುಟ್ಟಸ್ವಾಮಿ, ವಿಧಾನಪರಿಷತ್ ಸದಸ್ಯ.
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಯಡಿಯೂರಪ್ಪ ಪ್ರಕರಣದಲ್ಲಿ ನ್ಯಾಯಾಲಯ ಏಕೆ ತಡೆಯಾಜ್ಞೆ ನೀಡಿದೆ ಗೊತ್ತಿಲ್ಲ. ಮೇಲ್ಮನವಿ ಸಲ್ಲಿಸಲು ಅವಕಾಶವಿದೆ.
-ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.