ಸಿಎಂ ಸ್ಥಾನಕ್ಕೆ ಶೋಭೆಯಲ್ಲ
Team Udayavani, Feb 11, 2018, 12:03 PM IST
ಕೆಂಗೇರಿ: “ನೈಸ್ ಹಗರಣಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸದನ ಸಮಿತಿಯ ಎಲ್ಲ ಸದಸ್ಯರು ಒಕ್ಕೊರಲಿನಿಂದ ತೀರ್ಮಾನಿಸಿದ್ದರೂ ಇಷ್ಟು ದಿನ ಏಕೆ ಸುಮ್ಮನಿದ್ದೀರಿ,’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.
ಯಶವಂತಪುರ ವಿಧಾನಸಭೆ ಕ್ಷೇತ್ರದ ರಾಮಸಂದ್ರ ಜಿ.ಪಂ ಹಾಗೂ ಬಿಬಿಎಂಪಿ ಕೆಂಗೇರಿ ವಾರ್ಡ್‌ನ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, “ಸಾಮಾಜಿಕ ನ್ಯಾಯ ಒದಗಿಸುವ ದೃಷ್ಟಿಯಿಂದ ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿ ಅವರ ರಾಜಕೀಯ ಬೆಳವಣಿಗೆಗೆ ಕಾರಣನಾಗಿದ್ದೇನೆ. ಆದರೆ ಮುಖ್ಯಮಂತ್ರಿಯಾದ ಕೂಡಲೇ ಅವರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಈ ವರ್ತನೆ ಮುಖ್ಯಮಂತ್ರಿ ಸ್ಥಾನಕ್ಕೆ ಘನತೆ ತರುವುದಿಲ್ಲ,’ ಎಂದು ಹೇಳಿದರು.
ಹೇಳಿದ್ದೇನು; ಮಾಡಿದ್ದೇನು?: “ಹಗರಣ ಮುಕ್ತ ಸರ್ಕಾರ ಎಂದು ಹೇಳಿ ಅಧಿಕಾರಕ್ಕೆ ಬಂದ ನೀವು, ಬಿಬಿಎಂಪಿಯಲ್ಲಿ ಮಾಡಿದ್ದಾದರೂ ಏನು?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ ಮಾಜಿ ಪ್ರಧಾನಿ, “ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತು ಕೆಂಪಣ್ಣ ಆಯೋಗ ನೀಡಿರುವ ವರದಿಯನ್ನು ರಾಜ್ಯ ಸರ್ಕಾರ ಶೀಘ್ರವೇ ಬಿಡುಗಡೆಗೊಳಿಸಬೇಕು. ತಮ್ಮ ಸರ್ಕಾರ ರೈತರ ಪರ, ಬಡವರ ಪರ ಎಂದು ಕೇವಲ ಬಾಯಿ ಮಾತಿನಲ್ಲಿ ಹೇಳಿದರೆ ಸಾಲದು, ನುಡಿದಂತೆ ನಡೆಯುವ ಮೂಲಕ ಇಚ್ಛಾಶಕ್ತಿಯನ್ನು ಕಾರ್ಯರೂಪಕ್ಕೆ ತರಬೇಕು,’ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, “ದೇಶದ ಯುವಕರಿಗಾಗಿ 2 ಲಕ್ಷ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ, ಈಗ ಯುವ ನಿರುದ್ಯೋಗಿಗಳು ಬೀದಿ ಬದಿ ಪಕೋಡ ಹಾಗೂ ತರಕಾರಿ ಮಾರುವ ಮೂಲಕ ಉದ್ಯೋಗ ಕಂಡುಕೊಳ್ಳಿ ಎಂದು ಉಚಿತ ಸಲಹೆ ನೀಡುತ್ತಿರುವುದು ಎಷ್ಟು ಸರಿ?’ ಎಂದು ಪ್ರಶ್ನಿಸಿದರು.
“ಕರ್ನಾಟಕ ಹಸಿವು ಮುಕ್ತ ರಾಜ್ಯ ಎಂದು ಆಡಳಿತ ಪಕ್ಷದವರು ಹೇಳುತ್ತಾರೆ. ಅನ್ನಭಾಗ್ಯ ಯೋಜನೆ ತಮ್ಮ ಸರ್ಕಾರದ ಯೋಜನೆ ಎನ್ನುತ್ತಾರೆ. ಆದರೆ ಈ ಹಿಂದೆ ಜನತಾ ಪಕ್ಷದ ಅಧಿಕಾರಾವಧಿಯಲ್ಲಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ಬಡವರಿಗೆ ಒಂದು ರೂ.ಗೆ ಒಂದು ಕೆ.ಜಿ ಅಕ್ಕಿ ವಿತರಿಸುವ ಯೋಜನೆಗೆ ಚಾಲನೆ ನೀಡಿದ್ದರು. ಇಂಥ ಜನಪರ ಯೋಜನೆಯನ್ನು ಕೊಡುಗೆ ನೀಡಿದ ಶ್ರೇಯಸ್ಸು ನಮ್ಮ ಪಕ್ಷಕ್ಕೆ ಸಲ್ಲುತ್ತದೆ,’ ಎಂದರು.
“ಕಾಂಗ್ರೆಸ್ ಆಡಳಿತಾವಧಿಯಲ್ಲಿ ರಾಜ್ಯ ಭಯಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಆದರೆ, ಹಗಲಲ್ಲೇ ಡಿವೈಎಸ್‌ಪಿ ಒಬ್ಬರ ಪತ್ನಿಯ ಸರವನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗುತ್ತಾರೆ. ಹಾಗಾದರೆ ಎಲ್ಲಿದೆ ಕಾನೂನು ಸುವ್ಯವಸ್ಥೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಎಚ್‌ಡಿಕೆ, ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಆಡಳಿತ ನಡೆಸಲು ರಾಜ್ಯದ ಜನತೆ ಅವಕಾಶ ನೀಡಿದ್ದಾಗಿದೆ.
ಆದರೆ ಎರಡೂ ಪಕ್ಷಗಳೂ ಜನರ ನಿರೀಕ್ಷೆಗೆ ಸ್ಪಂದಿಸಿಲ್ಲ. ಹೀಗಾಗಿ ಈ ಬಾರಿ ರಾಜ್ಯದ ಜನತೆ ಜೆಡಿಎಸ್‌ಗೆ ಅವಕಾಶ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಯಶವಂತಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಟಿ.ಎನ್.ಜವರಾಯಿಗೌಡ, ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಅರ್.ಸಿಂಧ್ಯಾ, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಪಂಚಲಿಂಗಯ್ಯ, ಮುಖಂಡರಾದ ಜಫ್ರುಲ್ಲಾಖಾನ್, ಶಾಸಕ ಗೋಪಾಲಯ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.